Friday, August 12, 2022

ಉಡುಪಿ: ಅಮೃತ ಮಹೋತ್ಸವದ ಪ್ರಯುಕ್ತ ಕಾಂಗ್ರೆಸ್‌ನಿಂದ ಕಾಲ್ನಡಿಗೆ ಜಾಥಾ

ಉಡುಪಿ: ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಉಡುಪಿಯ ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.

ಈ ವೇಳೆ ಜಾಥಾವನ್ನು ಉದ್ದೇಶಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಸ್ವಾತಂತ್ರ್ಯ ಸಂಗ್ರಾಮದ ವೀರ-ಯೋಧರ ತ್ಯಾಗ, ಬಲಿದಾನ ಮತ್ತು ಶಾಂತಿ, ಸಾಮರಸ್ಯ ಹಾಗೂ ದೇಶಪ್ರೇಮದ ಸಂದೇಶವನ್ನು ಸಾರುವ ನಿಟ್ಟಿನಲ್ಲಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಕಾಲ್ನಡಿಗೆ-ಜಾಥಾ ಹಮ್ಮಿಕೊಂಡಿದೆ’ ಎಂದು ತಿಳಿಸಿದರು.

ಇನ್ನು ಕಾಪು ವಿಧಾನಸಭಾ ಕ್ಷೇತ್ರದಿಂದ ಆರಂಭಗೊಂಡ ಕಾಲ್ನಡಿಗೆ ಜಾಥಾವು ಕಟಪಾಡಿ, ಮಟ್ಟು, ಸುಭಾಸ್ ನಗರ, ಕುರ್ಕಾಲು – ಶಂಕರಪುರ – ಬಂಟಕಲ್ಲು – ಪಾಂಬೂರು – ಪಂಜಿಮಾರ್ ಮೂಲಕ ಸಾಗಿ ಶಿರ್ವ ಪೇಟೆಯಲ್ಲಿ ಕೊನೆಗೊಂಡಿತು.

ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಅಭಯಚಂದ್ರ ಜೈನ್ ,ಮಯೂರ್ ಜಯಕುಮಾರ್ ,ಧ್ರುವ ನಾರಾಯಣ್, ಮಂಜುನಾಥ್ ಭಂಡಾರಿ, ನವೀನ್ ಚಂದ್ರ ಶೆಟ್ಟಿ, ಎಂ ಎ ಗಪೂರ್ ನವೀನ್ ಚಂದ್ರ ಸುವರ್ಣ, ಅಶೋಕ್ ಕುಮಾರ್ ಕೊಡವೂರು, ರಮೇಶ್ ಕಾಂಚನ್, ಹರೀಶ್ ನಾಯಕ್ ಕಾಪು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

Hot Topics

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...