Connect with us

    ಒಂಬತ್ತುಕೆರೆ ಟ್ರೋಲ್ ಬಗ್ಗೆ ಗರಂ ಆದ ಶಾಸಕ ಖಾದರ್

    Published

    on

    ಮಂಗಳೂರು:   ಕೇಂದ್ರ ಸರಕಾರದ ವಿತ್ತ ಸಚಿವೆ ನರ‍್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಬಜೆಟ್ನಲ್ಲಿ ದೇಶದ ಭವಿಷ್ಯ ಪ್ರಕಾಶಿಸುವ ಯಾವುದೇ ಅಂಶಗಳು ಇಲ್ಲ. ಈ ಬಾರಿಯ ಕೇಂದ್ರ ಸರಕಾರದ ಬಜೆಟ್ ಬಗ್ಗೆ ಭಾರೀ ಅಪೇಕ್ಷೆ ಮತ್ತು ನಿರೀಕ್ಷೆಗಳಿದ್ದವು. ಆದರೆ, ಬಜೆಟ್ನಿಂದ ದೇಶದ ಜನರಿಗೆ ನಿರಾಶೆಯಾಗಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.

    ಮಂಗಳೂರು ನಗರದ ರ‍್ಕ್ಯೂಟ್ ಹೌಸ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಿಡಿಪಿ ದರ ಶೇ.೩.೫ಕ್ಕೆ ಕುಸಿತ ಕಂಡಿದೆ. ಅಟೋಮೊಬೈಲ್ ಕ್ಷೇತ್ರ ನಶಿಸುತ್ತಿದೆ. ರೈತರು ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಜನತೆ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಭಾವನಾತ್ಮಕ ವಿಚಾರಗಳಿಂದ ದೇಶ ಬಲಿಷ್ಠಗೊಳ್ಳಲು ಸಾಧ್ಯವಿಲ್ಲ. ರೈತರ ಸ್ಥಿತಿಗತಿ ಉತ್ತಮಪಡಿಸಲು ಬಜೆಟ್ನಲ್ಲಿ ಯಾವುದೇ ಯೋಜನೆ ಇಲ್ಲ. ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯದ ಸಂಸದರು ಲೋಕಸಭೆಯಲ್ಲಿ ಹೋರಾಟ ನಡೆಸಬೇಕು ಎಂದು ಆಗ್ರಹಿಸಿದರು.

    ಐಡಿಬಿಐ, ಎಲ್ಐಸಿ ಖಾಸಗೀಕರಣಕ್ಕೆ ಹೊರಟಿರುವುದು ದೇಶದ ರ‍್ಥಿಕ ದುಃಸ್ಥಿತಿಯನ್ನು ತೋರಿಸುತ್ತದೆ. ಭಾರತೀಯ ಜನತಾ ಪಕ್ಷವು ಯಾವುದೇ ಅಭಿವೃದ್ಧಿ ಕರ‍್ಯ ಮಾಡದಿದ್ದರೂ ಸಾಮಾಜಿಕ ಮಾಧ್ಯಗಳಲ್ಲಿ ವಿಶ್ವವಿದ್ಯಾಲಯವನ್ನೇ ತೆರೆದಿದೆ ಎಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ. ಉಳ್ಳಾಲದ ಒಂಭತ್ತುಕರೆಯಲ್ಲಿ ಪಾಳುಬಿದ್ದ ಮನೆಗಳ ಕುರಿತು ಟ್ರೋಲ್ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಟ್ರೋಲ್ ಮಾಡುವವರನ್ನು ಯಾರು ಲೆಕ್ಕಕ್ಕೆ ತೆಗೆದುಕೊಳ್ಳುತ್ತಾರೆ ? ಸುಳ್ಳನ್ನು ಸತ್ಯ ಮಾಡಲು ಟ್ರೋಲ್ ನಡೆಸುತ್ತಿದ್ದಾರೆ ಎಂದರು. ೨೦೦೨ರಲ್ಲಿ ಉಳ್ಳಾಲದ ಒಂಭತ್ತುಕರೆಯಲ್ಲಿ ಮನೆ ಕಟ್ಟಿ ಆಗಿದೆ. ಒಳಚರಂಡಿ ಆಗದೇ ಸಮಸ್ಯೆಯಾಗಿದೆ. ಈ ಮನೆಗಳ ಪ್ರಕರಣ ನ್ಯಾಯಾಲಯದಲ್ಲಿದೆ. ಬಿಜೆಪಿ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ, ಅವರದೇ ಸರಕಾರದ ಮೂಲಕ  ಮನೆಗಳ ವಿತರಣೆ ಮಾಡಲಿ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮುಖಂಡರಾದ ಈಶ್ವರ ಉಳ್ಳಾಲ್, ಸಂತೋಷ್ ಕುಮಾರ್ ಶೆಟ್ಟಿ, ಝಕರಿಯ ಮತ್ತಿತರರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    BELTHANGADY

    ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ

    Published

    on

    ಮಂಗಳೂರು: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.

    ಕದ್ರಿ ಮಂಜುನಾಥ ದೇಗುಲಕ್ಕೆ ಬೆಳ್ಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

    ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.

    ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

    Continue Reading

    LATEST NEWS

    ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ : ನಿನ್ನೆ ಒಂದೇ ದಿನ ಭರ್ತಿ 308 ಕೋಟಿ ರೂ. ಮದ್ಯ ಸೇಲ್.!

    Published

    on

    ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ.

    ಹೌದು, 2024 ರ ಡಿಸೆಂಬರ್ 31 ರಂದು ರಾಜ್ಯಾದ್ಯಂತ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿದೆ. 2023 ರ ಡಿಸೆಂಬರ್ 31 ರಂದು 193 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿತ್ತು. 2,92,339 ಬಿಯರ್ ಬಾಕ್ಸ್ ಮಾರಾಟದಿಂದ 57.75 ಕೋಟಿ ರೂ. ಒಟ್ಟು 7,76,042 ಬಾಕ್ಸ್ ಮದ್ಯ ಮಾರಾಟದಿಂದ 308 ಕೋಟಿ ರೂ. ಬಂದಿದೆ.

    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 28ರ ಶನಿವಾರ 408.53 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ. ಡಿಸೆಂಬರ್ 27ರಂದು ರಜೆ ಘೋಷಣೆ ಮಾಡಿದ್ದರಿಂದ ಮದ್ಯ ಖರೀದಿ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ರಾಜ್ಯಾದ್ಯಂತ ಡಿ. 28ರಂದು 6,22,062 ಕೇಸ್ ವಿಸ್ಕಿ ಮತ್ತು ಇತರ ಸ್ಪಿರಿಟ್ ಖರೀದಿ ಮಾಡಲಾಗಿದೆ. 4,04,998 ಕೇಸ್ ಬಿಯರ್ ಸೇರಿದಂತೆ 10,27,060 ಕೇಸ್ ಮದ್ಯ ಮಾರಾಟ ಆಗಿದೆ. ಇದರಲ್ಲಿ 80.58 ಕೋಟಿ ಮೊತ್ತದ ಬಿಯರ್ ಇದ್ದರೆ, 327,50 ಕೋಟಿ ಮೌಲ್ಯದ ಸ್ಪಿರಿಟ್ಸ್ ಮಾರಾಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    Continue Reading

    LATEST NEWS

    ಸೇನಾ ವಾಹನ ದು*ರಂತ ಪ್ರಕರಣ; ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ

    Published

    on

    ಮಂಗಳೂರು/ಮಡಿಕೇರಿ: ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ನಡೆದ ಸೇನಾ ವಾಹನ ದುರಂತದಲ್ಲಿ ಗಂ*ಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಅವರ ಪಾರ್ಥಿ*ವ ಶರೀರ ಹೂಟ್ಟುರು ತಲುಪಿದೆ.

    ಓದಿದ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
    ಹುತಾತ್ಮ ಯೋಧ ದಿವಿನ್ ವಿದ್ಯಾಭ್ಯಾಸ ಮಾಡಿದ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಕೆಲ ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
    ಬಳಿಕ ಕುಶಾಲನಗರದಿಂದ ನೇರವಾಗಿ ಆಲೂರು ಸಿದ್ದಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಗುತ್ತದೆ.

    ಇದನ್ನೂ ಓದಿ: ಸೇನಾ ವಾಹನ ಅಪಘಾತ ಪ್ರಕರಣ : ಕೋಮಾದಲ್ಲಿದ್ದ ಕೊಡಗಿನ ಯೋಧ ವಿಧಿವಶ..!

    ಬಳಿಕ ದಿವಿನ್ ಅವರ ತೋಟದಲ್ಲಿರುವ ಅವರ ತಂದೆ ಸಮಾಧಿ ಪಕ್ಕದಲ್ಲಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

    ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂ*ತದಲ್ಲಿ ಕೊಡಗಿನ ಯೋಧ ಗಂ*ಭೀರ ಗಾಯಗೊಂಡಿದ್ದರು. ದುರಂತದಲ್ಲಿ ಕರ್ನಾಟಕದ ಮೂವರು ಸೈನಿಕರು ಹುತಾತ್ಮರಾಗಿದ್ದರು.

    Continue Reading

    LATEST NEWS

    Trending