DAKSHINA KANNADA
ಮಂಗಳೂರಿನಲ್ಲಿ PFI-SDPI ಕಚೇರಿ ಮೇಲಿನ ಅಧಿಕಾರಿಗಳ ದಾಳಿ ಅಂತ್ಯ ಮೂವರು ವಶಕ್ಕೆ : ದಾಖಲೆಯೊಂದಿಗೆ ತೆರಳಿದ NIA
ಮಂಗಳೂರು: ಮಂಗಳೂರಿನ ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್ ಡಿಪಿಐ, ಪಿಎಫ್ಐ ಕಛೇರಿಯ ಮೇಲೆ ಎನ್ಐಎ ನಡೆಸಿದ್ದ ದಾಳಿ ಅಂತ್ಯ ಕಂಡಿದ್ದು ಕೆಲ ದಾಖಲೆ ಪತ್ರಗಳನ್ನು ಮತ್ತು ಮೂವರನ್ನು ಅಧಿಕಾರಿಗಳು ವಶಕ್ಕೆ ಪಡೆದು ತೆರಳಿದ್ದಾರೆ.
ಪಿಎಫ್ಐ ಮುಖಂಡರಾದ ಅಶ್ರಫ್ ಎ.ಕೆ, ಮೊಹಿದ್ದೀನ್ ಹಳೆಯಂಗಡಿ, ನವಾಜ್ ಕಾವೂರು ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ಮಾತನಾಡಿರುವ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ‘ಎನ್ ಐ ಎ ಅಧಿಕಾರಿಗಳು ಮುಂಜಾನೆ 3.30ರ ವೇಳೆಗೆ ಪೊಲೀಸ್ ಭದ್ರತೆಯೊಂದಿಗೆ ಕಛೇರಿಗಳಿಗೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ ’ಕಛೇರಿಯಲ್ಲಿ ಬಳಕೆ ಮಾಡುವ ಲ್ಯಾಪ್ ಟಾಪ್ ತೆಗೆದುಕೊಂಡು ಹೋಗಿದ್ದಾರೆ.
ನಮ್ಮ ಪಕ್ಷಕ್ಕೆ ಸಂಬಂಧಿಸಿದ ಕೆಲವು ಫೋಟೋಗಳನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.
ಎನ್ಐಎ ಅಧಿಕಾರಿಗಳು ಪಿಎಫ್ಐ ಕಛೇರಿಗೆ ದಾಳಿ ಮಾಡುವ ಸಲುವಾಗಿ ಬಂದಿದ್ದರು.
ಆದರೆ ನಮ್ಮ ಕಛೇರಿಯೂ ಹತ್ತಿರದಲ್ಲಿ ಇದ್ದ ಕಾರಣ ನಮ್ಮ ಕಛೇರಿ ಮೇಲೂ ದಾಳಿ ಮಾಡಿದ್ದಾರೆ.
ಕಚೇರಿಯಲ್ಲಿ ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ.
ಕಛೇರಿ ಕಟ್ಟಡದ ಬಾಡಿಗೆ ಅಗ್ರಿಮೆಂಟ್ ದಾಖಲೆ ಪಡೆದುಕೊಂಡು ಹೋಗಿದ್ದಾರೆ ಹೊರತು ಯಾವುದೇ ದಾಖಲೆಗಳನ್ನು ವಶಪಡಿಸಿಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.