Sunday, November 27, 2022

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant ಆಗಿ ಕೆಲಸ ಮಾಡಿಕೊಂಡಿದ್ದರು. ಏ.04 ರಂದು ವೈಷ್ಣೋದೇವಿ ಮಂದಿರ ಯಾತ್ರೆಗೆ ಹೋಗುವ ಸಲುವಾಗಿ ಹೆಲಿಕಾಪ್ಟರ್ ಬುಕ್ಕಿಂಗ್ ಬಗ್ಗೆ ಗೂಗಲ್ ನಲ್ಲಿ ಹುಡುಕಾಡಿದ್ದಾರೆ.

ಈ ವೇಳೆ ನಿತಿನ್‌ (9903830407) ಎಂಬುವವರು ಪರಿಚಯವಾಗಿದ್ದಾರೆ. ತಾನು ವೈಷ್ಣೋದೇವಿ ದೇಗುಲದ ಬೋರ್ಡ್ ವತಿಯಿಂದ ಮಾತನಾಡುವುದಾಗಿ ನಂಬಿಸಿ ಹೆಲಿಕಾಪ್ಟರ್ ಬುಕ್ಕಿಂಗ್‌ ಬಗ್ಗೆ ರೂ.38060/- ಕಳುಹಿಸುವಂತೆ ತಿಳಿಸಿದ್ದು, ಅದರಂತೆ ರೂ. 38060/- ನ್ನು ಪಾವತಿಸಿದ್ದಾರೆ. ಅದಾದ ನಂತರ ನಿತಿನ್ ಈ ವ್ಯಕ್ತಿಯ ಕರೆ ಸ್ವೀಕರಿಸದೇ ಇದ್ದುದರ ಬಗ್ಗೆ ಸಂಶಯಪಟ್ಟು ಖುದ್ದಾಗಿ ವೈಷ್ಣೋದೇವಿ ದೇಗುಲದ ಬೋರ್ಡನ್ನು ಸಂಪರ್ಕಿಸಿದ್ದಾರೆ.

ಈ ವೇಳೆ ನಿತಿನ್ ಎಂಬ ವ್ಯಕ್ತಿಯು ಸದ್ರಿ ದೇಗುಲದ ಬೋರ್ಡಿಗೆ ಸಂಬಂಧಿಸಿದ ವ್ಯಕ್ತಿಯಾಗಿರುವುದಿಲ್ಲ ಎಂಬುದಾಗಿ ತಿಳಿದು ಬಂದಿರುತ್ತದೆ. ಆದ್ದರಿಂದ ಮೋಸ ಮಾಡಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸಿದ್ರೆ ಭಾರತದಲ್ಲಿ 30 ಮಕ್ಕಳು ಜನಿಸ್ತಾರೆ-ಕೇಂದ್ರ ಸಚಿವ

ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ...