Connect with us

BANTWAL

ಬಂಟ್ವಾಳ: ಪ್ಲಾಸ್ಟಿಕ್ ಮಾರುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳಿಂದ ದಾಳಿ-ದಂಡ ವಸೂಲು

Published

on

ಬಂಟ್ವಾಳ: ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಹಲವಾರು ಅಂಗಡಿಗಳ ಮೇಲೆ ಪುರಸಭಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದಂಡ ವಸೂಲಿ ಮಾಡಿದ ಘಟನೆ ಬಂಟ್ವಾಳದಲ್ಲಿ ಇಂದು ನಡೆದಿದೆ.


ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಡ್ಡಕಟ್ಟೆಯಲ್ಲಿರುವ ಹಲವಾರು ಅಂಗಡಿಗಳಿಗೆ ದಾಳಿ ನಡೆಸಿದ ಪುರಸಭಾ ಇಲಾಖೆಯ ತಂಡ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲಕರಿಂದ ದಂಡ ವಸೂಲಿ ಮಾಡಿದೆ.

ಬಡ್ಡಕಟ್ಟೆಯಿಂದ ಬಂಟ್ವಾಳ ಪೇಟೆ ವರೆಗೆ ಇರುವ ಪ್ರತಿ ಅಂಗಡಿಗಳಿಗೆ ನೋಟೀಸ್ ನೀಡಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡದಂತೆ ಎಚ್ಚರಿಕೆಯನ್ನು ನೀಡಿದೆ.


ಸರಕಾರ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ನಿಷೇಧದ ಅದೇಶ ಜಾರಿ ಮಾಡಿದ ಬಳಿಕ ಇನ್ನೂ ಕೂಡ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ಮಾಡಿ ದಂಡ ವಸೂಲಿ ಜೊತೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.


ಬಂಟ್ವಾಳ ಪುರಸಭಾ ಸಮುದಾಯ ಸಂಘಟಕಿ ಉಮಾವತಿ, ಪ್ರಥಮ ದರ್ಜೆ ಸಹಾಯಕ ರಝಾಕ್, ಪಂಪ್ ಅಪರೇಟರ್ ಮಂಜಪ್ಪ, ಕ್ಲರ್ಕ್ ಸುಶೀಲ ಮತ್ತು ಗುತ್ತಿಗೆ ಆಧಾರದ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

BANTWAL

ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಸಾ*ವು

Published

on

ಬಂಟ್ವಾಳ: ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ.

died

ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃ*ತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending