LATEST NEWS
ಸೂಕ್ತ ಸಮಯ ಬಂದಾಗ CFI, PFI, SDPI ನಿಷೇಧ ಮಾಡ್ತೇವೆ: ಗೃಹಸಚಿವ ಅರಗ
Published
3 years agoon
By
Adminಉಡುಪಿ: ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುತ್ತೇವೆ. ಈ ಬಗ್ಗೆ ಕೇಂದ್ರಕ್ಕೆ ಆಗಾಗ್ಗೆ ವರದಿ ಕಳಿಸುತ್ತಾ ಇದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ ಕೊಡ್ಗಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಬುಲ್ಡೋಜರ್ ಪ್ರಯೋಗದ ಬಗ್ಗೆ ಪ್ರತಿಕ್ರಿಯಿಸಿ,
ರಾಜ್ಯದಲ್ಲಿ ಯುಪಿ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗ ಮಾಡುವಂತಹ ಸನ್ನಿವೇಶ ಇನ್ನೂ ಸೃಷ್ಟಿಯಾಗಿಲ್ಲ. ಇಲ್ಲಿ ಕಾನೂನನ್ನು ಪಾಲಿಸುವ ಮನಸ್ಥಿತಿ ಇನ್ನೂ ಉಳಿದುಕೊಂಡಿದೆ ಎಂದರು.
ರಾಹುಲ್ ಗಾಂಧಿ ಈಡಿ ವಿಚಾರಣೆ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ದೇಶದಲ್ಲಿ ಕಾಂಗ್ರೆಸ್ ನಾಯಕರಿಗೆ, ಜನಸಾಮಾನ್ಯರಿಗೆ ಒಂದು ಕಾನೂನು ಅಂತ ಇದೆಯಾ?. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ.
ಕೋರ್ಟ್ ವಿಚಾರಣೆಗೆ ಕರೆದರೆ ಹೋಗಿ ಹೇಳಿಕೆ ಕೊಡಬೇಕು. ನಿರಪರಾಧಿಯಾದರೆ ಹೊರಬರುತ್ತಾರೆ, ಅಪರಾಧಿಗಳಾದರೆ ಶಿಕ್ಷೆ ಅನುಭವಿಸುತ್ತಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಅಡ್ಡಮಾರ್ಗ ಹಿಡಿದ ಕಾಂಗ್ರೆಸ್ ನಾಪತ್ತೆಯಾಗುತ್ತಿದೆ ಎಂದರು.
ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಬಗ್ಗೆ ಪ್ರತಿಕ್ರಿಯಿಸಿ, ಇಂತಹ ಮತಾಂಧ ಶಕ್ತಿಗಳು ನಮ್ಮ ನಡುವೆ ಇದ್ದಾವೆ. ಹಿಜಾಬ್ ನಿಂದ ಆರಂಭಿಸಿ ಏನೆಲ್ಲಾ ಮಾಡಿದ್ದಾರೆ ಎಲ್ಲರಿಗೂ ಗೊತ್ತು.
ಇಂತಹ ಶಕ್ತಿಗಳನ್ನು ಮಟ್ಟ ಹಾಕಲು ಏನು ಮಾಡಬೇಕು ಎಂಬುವುದಾಗಿ ಚಿಂತನೆ ನಡೆಯುತ್ತಿದೆ.
ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುತ್ತೇವೆ. ಈ ಬಗ್ಗೆ ಕೇಂದ್ರಕ್ಕೆ ಆಗಾಗ್ಗೆ ವರದಿ ಕಳಿಸುತ್ತಾ ಇದ್ದೇವೆ ಎಂದರು.
LATEST NEWS
ಕುಂದಾಪುರ : ಕಾರು ಡಿ*ಕ್ಕಿ; ಮಹಿಳೆಗೆ ಗಂಭೀ*ರ ಗಾ*ಯ
Published
51 minutes agoon
17/01/2025By
NEWS DESK4ಕುಂದಾಪುರ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಮಹಿಳೆಯೊಬ್ಬರು ಗಂಭೀ*ರ ಗಾ*ಯಗೊಂಡ ಘಟನೆ ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿಯ 66 ರಲ್ಲಿ ಸಂಭವಿಸಿದೆ. ತ್ರಾಸಿ ನಿವಾಸಿ ಗೌರಿ ಶೆಟ್ಟಿಗಾರ್ (60) ಗಾ*ಯಗೊಂಡ ಮಹಿಳೆ.
ಗೌರಿ ಶೆಟ್ಟಿಗಾರ್ ಅವರು ರಸ್ತೆ ದಾಟುತ್ತಿದ್ದಾಗ ಅವಘ*ಡ ಸಂಭವಿಸಿದೆ. ಕಾರು ಬೈಂದೂರು ಕಡೆಯಿಂದ ಕುಂದಾಪುರದತ್ತ ಸಂಚರಿಸುತ್ತಿತ್ತು. ಡಿ*ಕ್ಕಿ ಹೊಡೆದ ರಭಸಕ್ಕೆ ಮಹಿಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದರು.
ಇದನ್ನೂ ಓದಿ : ಆತ್ಮಹತ್ಯೆಗೆ ಯತ್ನಿಸಿದ ಕಳ್ಳ ಈಗ ಪೊಲೀಸರ ಅತಿಥಿ
ಕೂಡಲೇ ಗಂಗೊಳ್ಳಿಯ ಆ್ಯಂಬುಲೆನ್ಸ್‌ನ ಇಬ್ರಾಹಿಂ ಅವರು ಆಕೆಯನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾ*ತದ ದೃಶ್ಯಾವಳಿ ಮಳಿಗೆಯೊಂದರ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಡಬ : ಪಕ್ಕದ ಮನೆಯಿಂದ ಹಣ ಮತ್ತು ಚಿನ್ನ ಕದ್ದು, ಆ ಹಣದಿಂದ ಸಾಲ ತೀರಿಸಿದ ಬಳಿಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಕಳ್ಳನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಅಂದ ಹಾಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಕಡಬ ತಾಲೂಕಿನ ಮರ್ದಾಳದ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಕಳೆದ ರವಿವಾರ ಅಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ್ ಅವರು ಪತ್ನಿ ಮತ್ತು ಮಗನೊಂದಿಗೆ ಮನೆಗೆ ಬೀಗ ಹಾಕಿ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.
ಪ್ರಕರಣದ ಬೆನ್ನತ್ತಿದ ಕಡಬ ಪೊಲೀಸರು ಮಹತ್ವದ ಸುಳಿವುಗಳ ಆಧಾರದಲ್ಲಿಕಳ್ಳತನ ಆಗಿರುವ ಮನೆಯಿಂದ ಕೂಗಳತೆ ದೂರದಲ್ಲಿರುವ ಮನೆಯ ಯುವಕ ಬಜಕರೆಯ ಸಿನು ಕುರಿಯನ್ ಎಂಬಾತನನ್ನು ಬುಧವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬೈಕ್ ನಲ್ಲಿ ಬಂದು ಕೊಟ್ಟಿಗೆಯಿಂದ ಪಿಕ್ಕಾಸು ತಂದು ಬಾಗಿಲು ಮುರಿದು ಕಳ್ಳತನ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ.
ಸಾಲದ ಸುಳಿಯಲ್ಲಿ ಸಿಲುಕಿದ ಕಾರಣ ಕಳ್ಳತನ ಮಾಡಿರುವುದಾಗಿ ಆತ ತಿಳಿಸಿದ್ದನು. ಕಡಬದ ಟೆಕ್ಸ್ ಟೈಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆತನ ಬಳಿಯಿಂದ ಸದ್ಯ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳ್ಳತನ ಮಾಡಿರುವ ಹಣದಲ್ಲಿ ಸಾಲವನ್ನು ತೀರಿಸಿ ಉಳಿದ ಹಣವನ್ನು ಸಿನು ಕುರಿಯನ್ ತನ್ನ ಬಳಿಯೇ ಇಟ್ಟುಕೊಂಡಿದ್ದ.
ಇದನ್ನೂ ಓದಿ: 14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕಳ್ಳ
ಇದೀಗ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳ್ಳತನ ಮಾಡಿದ ಬಳಿಕ ಪೊಲೀಸರಿಗೆ ಸಿಕ್ಕಿಬೀಳುವ ಹಿನ್ನೆಲೆಯಲ್ಲಿ ಸಿನು ಕುರಿಯನ್ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಆತ ರೈಲು ಹಳಿಯತ್ತ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗಿದ್ದ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಆದರೆ ಈ ವಿಚಾರವನ್ನು ಪೊಲೀಸರು ಇದನ್ನು ಖಚಿತ ಪಡಿಸಿಲ್ಲ. ಒಂದು ವೇಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಈ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಕಡಬ : ಅತಿ ವೇಗದಿಂದ ಚಾಲನೆ ಮಾಡಿದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಕಲ್ಲುಗುಡ್ಡೆ ವಿಶ್ವನಾಥ ಎಂಬವರ ಏಕೈಕ ಪುತ್ರ ಆಶೀಶ್(16) ಎಂಬಾತ ಸಾವನ್ನಪ್ಪಿದ್ದಾನೆ.
ಕಡಬದ ಪೇರಡ್ಕ ಬಳಿ ಈ ದುರಂತ ನಡೆದಿದ್ದು, ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಆಶೀಶ್ ಪೇರಡ್ಕ ಸಾಂತೋಮ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದ.
ಈತ ಶಾಲೆಗೆ ಬರುವಾಗಲೂ ಬೈಕ್ ಹಿಡಿದುಕೊಂಡೇ ಬರುತ್ತಿದ್ದು, ಅದರಂತೆ ಇಂದು ಕೂಡಾ ಶಾಲೆಗೆ ಬರುವಾಗ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬಂದಾಗ ನಿಯಂತ್ರಣ ತಪ್ಪಿದ ಬೈಕ್ ಮೋರಿಗೆ ಬಡಿದು ದುರಂತ ಸಂಭವಿಸಿದೆ.
ಇದನ್ನೂ ಓದಿ: ರಾಷ್ಟ್ರಿಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ಟ್ಯಾಂಕರ್ ವಾಹನ ಪಲ್ಟಿ
ಕಡಬದಲ್ಲಿ ಮಿತಿಮೀರಿದ ವಿದ್ಯಾರ್ಥಿಗಳ ಅತಿ ವೇಗದ ಬೈಕ್ ಸವಾರಿಯಿಂದ ನಿರಂತರ ದುರಂತಗಳಾಗುತ್ತಿವೆ. ವಿದ್ಯಾರ್ಥಿಗಳ ವಾಹನ ತಪಾಸಣೆ ಮಾಡದಿರುವ ಪೊಲೀಸರ ವಿರುದ್ಧ ಇಲ್ಲಿನ ಸಾರ್ವಜನಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
LATEST NEWS
ರಾಷ್ಟ್ರಿಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ಟ್ಯಾಂಕರ್ ವಾಹನ ಪಲ್ಟಿ
ತಣ್ಣೀರುಬಾವಿ ಬೀಚ್: ನಾಳೆ, ನಾಡಿದ್ದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕಳ್ಳ
ಕಾರು ಪಲ್ಟಿ; ಇಬ್ಬರಿಗೆ ಸಣ್ಣ-ಪುಟ್ಟ ಗಾಯ, ಓರ್ವ ಗಂಭೀರ
ಗೋಪಾನ್ ಸ್ವಾಮಿ ಅವರ ದೇಹದಲ್ಲಿ ಯಾವುದೇ ಗಾಯಗಳಿಲ್ಲ: ಪ್ರಾಥಮಿಕ ವರದಿ
ಮಾವನ ದೈ*ಹಿಕ ಕಿರುಕುಳ ಸಹಿಸಲಾಗದೆ ಆ*ತ್ಮಹ*ತ್ಯೆಗೆ ಶರಣಾದ ಸೊಸೆ
Trending
- BIG BOSS6 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS7 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS4 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS3 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?