Home ಬಂಟ್ವಾಳ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ರಥೋತ್ಸವ ಹಾಗೂ ತುಳುನಾಡ ಜಾತ್ರಾ ಸಂಭ್ರಮ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ರಥೋತ್ಸವ ಹಾಗೂ ತುಳುನಾಡ ಜಾತ್ರಾ ಸಂಭ್ರಮ

ಬಂಟ್ವಾಳ: ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನ ಹಾಗೂ ವೇದ ಮೂರ್ತಿ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಒಡಿಯೂರು ರಥೋತ್ಸವ ಹಾಗೂ ತುಳುನಾಡ ಜಾತ್ರೆಯು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಈ ಹಿನ್ನಲೆ ಫೆಬ್ರವರಿ 3ರಂದು ತುಳು ಸಾಹಿತ್ಯ ಸಮ್ಮೇಳನೊ ಕಾರ್ಯಕ್ರಮ ನಡೆದಿದ್ದು, ಇಂದು ಬೆಳಿಗ್ಗೆ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ, ಪರಮಪೂಜ್ಯ ಗುರುದೇವಾನಂದ ಸ್ವಾಮೀಜಿ, ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಆಶೀರ್ವಚನ ನೀಡಿದರು.

ಇನ್ನು ಮಂಗಳೂರಿನ ಕ್ಯಾಂಪ್ಕೊ ಲಿಮಿಟೆಡ್‌ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾತನಾಡಿ, ಆದ್ಯಾತ್ಮಿಕತೆಯ ನಿಜ ರೂಪ ಮತ್ತು ಶಾಂತಿಯನ್ನು ನೀಡುವ ಕ್ಷೇತ್ರವೆಂದರೆ ಅದು ಒಡಿಯೂರು ಶ್ರೀ ಕ್ಷೇತ್ರ. ನಮ್ಮದು ದೇವರನ್ನು, ಧರ್ಮವನ್ನು, ದೇಶವನ್ನು ನಂಬಿಕೊಂಡು ಬರುವಂತಹ ದೇಶ. ದೇವರು ಹಾಗೂ ದೇಶಕ್ಕಾಗಿ ನಾವು ಏನು ಮಾಡಲು ಸಿದ್ಧರಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು ಪಟ್ಲಗುತ್ತು ಅನೀಶ್ ಶೆಟ್ಟಿ ಬೆಂಗಳೂರು ಇವರಿಗೆ ಶ್ರೀ ಗುರುದೇವಾನುಗ್ರಹ ಯುವ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಆಡಳಿತ ನೀರ್ದೆಶಕ ರವಿನಾಥ್ ವಿ.ಶೆಟ್ಟಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.

ವೀಡಿಯೀಗಾಗಿ

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...