ಮಂಗಳೂರಿಗೆ ಆಗಮಿಸಿದ ಅನಿವಾಸಿ ಭಾರತೀಯರನ್ನ ಬರಮಾಡಿಕೊಂಡ ಪರಿಗೆ ವ್ಯಾಪಕ ಪ್ರಶಂಸೆ..
ಮಂಗಳೂರಿಗೆ ಆಗಮಿಸಿದ ಅನಿವಾಸಿ ಭಾರತೀಯರನ್ನ ಬರಮಾಡಿಕೊಂಡ ಪರಿಗೆ ವ್ಯಾಪಕ ಪ್ರಶಂಸೆ..
ಮಂಗಳೂರು: ಕೋವಿಡ್ 19 ವೈರಸ್ ಕಾರಣದಿಂದ ಅತಂತ್ರರಾಗಿದ್ದ ದುಬೈ ಕನ್ನಡಿಗರನ್ನು ರಕ್ಷಿಸಿ ತಾಯ್ನಾಡಿಗೆ ಹೊತ್ತು ತಂದ ಎರಡನೇ ವಿಮಾನ ನಿನ್ನೆ (ಮೇ 18) ಮಂಗಳೂರು ತಲುಪಿದೆ.
ಈ ಸಂದರ್ಭದಲ್ಲಿ ಅನಿವಾಸಿ ಕನ್ನಡಿಗರನ್ನು ಬರಮಾಡಿಕೊಳ್ಳುವ ಸಮರ್ಪಕ ವ್ಯವಸ್ಥೆಯ ಪರಿಶೀಲನೆಗೆ ಖುದ್ದು ವಿಮಾನ ನಿಲ್ಲಾಣದಲ್ಲಿ ಹಾಜರಾದ,
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ನಡೆಗೆ ಹ್ರತ್ಪೂರ್ವಕವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಅನಿವಾಸಿ ಕನ್ನಡಿಗರ ಒಕ್ಕೂಟ ಯುಎಯಿ ಇದರ ಅಧ್ಯಕ್ಷ ಅಬ್ದುಲ್ ರಷೀದ್ ಬಿಜೈ ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರೊಂದಿಗೆ ಹಾಜರಿದ್ದ NRI ಸಮನ್ವಯ ಅಧಿಕಾರಿ ರಾಹುಲ್ IAS ಮತ್ತು ಇತರ ಎಲ್ಲಾ ಅಧಿಕಾರಿಗಳ ನಡೆ ಪ್ರಶಂಸನೀಯ ಎಂದವರು ತಿಳಿಸಿದ್ದಾರೆ.
ಮಂಗಳೂರಿಗೆ ಆಗಮಿಸಿದ ಪ್ರಥಮ ತಂಡವು ತಮಗಾದ ಕಹಿ ಅನುಭವಗಳನ್ನು ಸಾರ್ವಜನಿಕವಾಗಿ ಹಂಚಿಕೊಂಡ ನಂತರ, ಜಿಲ್ಲಾಡಳಿತ ಎರಡನೆಯದಾಗಿ ಆಗಮಿಸಿದ ತಂಡಕ್ಕೆ ಸೂಕ್ತ ವ್ಯವಸ್ಥೆಯ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ,
ಯಾವುದೇ ಗೊಂದಲಗಳಿಗೆ ಎಡೆಮಾಡದೆ ಅತ್ಯುತ್ತಮ ಕ್ವಾರಂಟೈನ್ ವ್ಯವಸ್ಥೆ ಮಾಡಿಕೊಟ್ಟ ಕಾರಣದಿಂದ, ಗಲ್ಫ್ ರಾಷ್ಟ್ರಗಳಲ್ಲಿ ಸಂಕಷ್ಟದಲ್ಲಿರುವ,
ಇನ್ನಷ್ಟು ಕನ್ನಡಿಗರು ನೆಮ್ಮದಿಯಿಂದ ತಾಯ್ನಾಡಿಗೆ ಮರಳಲು ಸಹಕಾರಿಯಾಗಲಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅನಿವಾಸಿಗಳು ಸಂಕಷ್ಟದಲ್ಲಿರುವ ಈ ಅವಸ್ಥೆಯಲ್ಲಿ ಊರಿಗೆ ಮರಳುವಾಗ ಅವರ ಬೆನ್ನ ಹಿಂದೆ ಸಹಕಾರಿಯಾಗಿ ನಿಂತಿರುವ ದಕ್ಷಿಣ ಕನ್ನಡ ಜಿಲ್ಲೆಯಾ ಎಲ್ಲಾ ಸಾಮಾಜಿಕ ಸಂಘಟನೆಗಳಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
On behalf of Anivasi Kannadigara Okkoota UAE 🇦🇪 we heartly congratulate for the kind attribute shown by @dkdc9 of being present for receiving the stranded NRIs from Dubai's second flight today. Thanks 2 DK DC and other officials @aaimlrairport for tender support.#GulfKannadigas pic.twitter.com/2dFqN8JseR
— Abdul Rasheed Bejai (@Rasheed_Bejai) May 18, 2020
DAKSHINA KANNADA
ತ್ರಿಶೂರ್ ಪೂರಂ..! ದೇಶದ ಹೆಮ್ಮೆಯ ಉತ್ಸವ..!
ವಿವಿಧತೆಯಲ್ಲಿ ಏಕತೆ ಕಾಣುವ ನಮ್ಮ ದೇಶ ಹಲವು ಸಂಸ್ಕೃತಿ, ಕಲೆ, ಆಚರಣೆ, ಭಾಷೆ, ಜಾತಿ, ಧರ್ಮದ ಮೂಲಕ ವಿಶ್ವದ ಗಮನ ಸೆಳೆದಿದೆ. ದಿಪಾವಳಿ, ಹೋಳಿ, ಈದ್ , ಕ್ರಿಸ್ಮಸ್, ಹೀಗೆ ಹಲವು ಹಬ್ಬಗಳು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆದ್ರೆ, ಇನ್ನೂ ಕೆಲವು ಹಬ್ಬಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿದೆ. ಅದರಲ್ಲಿ ವಿಶೇಷ ಹಬ್ಬವಾಗಿ ಕೇರಳದಲ್ಲಿ ಆಚರಿಸುವ ತ್ರಿಶೂರ್ ಪೂರಂ ಸದ್ಯ ಏಷ್ಯಾದಲ್ಲೇ ಅತೀ ಹೆಚ್ಚು ಜನರು ಭಾಗವಹಿಸುವ ಉತ್ಸವವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ.
ಏನಿದು ತ್ರಿಶೂರ್ ಪೂರಂ ಹಬ್ಬ
ತ್ರಿಶೂರ್ ಪೂರಂ ಅನ್ನೋದು ತ್ರಿಶೂರಿನ ಶಿವ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ. ಮಲೆಯಾಳಂ ಕ್ಯಾಲೆಂಡರ್ ಪ್ರಕಾರ ಪೂರಂ ನಕ್ಷತ್ರದಲ್ಲಿ ಚಂದ್ರೋದಯದ ವೇಳೆಯಲ್ಲಿ ನಡೆಯುವ ಉತ್ಸವ ಇದು. ತ್ರಿಶೂರ್ ನಲ್ಲಿರೋ ವಡಕ್ಕುನಾಥನ್ ಅರ್ಥಾತ್ ಶಿವ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಇದು. ಆನೆಗಳ ಮೂಲಕ ದೇವರನ್ನು ಹೊತ್ತುಕೊಂಡು ದೇವಸ್ಥಾನದ ಬಾಗಿಲು ಪ್ರವೇಶ ಮಾಡೋದು ಈ ಉತ್ಸವದ ವಿಶೇಷ. ಹೀಗಾಗಿ ಸಾವಿರಾರು ವಿದೇಶಿಗರು ಉತ್ಸವ ನೋಡಲು ಆಗಮಿಸ್ತಾರೆ ಅನ್ನೋದೇ ವಿಶೇಷ.
ತ್ರಿಶೂರ್ ಪೂರಂ ಹಬ್ಬದ ಹಿನ್ನೆಲೆ
ರಾಮವರ್ಮ ಕುಂಞಿಪಿಳ್ಳೆ ಎಂಬ ಕೊಚ್ಚಿನ್ ಮಹಾರಾಜ 17 ನೇ ಶತಮಾನದಲ್ಲಿ ಅರುಟ್ಟುಪುಳ ಪೂರಂ ಎಂಬ ಉತ್ಸವವನ್ನು ನಡೆಸಿಕೊಂಡು ಬಂದಿದ್ದರು. ಅರುಟ್ಟುಪುಳ ಪೂರಂ ಎಂಬ ಒಂದು ದಿನದ ಉತ್ಸವಕ್ಕೆ ತ್ರಿಶೂರು ಸೇರಿದಂತೆ ಸುತ್ತಮುತ್ತಲಿನ ದೇವಸ್ತಾನಗಳು ಇದರಲ್ಲಿ ಭಾಗಿ ಆಗುತ್ತಿದ್ದವು. 1796 ರಲ್ಲಿ ಮಳೆಯ ಕಾರಣಿದಿಂದ ತ್ರಿಶೂರ್ನಿಂದ ಹೊರಟಿದ್ದ ದೇವಾಲಯ ತಂಡಗಳಿಗೆ ಅರುಟ್ಟುಪುಳ ಪೂರಂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡಿದ್ದ ತ್ರಿಶೂರಿನ ರಾಜ ಶಕ್ತನ್ 1796 ರಲ್ಲೇ ತ್ರಿಶೂರಿನಲ್ಲೇ ಈ ಪೂರಂ ಉತ್ಸವ ಆರಂಭಿಸಿದ್ರು ಅನ್ನೋ ಐತಿಹಾಸಿಕ ಕಥೆ ಇದೆ. ಅಂದಿನಿಂದ ತ್ರಿಶೂರಿನ ಹತ್ತು ದೇವಾಲಯಗಳು ಒಟ್ಟಾಗಿ ತ್ರಿಶೂರ್ ಪೂರಂ ಆಚರಿಸಲು ಆರಂಭವಾಯ್ತು ಅನ್ನೋ ದಾಖಲೆಗಳು ಸಿಗುತ್ತದೆ.
ಧರ್ಮಾತೀತವಾಗಿ ನಡೆಯುವ ಪೂರಂ ಉತ್ಸವ
ತ್ರಿಶೂರ್ ಪೂರಂ ಅಂದ ತಕ್ಷಣ ನೆನಪಾಗುವುದು ಅಲ್ಲಿ ಕಾಣಸಿಗುವ ಸರ್ವಧರ್ಮ ಸಮನ್ವಯತೆ. ಇಂತಹ ದೃಶ್ಯ ಬಹುಶಃ ದೇಶದ ಬೇರೆಲ್ಲೂ ಕಾಣಲು ಸಿಗಲಾರದು. ತ್ರಿಶೂರ್ ಪೂರಂ ಉತ್ಸವದಲ್ಲಿ ಪ್ರತಿ ವರ್ಷ ಹೊಸ ಕೊಡೆಗಳನ್ನು ತಯಾರಿಸಲಾಗುತ್ತದೆ. ಕುಡವಟ್ಟಂ ಎಂದು ಕರೆಯುವ ಈ ಕೊಡೆಗಳ ವಿಶೇಷ ಆಕರ್ಷಣೆಗೆ ಕ್ರೈಸ್ತ ಸಮೂದಾಯದವರ ಕೊಡುಗೆ ಇದ್ರೆ, ಪೂರಂಗೆ ಬೇಕಾದ ಪೆಂಡಾಲ್ ಹಾಕೋದು ಇಲ್ಲಿನ ಮುಸ್ಲಿಂ ಸಮೂದಾಯದವರು. ಇನ್ನು ಉತ್ಸವ ನೋಡಲು ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಧರ್ಮದವರೂ ಆಗಮಿಸುವುದು ಇಲ್ಲಿನ ವಿಶೇಷ. ಇದೇ ಕಾರಣಕ್ಕೆ ಈ ತ್ರಿಶೂರ್ ಪೂರಂ ಇಂದು ಜಗತ್ಪ್ರಸಿದ್ಧಿಯನ್ನು ಪಡೆದುಕೊಂಡಿದೆ.
ತ್ರಿಶೂರ್ ಪೂರಂ ಹಬ್ಬ ಹೇಗೆ ನಡೆಯುತ್ತದೆ
ತ್ರಿಶೂರು ಹಾಗೂ ಸುತ್ತಮುತ್ತಲಿನ ಹತ್ತು ದೇವಲಾಯಗಳಿಂದ ಆನೆಯ ಮೂಲಕ ದೇವರನ್ನು ಹೊತ್ತು ಶಿವ ದೇವಾಲಯಕ್ಕೆ ತರಲಾಗುತ್ತದೆ. ಒಂದೊಂದು ದೇವಸ್ಥಾನದಿಂದ ದೇವರನ್ನು ಹೊತ್ತು ಬಾಗಿಲು ದಾಟಿ ಬರುವ ಆನೆಗಳನ್ನು ನೋಡಲು ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಈ ವೇಳೆ ಮೊಳಗುವ ಪಂಚ ವಾದ್ಯಗಳನ್ನು ಕೇಳಲೆಂದೇ ಕೆಲವರು ಬರುವುದಿದೆ. ಕಣಿಮಂಗಲಂ ಶಾಸ್ತಾವು ದೇವಾಲಯದಿಂದ ಆರಂಭವಾಗುವ ಈ ಉತ್ಸವ ಬಳಿಕ ಒಂದೊಂದೆ ದೇವಸ್ಥಾನದಿಂದ ಬರಲು ಆರಂಭವಾಗುತ್ತದೆ. ಚಂಡೆ, ಮದ್ದಳೆ, ಕಹಳೆ,ತಾಳ ಹಾಗೂ ಎಡಕ್ಕ ಹೀಗೆ ಪಂಚವಾದ್ಯದ ಮೆರವಣಿಗೆ ನಡೆಯುತ್ತದೆ. ಹತ್ತು ಆನೆಗಳು ದೇವಾಲಯದ ಮುಂದೆ ನಿಂತಿದ್ದರೆ , ಐವತ್ತಕ್ಕೂ ಹೆಚ್ಚು ಆನೆಗಳು ಉತ್ಸವದಲ್ಲಿ ಭಾಗಿಯಾಗುತ್ತದೆ. ಚಿನ್ನದ ಹಣೆಪಟ್ಟಿ, ಚಿನ್ನದ ಪ್ರಭಾವಳಿಯನ್ನು ಹಿಡಿದು , ಪಾರೆಮೆಕ್ಕಾವು ಮತ್ತು ತಿರುವಂಬಾಡಿ ಎಂಬ ಎರಡು ತಂಡಗಳು ಪೂರಂ ನಡೆಯುವ ಸ್ಥಳದಲ್ಲಿ ಮುಖಾಮುಖಿಯಾಗಿ ನಿಂತು ಛತ್ರಿ ವಿನಿಯಮ ಮಾಡಿಕೊಳ್ಳುವ ದೃಶ್ಯ ಪೂರಂನಲ್ಲಿ ವಿಶೇಷ ಅನುಭವ ನೀಡುವ ದೃಶ್ಯ ಕೂಡಾ ಹೌದು. ಕುಡಮಟ್ಟಂ ಅಂತ ಇದನ್ನು ಕರೆಯಲಾಗುತ್ತಿದ್ದು ಶಿವದೇವಲಾಯದ ಪಶ್ಚಿಮ ಗೋಪುರದ ಬಳಿ ಇದು ಸಂಪನ್ನಗೊಳ್ಳುತ್ತದೆ.
FILM
ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಟಾಲಿವುಡ್ ನ ಜನಮನಗೆದ್ದ ನಟಿ..!! ಡಾಲಿಯ ‘ಉತ್ತರಾಕಾಂಡ’ಕ್ಕೆ ನಟಿ ಯಾರು ಗೊತ್ತಾ?
ಮೋಹಕತಾರೆ ರಮ್ಯ.. ಇವರ ಚಿತ್ತ ಯಾವತ್ತ ಅನ್ನೋದೆ ಇನ್ನೂ ಖಚಿತ ಆಗಿಲ್ಲ. ಈ ಮಧ್ಯೆ ಕೆಲವೊಂದು ಸಿನೆಮಾಕ್ಕೆ ನಟಿಯಾಗಿ ಕಾಣಿಸಿಕೊಳ್ಳಬೇಕಿದ್ದ ಇವರು ಹಲವು ಸಿನೆಮಾದಿಂದ ಕೈ ಬಿಟ್ಟಿದ್ದಾರೆ. ಇದರಲ್ಲಿ ಉತ್ತರಾಕಾಂಡ ಸಿನೆಮಾ ನಟನೆಯಿಂದ ಹೊರ ಬಂದಿರುವುದು ಈಗಾಗಲೇ ಸುದ್ದಿಯಾಗಿದೆ. ಆದರೆ ಇವರ ಬದಲಿಗೆ ಕಾಲಿವುಡ್ ನಟಿ ಬರಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹಬ್ಬಿದೆ.
ರೊಹೀತ್ ಪದಕಿ ನಿರ್ದೇಶನದಲ್ಲಿ ಅನಾವರಣವಾಗಲಿರುವ ಬಯಲು ಸೀಮೆಯ ಉತ್ತರಾಕಾಂಡ ಕಥೆಗೆ ಕಾಲಿವುಡ್ ನ ಐಶ್ವರ್ಯ ರಾಜೇಶ್ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗಿದೆ. ಕಾಕ ಮುತ್ತೈ , ವಡಾ ಚೆನ್ನೈ, ಕನಾ, ನಮ್ಮ ಮನೆ ಪಿಳ್ಳೈ ಹೀಗೆ ಹತ್ತಾರು ಚಿತ್ರ, ವೈವಿಧ್ಯಮಯ ಪಾತ್ರದ ಮೂಲಕ ಚಂದನವನದ ಚೆಂದದ ನಾಯಕಿಯರಿಗೆಲ್ಲರಿಗೂ ತನ್ನ ನಟನೆಯ ಮೂಲಕ ಜನ ಮನ ಗೆದ್ದ ಐಶ್ವರ್ಯ ರಾಜೇಶ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸ್ಯಾಂಡಲ್ವುಡ್ ನಲ್ಲಿ ಸಂಚಲನ ಮೂಡಿಸ್ತಾರ ಅನ್ನೋ ಗಾಸಿಪ್ ಹರಿದಾಡ್ತಾ ಇದೆ.
ಈ ಚಿತ್ರದಲ್ಲಿ ಚೈತ್ರಾ ಆಚಾರ್ ಲಚ್ಚಿ ಪಾತ್ರಕ್ಕೆ ಬಣ್ಣ ಹಚ್ತಿದ್ದಾರೆ. ದೂದ್ ಪೇಡಾ ದಿಗಂತ್ ಮಿರ್ಚಿ ಮಲ್ಲಿಗೆ ಎಂಬ ಹೆಸರಿನಿಂದ ಬಣ್ಣ ಹಚ್ಚಲಿದ್ದಾರೆ. ಸದಾ ಬಬ್ಲಿ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದ ದಿಗಂತ್ ಈ ಸಿನೆಮಾದಲ್ಲಿ ಡಿಫೆರೆಂಟ್ ಲುಕ್ನಲ್ಲಿ ಕಾಣಿಸಲಿದ್ದಾರೆ.
ಮಲಯಾಳಂನ ನಿರ್ಮಾಪಕ ಮತ್ತು ಆಕ್ಟರ್ ವಿಜಯ್ ಬಾಬು ಕೂಡ ಇದೇ ಚಿತ್ರದ ಮೂಲಕ ಕನ್ನಡಕ್ಕೆ ಪಾಪಾರ್ಪಣೆ ಮಾಡಲಿದ್ದಾರಂತೆ. ಡಾಲಿ ಧನಂಜಯ್ ಜೊತೆ ಕರುನಾಡ ಚಕ್ರವರ್ತಿ ಕೂಡ ಚಿತ್ರದಲ್ಲಿದ್ದಾರೆ ಅನ್ನುವ ವಿಚಾರ ಈಗಾಗಲೇ ಸಿನಿ ಪ್ರಿಯರ ಕನಸಿಗೆ ಬಣ್ಣ ಹಚ್ಚಿದಂತಾಗಿದೆ.
LATEST NEWS
UDUPI : ಕಾಂಗ್ರೆಸ್ ಪರ ದರ್ಶನ್ ಪ್ರಚಾರ; ಸುಮಲತಾ ಏನಂದ್ರು?
ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಉಡುಪಿಯಲ್ಲಿ ಪ್ರಚಾರ ಮಾಡಲು ನಟಿ ಸಂಸದೆ ಸುಮಲತಾ ಅವರು ಆಗಮಿಸಿದ್ದಾರೆ. ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ ಸುಮಲತಾ ಕೋಟ ಪರ ಮತಯಾಚನೆ ಮಾಡಿದ್ದಾರೆ.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ನಟಿಯಾಗಿದ್ದಾಗ ಉಡುಪಿಗೆ ಶೂಟಿಂಗ್ ಅಂತ ಬರ್ತಾ ಇದ್ದದ್ದೇ, ಈ ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ ಮಂಡ್ಯದಲ್ಲಿ ಬಿಜೆಪಿಗೆ ಗೆಲುವಾಗಲಿದ್ದು, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.
ದರ್ಶನ್ ಬಗ್ಗೆ ಏನಂದ್ರು?
ಈ ವೇಳೆ ಮಂಡ್ಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸುಮಲತಾ, ಅದು ದರ್ಶನ್ ಅವರ ವೈಯಕ್ತಿಕ ವಿಚಾರ. ನಾವು ಪ್ರತಿದಿನ ರಾಜಕೀಯ ವಿಚಾರ ಚರ್ಚೆ ಮಾಡುವುದಿಲ್ಲ. ಮಾತ್ರವಲ್ಲ, ಇಂತಹ ವಿಚಾರಗಳನ್ನು ದರ್ಶನ್ ಜೊತೆ ಚರ್ಚೆ ಮಾಡುವುದಿಲ್ಲ. ನಾನು ಹೋಗು ಅಥವಾ ಹೊಗಬೇಡ ಅನ್ನಲು ನಾನು ಯಾರು ಎಂದು ಕೇಳಿದ್ದಾರೆ.
ಕೆಲವರು ನಾನೇ ದರ್ಶನ್ ನನ್ನು ಕಾಂಗ್ರೆಸ್ ಪರ ಪ್ರಚಾರಕ್ಕೆ ಕಳುಹಿಸಿದ್ದಾಗಿ ಹೇಳ್ತಾರೆ, ಆದ್ರೆ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾನು ನನ್ನ ಇಚ್ಚೆಯಿಂದ ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ. ಇನ್ನು ಕುಮಾರಸ್ವಾಮಿ ಪರ ಪ್ರಚಾರ ಮಾಡಬೇಕಾ ಬೇಡ್ವಾ ಅಂತ ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.