Wednesday, January 27, 2021

ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೂ ನಾಮಕರಣದ ಕಿಚ್ಚು! ಶ್ರೀ ನಾರಾಯಣ ಗುರುಗಳ ಹೆಸರಿಡಲು  ಆಗ್ರಹ

ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೂ ನಾಮಕರಣದ ಕಿಚ್ಚು! ಶ್ರೀ ನಾರಾಯಣ ಗುರುಗಳ ಹೆಸರಿಡಲು  ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ  ಲೇಡಿಹಿಲ್ ಹಾಗೂ  ವಿಮಾನ ನಿಲ್ದಾಣಕ್ಕೆ ಮರುನಾಮಕರಣದ ವಿವಾದ  ಭುಗಿಲೆದ್ದಿರುವಾಗಲೇ  ಇದೀಗ ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ಗೆ ಶ್ರಿ ನಾರಾಯಣ ಗುರುಗಳ ಹೆಸರಿಡಬೇಕು ಎಂಬ ಕೂಗು ಕೇಳಿ ಬಂದಿದೆ.

ಈ ವಿಚಾರವಾಗಿ ಮಂಗಳೂರು ಮಹಾನಗರ ಪಾಲಿಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಸಿದ್ದು,  ಮನವಿ ಮಾಡಿದೆ. ಶ್ರೀ ನಾರಾಯಣ ಗುರುಗಳು ದೇಶ ಕಂಡ ಅದ್ಭುತ ದಾರ್ಶನಿಕ, ಚಿಂತಕ, ಅಪ್ಪಟ ಮಾನವತಾವಾದಿ ಹಾಗೂ ಭಾರತೀಯ ಧಾರ್ಮಿಕ ಪರಂಪರೆಗಳಲ್ಲಿ ವಿರಳವಾಗಿ ಕಾಣಬಹುದಾದ ಮಹರ್ಷಿಗಳಲ್ಲಿ ಶ್ರೀ ನಾರಾಯಣ ಗುರುಗಳು ಕೂಡ ಪ್ರಮುಖರು.

ಕೇರಳ ರಾಜ್ಯದಲ್ಲಿ ಜಾತಿ, ಮತಭೇದ ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣ ಗುರುಗಳು ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟವರು.  ಜಗತ್ತಿನಲ್ಲಿರುವುದು ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು  ಎಂಬ ತತ್ವವನ್ನು ಪ್ರತಿಪಾದಿಸಿದರು.

ಇದೀಗ ಇಂತಹ ಮಹಾನ್ ಚೇತನ, ಬ್ರಹ್ಮ ಶ್ರೀನಾರಾಯಣ ಗುರುಗಳ ಹೆಸರನ್ನು ಮಂಗಳೂರಿನ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಇಡಬೇಕು ಎನ್ನುವ  ಪ್ರಸ್ತಾವನೆಯನ್ನು ಮಂಗಳೂರು ಮಹಾ ನಗರ ಪಾಲಿಕೆ  ರಾಜ್ಯ ಸರ್ಕಾರಕ್ಕೆ ಕಳುಹಿಸಿದೆ. ಮುಂದಿನ ದಿನಗಳಲ್ಲಿ ಈ ವಿಚಾರ ಯಾವ ರೂಪ ಪಡೆದುಕೊಳ್ಳುತ್ತೆ ಎಂಬುವುದನ್ನು ಕಾದು ನೋಡ್ಬೇಕಾಗಿದೆ..

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.