Connect with us

    LATEST NEWS

    ಲೋಕಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ

    Published

    on

    ಮಂಗಳೂರು/ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

    “ಒಂದು ದೇಶ ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ (129ನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು, ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಂಡಿಸಿದರು.

    ಈ ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಎಸ್ಪಿ ಸಂಸದ ಧರ್ಮೇಂದ್ರ ಯಾದವ್ ಹೇಳಿದ್ದಾರೆ. ಇದೊಂದು ರೀತಿಯಲ್ಲಿ ಸರ್ವಾಧಿಕಾರ ಹೇರುವ ಪ್ರಯತ್ನ. ಆದರೆ, ಬಿಜೆಪಿ ತನ್ನ ಪ್ರಮುಖ ಮಿತ್ರ ಪಕ್ಷವಾದ ಜನತಾದಳ ಯುನೈಟೆಡ್ ನ ಬೆಂಬಲವನ್ನು ಹೊಂದಿದೆ.

    ಮೂರನೇ ಎರಡರಷ್ಟು ಮತಗಳಿಸಲು ವಿಫಲ
    “ಒಂದು ದೇಶ, ಒಂದು ಚುನಾವಣೆ” ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತ ಹಾಕಲಾಯಿತು. ಮಸೂದೆ ಪರವಾಗಿ 269 ಮತ ಹಾಗೂ ವಿರುದ್ದವಾಗಿ 198 ಮತಗಳು ಚಲಾವಣೆಯಾಗಿವೆ.

    ಒಟ್ಟು 461 ಮತಗಳಲ್ಲಿ ಮೂರನೇ ಎರಡರಷ್ಟು ಬಹುಮತಕ್ಕೆ (ಅಂದರೆ, 307) ಅಗತ್ಯವಿತ್ತು. ಆದರೆ ಸರ್ಕಾರವು ಕೇವಲ 269 ಮತಗಳನ್ನು ಪಡೆದುಕೊಂಡಿತು, ಆದರೆ ವಿರೋಧ ಪಕ್ಷವು 198 ಮತಗಳನ್ನು ಗಳಿಸಿದೆ.

    ಇದೇ ಮೊದಲ ಬಾರಿಗೆ ಹೊಸ ಸಂಸತ್ ಭವನದಲ್ಲಿ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಯಿತು. ಮತದಾನದ ನಂತರ ಕಲಾಪವನ್ನು ಮಧ್ಯಾಹ್ನ 3 ಗಂಟೆಯವರೆಗೆ ಒಂದು ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು.

    ಔಪಚಾರಿಕ ನೋಟಿಸ್
    ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡಿಸುವುದಕ್ಕೂ ಮುನ್ನ ಇದನ್ನೂ ವಿರೋಧಿಸಿ, ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಔಪಚಾರಿಕ ನೋಟಿಸ್ ಸಲ್ಲಿಸಿದ್ದರು.

    ಉದ್ದೇಶ ಏನು ?

    ನಿಯಮ 72 ರ ಅಡಿಯಲ್ಲಿ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನೀಡಿದ ನೋಟಿಸ್‌ನಲ್ಲಿ ತಿವಾರಿ ಅವರು ಮಸೂದೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಭಾರತದ ಫೆಡರಲ್ ರಚನೆ ಮತ್ತು ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
    ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ.

    Click to comment

    Leave a Reply

    Your email address will not be published. Required fields are marked *

    kerala

    ದಿ*ಢೀರ್ ಹ*ಚ್ಚಿಕೊಂಡ ಬೆಂ*ಕಿ; ಆರು ಅಂಗಡಿಗಳು ಅ*ಗ್ನಿಗಾ*ಹುತಿ !!

    Published

    on

    ಕಾಸರಗೋಡು: ಆರು ಅಂಗಡಿಗಳಿಗೆ ದಿ*ಢೀರನೆ ಬೆಂ*ಕಿ ಹೊ*ತ್ತಿಕೊಂಡು ಉ*ರಿದ ಘಟನೆ ಶನಿವಾರ (ಡಿ.21) ತಡರಾತ್ರಿ ಪೆರ್ಲ ಬಳಿ ನಡೆದಿದೆ.

    ಪೆರ್ಲ ಪೇಟೆಯಲ್ಲಿ ಇರುವಂತಹ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ, ಪ್ರವೀಣ್ ಆಟೋ ಮೊಬೈಲ್, ಸಾದತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಮೊದಲಾದವು ಸಂಪೂರ್ಣ ಅ*ಗ್ನಿಗಾ*ಹುತಿಯಾಗಿರುವ ಅಂಗಡಿಗಳು ಎಂದು ಗುರುತಿಸಲಾಗಿದೆ.

     

    ಇದನ್ನೂ ಒದಿ : ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!

     

    ಮೂರು ಗಂಟೆಗೂ ಅಧಿಕ ಸಮಯದ ಬಳಿಕ ಬೆಂ*ಕಿಯನ್ನು ನಂದಿಸಲಾಯಿತು. ಶಾ*ರ್ಟ್ ಸ*ರ್ಕ್ಯೂಟ್ ಬೆಂ*ಕಿ ಅ*ನಾಹುತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ರಾತ್ರಿ 12ಗಂಟೆ ಸುಮಾರಿಗೆ ಘಟನೆ ನಡೆದಿದ್ದು , ಉಪ್ಪಳ ಕಾಸರಗೋಡಿನಿಂದ ಆಗಮಿಸಿದ ಐದು ಅ*ಗ್ನಿಶಾಮಕ ದಳದ ಸಿಬ್ಬಂದಿ‌ ಹಾಗೂ ಸ್ಥಳೀಯರ ಸಹಕಾರದಿಂದ ಬೆಂ*ಕಿಯನ್ನು ನಂದಿಸಿ ಹೆಚ್ಚಿನ ಅ*ನಾಹುತ ತಪ್ಪಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Continue Reading

    LATEST NEWS

    ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!

    Published

    on

    ಮಂಗಳೂರು/ಪಂಜಾಬ್: ಕಟ್ಟಡ ಕು*ಸಿತದಿಂದ ಹಿಮಾಚಲ ಪ್ರದೇಶದ 20 ವರ್ಷದ ಯುವತಿ ಸೇರಿದಂತೆ ಇಬ್ಬರು ಮೃ*ತಪಟ್ಟ ಘಟನೆ ಶನಿವಾರ (ಡಿ.21) ಸಂಜೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದ್ದು, ಹಲವರು ಇನ್ನೂ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂಬ ಶಂ*ಕೆ ವ್ಯಕ್ತವಾಗಿ ತೀ*ವ್ರ ಪರಿಶೀಲನೆ ನಡೆಸುತ್ತಿದ್ದಾರೆ.

    ಥಿಯೋಗ್‌ನ ದೃಷ್ಟಿ ವರ್ಮ (20) ಓರ್ವ ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕಳೆದ ರಾತ್ರಿ ಅವಶೇಷಗಳಡಿ ಸಿಲುಕಿಕೊಂಡು ಗಂ*ಭೀರ ಸ್ಥಿತಿಯಲ್ಲಿದ್ದವರನ್ನು ರಕ್ಷಿಸಿ, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದರು. ಇಂದು(ಡಿ।22) ಬೆಳಗ್ಗೆ ಮತ್ತೊಬ್ಬ ವ್ಯಕ್ತಿಯ ಮೃ*ತದೇಹ ಪ*ತ್ತೆಯಾಗಿದ್ದು, ಅವರನ್ನು ಹರಿಯಾಣದ ಅಂಬಾಲಾ ಜಿಲ್ಲೆಯ ಅಭಿಷೇಕ್ ಎಂದು ಗುರುತಿಸಲಾಗಿದೆ.

    ಘಟನೆಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ದೀಪಕ್ ಪರೀಕ್, “ಪ್ರಾಥಮಿಕ ತನಿಖೆಯಲ್ಲಿ, ಕಟ್ಟಡದ ಮಾಲಕರು ಕಟ್ಟಡದ ಪಕ್ಕದಲ್ಲಿರುವ ನಿವೇಶನದಲ್ಲಿ ಯಾವುದೇ ಅನುಮತಿಯಿಲ್ಲದೆ ಮಣ್ಣು ತೋಡುತ್ತಿದ್ದರು” ಎಂದು ತಿಳಿಸಿದ್ದಾರೆ. ಕಳೆದ 17 ಗಂಟೆಗಳಿಂದ ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಇನ್ನೂ ಹಲವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಶಂ*ಕೆ ವ್ಯಕ್ತವಾಗಿದೆ. ಶೇ. 60ರಷ್ಟು ಕಟ್ಟಡದ ಅ*ವಶೇಷಗಳನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಟ್ಟಡದ ಮಾಲಕರಾದ ಪರ್ವಿಂದರ್ ಸಿಂಗ್ ಹಾಗೂ ಗಗನ್ ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಸ್ಥಳದಲ್ಲಿನ ಪರಿಸ್ಥಿತಿಯ ಮೇಲೆ ಫೋನ್ ಮೂಲಕ ನಿಗಾ ವಹಿಸಿದ್ದಾರೆ.

    Continue Reading

    LATEST NEWS

    ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !

    Published

    on

    ಮಂಗಳೂರು/ಮೆಲ್ಬೋರ್ನ್: ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಮೆಲ್ಬೋರ್ನ್ ನ ಎಂಸಿಜಿಯಲ್ಲಿ ಡಿ.26ರಂದು ಆರಂಭವಾಗಲಿದೆ. ಈಗಾಗಲೇ ಸರಣಿ 1-1ರಿಂದ ಸಮಬಲವಾಗಿದ್ದು, ಮುನ್ನಡೆಗಾಗಿ ಉಭಯ ತಂಡಗಳು ಸಿದ್ದತೆಯಲ್ಲಿದೆ.

    ಆದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಅದುವೇ ಗಾಯಾಳುಗಳ ಸಮಸ್ಯೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್ ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

    ಇದನ್ನೂ ಓದಿ: ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !

    ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.

    ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್ ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

    ಕೆ.ಎಲ್.ರಾಹುಲ್ ಗೆ ಗಾಯ

    ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸದ ವೇಳೆ ಕೆ.ಎಲ್.ರಾಹುಲ್ ಅವರ ಕೈ ಬೆರಳಿಗೆ ಏಟು ಬಿದ್ದ ಘಟನೆ ಸಂಭವಿಸಿದೆ. ಕೂಡಲೇ ಚಿಕಿತ್ಸೆ ನೀಡಲಾಯಿತು.

    ಇದೇನೂ ಗಂಭೀರ ಸ್ವರೂಪದ ಗಾಯವಲ್ಲ ಎನ್ನಲಾಗಿದೆಯಾದರೂ, ಮುಂದಿನ ನಿರ್ಣಾಯಕ ಪಂದ್ಯಕ್ಕೂ ಮುನ್ನ ಭಾರತೀಯ ತಂಡದಲ್ಲಿ ಗಾಯದ ಭೀತಿ ಎದುರಾಗಿದೆ.

    Continue Reading

    LATEST NEWS

    Trending