Thursday, April 22, 2021

ವಿಟ್ಲ:ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಓಮ್ನಿ ಕಾರು:ಮಹಿಳೆಯರು ಮಕ್ಕಳಿಗೆ ಗಂಭೀರ ಗಾಯ..!

ವಿಟ್ಲ:ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಓಮ್ನಿ ಕಾರು:ಮಹಿಳೆಯರು ಮಕ್ಕಳಿಗೆ ಗಂಭೀರ ಗಾಯ..!

ಮಂಗಳೂರು:  ಓಮ್ನಿ ಕಾರು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ವೀರಕಂಬದಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ  ವೀರಕಂಬ ಗ್ರಾಮ ಪಂಚಾಯತ್ ಕಚೇರಿಯ ಸಮೀಪ ಇರುವ ಪ್ರಪಾತಕ್ಕೆ ಉರಳಿದೆ.ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಪಾತದ ಕೆಳಗಡೆ ಮನೆಯೊಂದು ಇದ್ದು, ಅವರ ಅಂಗಳಕ್ಕೆ ಈ ಕಾರು ಬಿದ್ದು, ಸಂಪೂರ್ಣವಾಗಿ ಜಖಂಗೊಂಡಿದೆ.

ಓಮ್ನಿ ಕಾರಿನಲ್ಲಿದ್ದವರು ಮಾರಿಪಳ್ಳ ನಿವಾಸಿಗಳಾಗಿದ್ದು, ವಿಟ್ಲದ ಒಕ್ಕೆತ್ತೂರು ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದು ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷಿದರ್ಶಿಗಳು ತಿಳಿಸಿದ್ದಾರೆ.

ವಿಟ್ಲ-ಕಲ್ಲಡ್ಕ ನಡುವೆ ಇರುವ  ಅಪಾಯಕಾರಿ ತಿರುವಿನಲ್ಲಿ ಪ್ರಪಾತವಿದ್ದು, ಅಪಾಯವನ್ನು ಆಹ್ವಾನಿಸುತ್ತಿದೆ. ಕೆಲವು ವರ್ಷಗಳ ಹಿಂದೆ ಇದೇ ಪ್ರಪಾತಕ್ಕೆ ಜೀಪೊಂದು ಉರುಳಿ ಬಿದ್ದಿತ್ತು.ತಡೆಗೋಡೆಯ ಕೊರತೆಯಿಂದ ಇಲ್ಲಿ ಇಂತಹ ಅಪಘಾತಗಳು ಸಂಭವಿಸುತ್ತಿದ್ದು, ಜೀವ ಬಲಿಪಡೆಯುವಂತಿದೆ ಹಾಗಾಗಿ ಇಲ್ಲಿ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...