Connect with us

    DAKSHINA KANNADA

    ನಾನು ರೀಲ್ ಅಲ್ಲ ರಿಯಲ್ ನಾಗವಲ್ಲಿ- ಟ್ರೋಲಿಗರನ್ನು ಎಚ್ಚರಿಸಿದ ಪ್ರತಿಭಾ ಕುಳಾಯಿ..!

    Published

    on

    ಮಂಗಳೂರು: ‘ನನ್ನನ್ನು ನಾಗವಲ್ಲಿ ಅಂತ ಟ್ರೋಲ್ ಮಾಡುತ್ತಿದ್ದಾರೆ. ನಾನು ಆ ಸಿನಿಮಾದಲ್ಲಿರುವ ನಾಗವಲ್ಲಿ ಅಲ್ಲ. ನಾನು ಒರಿಜಿನಲ್ ನಾಗವಲ್ಲಿ. ಈ ಟ್ರೋಲ್‌ನ್ನು ರಾಜಕೀಯ ಬೆಳವಣಿಗೆಗೆ ಪೂರಕ ಅಂತ ನಾನು ಧನಾತ್ಮಕವಾಗಿ ಸ್ವೀಕರಿಸುತ್ತೇನೆ.

    ನನ್ನ ಮಾನಭಂಗ ಮಾಡುವಂತೆ ಅಶ್ಲೀಲವಾಗಿ ಟ್ರೋಲ್ ಮಾಡಿದವನ ಮನೆಗೆ ಹೋಗಿ ಅವನಲ್ಲೂ ಕ್ಷಮೆ ಕೇಳುವಂತೆ ಮಾಡಿ ಆ ವೀಡಿಯೋವನ್ನು ನಾನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇನೆ’ ಎಂದು ಸಾಮಾಜಿಕ ಕಾರ್ಯಕರ್ತ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸುರತ್ಕಲ್ ಟೋಲ್‌ಗೇಟ್‌ ವಿರುದ್ಧ ಕಳೆದ ಕೆಲ ದಿನಗಳ ಹಿಂದೆ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಆಶ್ರಯದಲ್ಲಿ ನಡೆದ ಉಗ್ರ ಪ್ರತಿಭಟನೆ ಬಳಿಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಹಿಳಾ ಪ್ರತಿಭಟನಾಕಾರನ್ನು ಗುರಿಯಾಗಿಸಿ ಕೆಟ್ಟ ಪದಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುವವರ ಮೇಲೆ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಕೆಂಡಮಂಡಲವಾಗಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

    ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ ಜಾಲತಾಣದಲ್ಲಿ ತೇಜೋವಧೆ ಮಾಡುವುದನ್ನು ಖಂಡಿಸಿದ್ದಾರೆ. ‘ನನ್ನನ್ನು ನಾಗವಲ್ಲಿ ಅಂತ ಟ್ರೋಲ್ ಮಾಡುತ್ತಿದ್ದಾರೆ. ನಾನು ಆ ಸಿನಿಮಾದಲ್ಲಿರುವ ನಾಗವಲ್ಲಿ ಅಲ್ಲ.

    ನಾನು ಒರಿಜಿನಲ್ ನಾಗವಲ್ಲಿ. ಈ ಟ್ರೋಲ್‌ನ್ನು ರಾಜಕೀಯ ಬೆಳವಣಿಗೆಗೆ ಪೂರಕ ಅಂತ ನಾನು ಧನಾತ್ಮಕವಾಗಿ ಸ್ವೀಕರಿಸುತ್ತೇನೆ. ನನ್ನ ಮಾನಭಂಗ ಮಾಡುವಂತೆ ಅಶ್ಲೀಲವಾಗಿ ಟ್ರೋಲ್ ಮಾಡಿದವನ ಮನೆಗೆ ಹೋಗಿ ಅವನಲ್ಲೂ ಕ್ಷಮೆ ಕೇಳುವಂತೆ ಮಾಡಿ ಆ ವೀಡಿಯೋವನ್ನು ನಾನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

    ‘ನಾನು ರಾಣಿ ಅಬ್ಬಕ್ಕನ ಊರಿನಲ್ಲಿ ಹುಟ್ಟಿದವಳು. ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ನನ್ನ ಧೈರ್ಯಕ್ಕೆ ಮುಖ್ಯವಾದ ಕಾರಣ ನನ್ನ ವಿದ್ಯೆ.

    ಮಹಿಳಾ ಸಬಲೀಕರಣ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ನಾನು, ಇಷ್ಟೆಲ್ಲಾ ಕಲಿತ್ತಿರುವ ನಾನು ಇಂತಹ ಟ್ರೋಲ್‌ಗಳಿಗೆಲ್ಲ ಜಗ್ಗುವಳಲ್ಲ.

    ಟೋಲ್‌ಗೇಟ್ ವಿರೋಧಿ ಹೋರಾಟದಲ್ಲಿ ನಾನು ಇನ್ನು ಮುಂದೆ ಕೂಡಾ ಭಾಗವಹಿಸುತ್ತೇನೆ. ಏಕೆಂದರೆ ಇದು ಲಂಚ ಮಂಚದ ವಿಷಯ ಅಲ್ಲ. ಬಿಜೆಪಿ ನಾಯಕರ ವೀಡಿಯೋ ವೈರಲ್ ಆಗಿರುವುದು ಎಲ್ಲರಿಗೂ ಗೊತ್ತೇ ಇದೆ. ಯಾರೋ ಟ್ರೋಲ್ ಮಾಡಿ ಇದು ಕಾಂತಾರ 2 ಅಂತ ಹೇಳಿದ್ದಾರೆ.

    ನಾನು ಹೇಳ್ತೇನೆ ಇದು ಕಾಂತಾರ 2 ಅಲ್ಲ. ಕಾಂತಾರ 3. ಕಾಂತಾರ 1 ಆದದ್ದು ಕೋಡಿಕೆರೆಯ ಗೂಂಡಾಗಳನ್ನು 8ವರ್ಷಗಳ ಹಿಂದೆ ಮಟ್ಟ ಹಾಕಿದ್ದಾಗ. ಕಾಂತಾರ 2-ಅಬ್ದುಲ್ ಸತ್ತಾರ್ ಎನ್ನುವ ಕಾಮುಕ ಹೆಣ್ಣು ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾಗ ಅವನಿಗೆ ಹೊಡೆದಿದ್ದಾಗ. ಈ ಹೋರಾಟದಲ್ಲಿ ನಾನು ಭಾಗವಹಿಸಿದ್ದು ಕಾಂತಾರ 3. ಇನ್ನು ಮುಂದೆ ಕಾಂತಾರ 4 ಯಾವುದು ಕೇಳಿದ್ರೆ ಸುರತ್ಕಲ್‌ನಲ್ಲಿ ಬೆಳೆದು ನಿಂತಿರುವ ಬೃಹತ್ ಕಟ್ಟಡ. ಕಾಂತಾರ 5 MRPLನಲ್ಲಿ ನಮ್ಮ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ ಅದರ ವಿರುದ್ದ ಹೋರಾಟ ಎಂದರು.

    ಇನ್ನೊಮ್ಮೆ ನಾನು ನಾಗವಲ್ಲಿಯ ರೂಪ ತಾಳುತ್ತೇನೆ. ಬಿಜೆಪಿಯವರು ಮಾತೆತ್ತಿದ್ರೆ ಧರ್ಮ, ಹೆಣ್ಣು ಮಕ್ಕಳು ಗೌರವ ಅಂತಾರಲ್ವಾ. ಅವರ ಸಂಸ್ಕೃತಿ ಈಗ ಸೋಷಿಯಲ್ ಮೀಡಿಯಾದಲ್ಲಿ ಎದ್ದು ಕಾಣುತ್ತಿದೆ. ಹೆಣ್ಣು ಮಕ್ಕಳಿಗೆ ಕಾಳಿ ದೇವಿ ಎಂಬ ಎರಡು ರೂಪವಿದೆ.

    ನಾನು ಆ ಹೋರಾಟದಲ್ಲಿ ಯಾವುದೇ ಬಿಜೆಪಿ ಮುಖಂಡರಿಗೆ ಧಿಕ್ಕಾರ ಕೂಗಲಿಲ್ಲ. ಹತ್ತಾರು ಮಂದಿ ಪೊಲೀಸರು ಬಂದು ನನ್ನ ಹಿಡಿದಾಗ ಮಾನಕ್ಕೆ ಹೆದರಿ ನಾನು ಕಿರುಚಿದ್ದೇನೆಯೇ ಹೊರತು ಇನ್ನ್ಯಾವುದಕ್ಕೂ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು ಟ್ರೋಲ್ ಮಾಡಿದವನ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುವ ಹಕ್ಕಿದೆ.

    ಮುಂಬರುವ ದಿನದಲ್ಲಿ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ಇದು ಇನ್ನೂ ವಿಕೋಪಕ್ಕೆ ಹೋದಾಗ ಬಿಜೆಪಿಯ ನಾಯಕರು ಬಂದು ‘ಇಲ್ಲ ಇಲ್ಲ, ಅದು ಬಿಜೆಪಿ ಕಾರ್ಯಕರ್ತರು ಮಾಡಿದ್ದಲ್ಲ, ಯಾರೋ ಜಿಹಾದಿಗಳು ಮಾಡಿರಬೇಕು’ ಎಂದು ಹೇಳಬಹುದೇನೋ.

    ನಾನು ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ಕೊಡುತ್ತಿದ್ದೇನೆ. ಅವರೂ ನ್ಯಾಯ ಕೊಡುವಲ್ಲಿ ವಿಫಲವಾದರೆ ಮುಂದೆ ಯಾವ ಹೆಜ್ಜೆ ಇಡಬೇಕು ಎಂಬ ಅರಿವೂ ನನಗಿದೆ’ ಎಂದು ಪ್ರತಿಭಾ ಕುಳಾಯಿ ಟ್ರೋಲಿಗರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending