Connect with us

DAKSHINA KANNADA

ಅ. 19 ರಿಂದ 24ರವರೆಗೆ ಉಳ್ಳಾಲ ಶಾರದೋತ್ಸವ

Published

on

ಉಳ್ಳಾಲ: ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಉಳ್ಳಾಲ ಇದರ 76ನೇ ಶ್ರೀ ಶಾರದೋತ್ಸವವು ಅ. 19 ರಿಂದ 24ರ ವರೆಗೆ ಉಳ್ಳಾಲ ಶ್ರೀ ಶಾರದಾ ನಿಕೇತನದಲ್ಲಿ ಜರಗಲಿರುವುದು.

ಇದಕ್ಕೆ ಪೂರ್ವಭಾವಿಯಾಗಿ ಅ. 15 ರಂದು ಕ್ರೀಡೋತ್ಸವವನ್ನು ಉಳ್ಳಾಲ ಭಾರತ ಪ್ರೌಢ ಶಾಲಾ ಮೈದಾನದಲ್ಲಿ ನಡೆಸಲಾಗುವುದು. ಅ. 19ರಂದು ಪಟ್ಟ ಭಂದೋತ್ಸವ ಮೆರವಣಿಗೆಯೊಂದಿಗೆ ಶ್ರೀ ಶಾರದಾ ಪ್ರತಿಷ್ಟೆಗೊಂಡು ಅ. 24 ರ ವಿಜಯ ದಶಮಿಯಂದು ಉಳ್ಳಾಲದ ಪ್ರಮುಖ ರಸ್ತೆಗಳಲ್ಲಿ ವಿಸರ್ಜನಾ ಮೆರವಣಿಗೆ ಮುಖಾಂತರ ಉಳ್ಳಾಲ ಕಡಲ ಕಿನಾರೆ ತಲುಪಿ ಸಮುದ್ರದಲ್ಲಿ ಜಲಸ್ಥಂಭನಗೊಳಿಸಲಾಗುವುದು.

ಅ. 20 ರಂದು ಧಾರ್ಮಿಕ ಸಭಾಕಾರ್ಯಕ್ರಮ ಜರಗಲಿದ್ದು, ಸಮಾಜದ ಗಣ್ಯರ ಸಮ್ಮುಖದಲ್ಲಿ ದಿವಂಗತ ದಯಾನಂದ ನಾಯಕ್ ದತ್ತಿ ಪ್ರಶಸ್ತಿಯನ್ನು ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ತೊಕ್ಕೊಟ್ಟು ಇವರಿಗೆ ಪ್ರಧಾನ ಮಾಡಲಾಗುವುದು. ಪ್ರತೀದಿನ ವಲಯದ ಶಾಲೆ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಸಾಂಸ್ಕ್ರತಿಕ ಕಾರ್ಯಕ್ರಮವಿರುತ್ತದೆ. ಅ. 20ಕ್ಕೆ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಅ. 24ರಂದು ರಸಪ್ರಶ್ನೆ ಸ್ಪರ್ಧೆಗಳು ಇರುತ್ತವೆ. ಅ. 23 ರಂದು ಶ್ರೀ ನವದುರ್ಗಾ ಅಷ್ಟೋತ್ತರ ಪುಷ್ಪಾಂಜಲಿ ಪೂಜೆ ಜರಗಲಿದ್ದು, ಸಾರ್ವಜನಿಕ ಅನ್ನದಾನವೂ ಇರುತ್ತದೆ. ಸಮಾರೋಪ ಸಮಾರಂಭದಲ್ಲಿ ವಿಶ್ವಹಿಂದೂ ಪರಿಷದ್ ಇದರ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ರವರ ಭೌತಿಕ್ ಇರುತ್ತದೆ ಎಂದು ಉತ್ಸವ ಸಮಿತಿಯ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending