Connect with us

BANTWAL

ಎಸ್‌ಎಸ್‌ಎಫ್‌ನಿಂದ ‘ಕ್ಯಾಂಪಸ್ ಅಸೆಂಬ್ಲಿ’ ಏಕದಿನ ಶಿಬಿರ

Published

on

ಬಂಟ್ವಾಳ: ಎಸ್‌ಎಸ್‌ಎಫ್ ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ‌ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಭಾನುವಾರ ಬಂಟ್ವಾಳದ ಬಿ.ಸಿರೋಡ್‌ನಲ್ಲಿ ‘ಕ್ಯಾಂಪಸ್ ಅಸೆಂಬ್ಲಿ’ ಎಂಬ ಏಕದಿನ ಶಿಬಿರ ನಡೆಯಿತು.


ನೈತಿಕತೆ, ಸಮಗ್ರತೆ ಮತ್ತು ಸಮರ್ಪಣೆ ಎಂಬ ವಿಚಾರವಾಗಿ ಶಿಬಿರ ನಡೆದಿದ್ದು, ಶಿಬಿರದಲ್ಲಿ ವಿವಿಧ ವಿಚಾರಗಳ ಕುರಿತಾಗಿ ವಿಷಯ ಮಂಡನೆ ನಡೆಯಿತು.
ಸುಲ್ತಾನುಲ್ ಉಲಮಾ ಎಪಿ ಅಬೂಬಕರ್ ಮುಸ್ಲಿಯಾರ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶುಭ ಆಶೀರ್ವಾದ ನೀಡಿದರು.

ನವಾಝ್ ಸಖಾಫಿ ಅಡ್ಯಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಅಸೆಂಬ್ಲಿ ಗೆ ಸೈಯ್ಯದ್ ಮದಕ ತಂಙಲ್ ದುಆ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಕರ್ನಾಟಕ ರಾಜ್ಯ ವಕ್ಫ್ ಚೇರ್‌ಮ್ಯಾನ್‌ ಶಾಫಿ ಸಅದಿ, ಮುಹಮ್ಮದ್ ಅಲಿ ಸಖಾಫಿ ಸುರಿಬೈಲ್
ಜಿಲ್ಲಾ ವಕ್ಫ್ ಅಧ್ಯಕ್ಷ ನಾಸಿರ್ ಲಕ್ಕಿ ಸ್ಟಾರ್, ಮುಹಮ್ಮದ್ ಹಾಜಿ ಸಾಗರ್, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಭಾಗವಹಿಸಿದ್ದರು.

ರಾಶಿದ್ ಬುಖಾರಿ,ಡಾ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ನೌಫಲ್ ಸಖಾಫಿ ಕಳಸ, ಸಿರಾಜುದ್ದೀನ್ ಸಖಾಫಿ ಕನ್ಯಾನ, ಫಾರೂಕ್ ಸಖಾಫಿ ಕಾಟಿಪಳ್ಳ, ಶಾಹಿನ್ ಅಲಿ ವಿಚಾರ ಮಂಡಿಸಿದರು.


ಇದೇ ವೇಳೆ ಕರ್ನಾಟಕ ವಕ್ಫ್ ಬೋರ್ಡ್ ಚಯರ್ ಮ್ಯಾನ್ ಶಾಫಿ ಸ‌ಅದಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್‌ಎಸ್‌ಎಫ್, ಎಸ್‌ವೈಎಸ್‌, ಕೆಸಿಎಫ್ ವತಿಯಿಂದ ಬಂಟ್ವಾಳ ವಿಭಾಗಕ್ಕೆ ನೀಡಲಾದ ನೂತನ ಆಂಬುಲೆನ್ಸ್‌ನ ಕೀಯನ್ನು ಎಪಿ ಉಸ್ತಾದ್ ಹಸ್ತಾಂತರಿಸಿದರು.

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending