ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಿದ್ದು, ಆದಿತ್ಯನಾಥ್ ಸರ್ಕಾರದ ಮೂರನೇ ಸಚಿವ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.
ಉತ್ತರ ಪ್ರದೇಶದ ಸಚಿವ ಧರಂ ಸಿಂಗ್ ಸೈನಿ ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದು,
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಬಿಜೆಪಿ ತೊರೆಯುವ ಮೂಲಕ ಕಮಲ ಪಾಳಯಕ್ಕೆ ಶಾಕ್ ನೀಡಿದ್ದಾರೆ.
ಈ ಮೂಲಕ ಧರಂ ಸಿಂಗ್ ಸೈನಿ ಕಳೆದ 3 ದಿನಗಳಿಂದ ಬಿಜೆಪಿಗೆ ರಾಜೀನಾಮೆ ನೀಡಿದ 9ನೇ ಶಾಸಕ ಹಾಗೂ 3ನೇ ಸಚಿವರಾಗಿದ್ದಾರೆ.
ನಿನ್ನೆಯಷ್ಟೇ ಧರಂ ಸಿಂಗ್ ಸೈನಿ ಅವರಿಗೆ ರಾಜ್ಯ ಸರ್ಕಾರ ಮಂಜೂರು ಮಾಡಿದ ಭದ್ರತೆ ಮತ್ತು ನಿವಾಸವನ್ನು ಹಿಂದಿರುಗಿಸಿದ್ದರು. ಹೀಗಾಗಿ, ಅವರು ಬಿಜೆಪಿಯನ್ನು ತೊರೆಯಲಿದ್ದಾರೆ ಎಂಬ ವದಂತಿಗಳು ಎದ್ದಿದ್ದವು.
ಇಂದು ಅವರು ರಾಜೀನಾಮೆ ನೀಡಿದ್ದಾರೆ. ಧರಂ ಸಿಂಗ್ ಸೈನಿ ಉತ್ತರ ಪ್ರದೇಶದ ಆಯುಷ್, ಆಹಾರ ಭದ್ರತೆ ಮತ್ತು ಔಷಧ ಆಡಳಿತ ಸಚಿವರಾಗಿದ್ದಾರೆ.