Friday, July 1, 2022

ಶವರ್ಮಾ ಸೇವಿಸಿದ ಬಾಲಕಿ ಸಾವು: 18 ವಿದ್ಯಾರ್ಥಿಗಳು ಅಸ್ವಸ್ಥ

ತಿರುವನಂತಪುರ: ಶವರ್ಮಾ ಸೇವಿಸಿದ ನಂತರ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನ ಚೆರುವತ್ತೂರು ಪಟ್ಟಣದಲ್ಲಿ ನಡೆದಿದೆ.


ಇದೇ ರೆಸ್ಟೋರೆಂಟ್‌ನಲ್ಲಿ ಆಹಾರ ಸೇವಿಸಿದ್ದ ಉಳಿದ 18 ವಿದ್ಯಾರ್ಥಿಗಳು ಕೂಡ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವನಂದನಾ (16) ಮೃತಪಟ್ಟ ಬಾಲಕಿ.

ಮಕ್ಕಳ ತಜ್ಞರನ್ನೊಳಗೊಂಡ ವೈದ್ಯರ ತಂಡವು ಎಷ್ಟೇ ಪ್ರಯತ್ನಿಸಿದರೂ ದೇವನಂದನಾಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಫುಡ್ ಪಾಯಿಸನ್‌ನಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂಬುವುದು ತಿಳಿದುಬಂದಿದೆ.

ಆಸ್ಪತ್ರೆಗೆ ದಾಖಲಾದ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಎ.ವಿ ರಾಮದಾಸ್ ಹೇಳಿದ್ದಾರೆ.

ಘಟನೆಯ ಬಳಿಕ ರೆಸ್ಟೋರೆಂಟ್‌ನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ನೀರಿನಿಂದ ಮುಳುಗಡೆಯಾದ ಕೃಷಿಭೂಮಿ-ಅಪಾರ ಬೆಳೆ ನಷ್ಟ

ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಗ್ರಾಮ ಜಲಾವೃತಗೊಂಡು ಕೃಷಿ ಭೂಮಿಗೆ ನೀರು ನುಗ್ಗಿ ನೂರಾರು ಎಕರೆ ಕೃಷಿಭೂಮಿ ನೀರಿನಲ್ಲಿ ಮುಳುಗಡೆಯಾದ ಘಟನೆ ಉಡುಪಿಯ ಬೈಂದೂರಿನ ನಾವುಂದದಲ್ಲಿ ನಡೆದಿದೆ.ರೈಲ್ವೆ ಮಾರ್ಗದ...

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...