Wednesday, December 1, 2021

ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ ಕೆಜಿಗೆ 120 ರೂ..!

ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ ಕೆಜಿಗೆ 120 ರೂ..!

ಬೆಂಗಳೂರು : ಭಾರೀ ಮಳೆಯ ಕಾರಣ ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಒಂದು ಕೆಜಿ ಈರುಳ್ಳಿ ದರ 120 ರೂ. ತಲುಪಿದೆ.ಕೆಜಿಗೆ 70 ರೂ. ಇದ್ದ ಈರುಳ್ಳಿ ಬೆಲೆ 120 ರೂಪಾಯಿಗೆ ಏರಿಕೆಯಾಗಿದೆ.

ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕದಲ್ಲಿ ಭಾರೀ ಮಳೆಯ ಕಾರಣ ಈರುಳ್ಳಿ ಬೆಳೆ ಹಾಳಾಗಿ ಪೂರೈಕೆ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಈರುಳ್ಳಿ ದರ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೋಲ್ಸೇಲ್ ಈರುಳ್ಳಿ ಕೆಜಿಗೆ 90 ರೂ.ಗೆ ಮಾರಾಟವಾಗಿದ್ದು ನಗರ ಮತ್ತು ಗ್ರಾಮಾಂತರ ಪ್ರದೇಶದ ಅಂಗಡಿಗಳಲ್ಲಿ 110 ರೂಪಾಯಿವರೆಗೆ ಮಾರಾಟ ಮಾಡಲಾಗುತ್ತಿದೆ.

ಹುಬ್ಬಳ್ಳಿ, ಬೆಳಗಾವಿಯಿಂದ ಪೂರೈಕೆಯಾಗುತ್ತಿದ್ದ ಈರುಳ್ಳಿ ಪ್ರಮಾಣ ಕಡಿಮೆಯಾಗಿದೆ.

ಇನ್ನೂ ಬೆಲೆ ಏರಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈರುಳ್ಳಿ ಮೇಲಿನ ಆಮದು ನಿರ್ಬಂಧಗಳನ್ನು ಸಡಿಲಿಸಿದೆ.

ಡಿಸೆಂಬರ್ 15 ಆಮದು ಮೇಲಿನ ನಿರ್ಬಂಧ ಸಡಿಲಕ್ಕೆ ಮಾಡಿದ್ದು ದೇಶಿಯ ಪೂರೈಕೆ ಹೆಚ್ಚಳ, ಈ ಮೂಲಕ ಬೆಲೆ ಏರಿಕೆ ನಿಯಂತ್ರಣಕ್ಕೆ ವಾಣಿಜ್ಯ ಸಚಿವಾಲಯ ಕ್ರಮ ಕೈಗೊಂಡಿದೆ.

ಈರುಳ್ಳಿಗೆ ಭರ್ಜರಿ ಬೆಲೆ ಬಂದಿದ್ದರೂ ರೈತರ ಬಳಿ ಈರುಳ್ಳಿ ಇಲ್ಲವಾಗಿದೆ. ನೆರೆಹಾನಿಯಿಂದ ಹೊಲದಲ್ಲಿನ ಬೆಳೆ ಹಾಳಾಗಿದೆ.

ಕೊಯ್ಲು ಮಾಡಿದ್ದ ಈರುಳ್ಳಿಯೂ ಕೊಳೆತಿದೆ. ಅಲ್ಪಸ್ವಲ್ಪ ಈರುಳ್ಳಿಯನ್ನು ರೈತರು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...