ಮಂಗಳೂರು ನಗರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಎಂಬ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು: ಮಂಗಳೂರು ನಗರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಎಂಬ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಸ್ಮಾ ಬಾನೊ ಮೇ 15ರಂದು ಬೆಳಗ್ಗೆ 9.15ಕ್ಕೆ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು.
ಅನಂತರ ವಾಪಾಸ್ ಮನೆಗೆ ಮರಳಲಿಲ್ಲ. 18 ವರ್ಷದ ಆಸ್ಮಾ ಬಾನೊ ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಬಲ್ಲರು. ಈ ಬಗ್ಗೆ ಕಾಣೆಯಾದವರ ತಂದೆ ಮಹಮ್ಮದ್ ಖಾಲಿದ್ ಅವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.