ಉಳ್ಳಾಲ ಹೆದ್ದಾರಿಯಲ್ಲಿ ರಸ್ತೆ ಅಪಘಾತ : ಬಾಲಕ ಐಯಾನ್ ಗಂಭೀರ ಗಾಯ..!
ಮಂಗಳೂರು : ಮಂಗಳೂರು ಹೊರವಲಯದ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದೆ. ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದ್ದು ಬಾಲಕ ಗಂಭೀರ ಗಾಯಗೊಂಡಿದ್ದಾನೆ.
ಗಾಯಗೊಂಡ ಬಾಲಕನನ್ನು 16 ವರ್ಷದ ಅಯಾನ್ ಎಂದು ಗುರುತ್ತಿಸಲಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಯಾನ್ ನ ಮನೆಯ ಮುಂದೆಯೇ ಈ ಅಪಘಾತ ಸಂಭವಿಸಿದೆ.
ಅಂಗಡಿಗೆ ತೆರಳಿ ಅಯಾನ್ ವಾಪಾಸ್ಸಾಗುತ್ತಿದ್ದಾಗ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಗುದ್ದಿದ್ದು ಬಳಿಕ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.