Home ಉಡುಪಿ ಉಡುಪಿ ವೃದ್ಧೆಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಬಂಧನ 

ಉಡುಪಿ ವೃದ್ಧೆಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಬಂಧನ 

ಉಡುಪಿ ವೃದ್ಧೆಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಬಂಧನ 

ಉಡುಪಿ: ಉಡುಪಿಯಲ್ಲಿ ನಡೆದ ವೃದ್ಧೆಯ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ಮಾಲತಿ ಕಾಮತ್ ಎಂಬವರನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು.

ಮೈಮೇಲಿದ್ದ ಚಿನ್ನಾಭರಣ ಹಾಗೂ ಕಪಾಟಿನಲ್ಲಿದ್ದ ನಗದನ್ನು ದೋಚಲಾಗಿತ್ತು. ದುಷ್ಕೃತ್ಯ ನಡೆಸಿ ವೃದ್ಧೆಯನ್ನು ಕೊಲೆಗೈದ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಆನಂದ ಮತ್ತು ಅಶೋಕ್ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ಪಡೆದುಕೊಂಡಿದ್ದಾರೆ.

ಮೂವರು ಹೆಣ್ಣು ಮಕ್ಕಳನ್ನು ಹೊಂದಿರುವ ಈ ವೃದ್ದೆ, ಏಕಾಂಗಿಯಾಗಿ ಮನೆಯಲ್ಲಿ ವಾಸ ಮಾಡುತ್ತಿದ್ದರು. ಹೊಸ ಮನೆ ನಿರ್ಮಾಣದ ಸಲುವಾಗಿ ವಾಸವಿದ್ದ ಮನೆಯನ್ನು ಕೆಡವಲಾಗಿತ್ತು. ಕೆಡವಿದ ಮನೆಯಲ್ಲೇ ಈಕೆ ವಾಸವಾಗಿದ್ದರು. ಇದರ ಲಾಭ ಪಡೆದ ದುಷ್ಕರ್ಮಿಗಳು ವೃದ್ಧೆಯನ್ನು ಕೊಂದು ಹಣ ಹಾಗೂ ನಗದು ದೋಚಿದ್ದರು. ಕೊಲೆ ನಡೆದು ವಾರದೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...