ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾರೆ.
ಜ್ಞಾನಮುರ್ತಿ ತಿಮ್ಮಣ್ಣ, ಮೃತ ದುರ್ದೈವಿ.
ಕೊಪ್ಪಳದ ಚಿಕ್ಕ ಬಗನಾಳ ಗ್ರಾಮದ ಜ್ಞಾನಮೂರ್ತಿ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು. ನಿನ್ನೆ ನೆಚ್ಚಿನ ನಟನ ಅಗಲಿಕೆಯ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದರು.
ಅದೇ ದುಃಖದಲ್ಲೇ ಮಲಗಿದ್ದ ಅಭಿಮಾನಿ ಇಂದು ಬೆಳಗಿನ ಜಾವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.