ಮಂಗಳೂರು: ಅಪರಿಚಿತನೋರ್ವ ಬ್ಯಾಂಕ್ ಸಿಬ್ಬಂದಿ ಎಂದು ಕರೆ ಮಾಡಿದ ಬಳಿಕ ಬ್ಯಾಂಕ್ ಖಾತೆಯಿಂದ 45 ಸಾವಿರ ರೂಪಾಯಿ ಕಟ್ ಆಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮೋಸ ಹೋದಾತ ಸದ್ಯ ಮಂಗಳೂರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾನೆ. ನಗರದ ಮಲ್ಲಿಕಟ್ಟೆ ಬ್ರ್ಯಾಂಚ್ನ ಎಸ್.ಬಿ.ಐ ಖಾತೆದಾರರೊಬ್ಬರಿಗೆ ಜೂನ್ 12 ರ ಬೆಳಗ್ಗೆ 11.40 ಕ್ಕೆ ಅಪರಿಚಿತ ವ್ಯಕ್ತಿ ಬ್ಯಾಕ್ ಸಿಬ್ಬಂದಿಯೆಂದು ಕರೆ ಬರುತ್ತೆ. ಆತ 9874361421 ನಂಬರ್ನಿಂದ ಕರೆ ಮಾಡಿ, ಎಸ್.ಬಿ.ಐನಿಂದ ಮಾತಾಡುತ್ತಿದ್ದೇನೆ. ಕೆ.ವೈಸಿ ಬಗ್ಗೆ ಮಾಹಿತಿ ಬೇಕಿತ್ತು ಎಂದು ಕೇಳಿದ್ದಾನೆ. ಪ್ರತಿಕ್ರಿಯಿಸದಿದ್ದಕ್ಕೆ ಆತ ಮತ್ತೆ “ನಾವು ಕೆವೈಸಿ ವಿಭಾಗದಿಂದ ಮಾತಾಡುತ್ತಿದ್ದೇವೆ ಎಂದು ಜೋರಾಗಿ ಮಾತಾಡಿದ್ದಾನೆ. ಇದನ್ನು ಗಮನಿಸಿದ ವ್ಯಕ್ತಿ ಇದೊಂದು ಫ್ರಾಡ್ ಕರೆ ಇರಬೇಕೆಂದು ಭಾವಿಸಿ, ಕಾಲ್ ಕಟ್ ಮಾಡಿದ್ದಾರೆ. ಕೂಡಲೇ ಬ್ಯಾಂಕ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ, ಇತ್ತೀಚಿಗೆ ಮೋಸ ಹೋದ ವ್ಯಕ್ತಿ ಅಕೌಂಟ್ ಪರಿಶೀಲಿಸಿರಲಿಲ್ಲ. ತಡವಾಗಿ ಚೆಕ್ ಮಾಡಿದಾಗ ಹಂತಹಂತವಾಗಿ ವ್ಯಕ್ತಿಯ ಖಾತೆಯಿಂದ 45 ಸಾವಿರ ರೂ.ಕಡಿತವಾಗಿದೆ. ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರು: ಕೆಲವರೆಲ್ಲಾ ಲಕ್ಷ-ಲಕ್ಷ ಕೊಟ್ಟು ಮೊಬೈಲ್ ತೆಗೆದುಕೊಳ್ಳುತ್ತಾರೆ. ಆದ್ರೆ, ಅದಕ್ಕಿಂತ ಕಡಿಮೆಯಲ್ಲಿ ಸಿಗುವ ಚಾರ್ಜರ್ ತೆಗೆದುಕೊಳ್ಳಲು ಜಿಪುಣತನ ತೋರಿಸುತ್ತಾರೆ. ಹಳೇ ಚಾರ್ಜರ್ ಗಳಿಗೆ ಗಮ್ ಟೇಪ್, ಪ್ಲಾಸ್ಟರ್ ಅಥವಾ ರಬ್ಬರ್ ಹಾಕಿ ಮೊಬೈಲ್ ಚಾರ್ಜ್ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಅಧ್ಯಯನ ಒಂದು ದೃಢ ಪಡಿಸಿದೆ.
ಇದು ತುಂಬಾ ಮನೆಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ದೃಶ್ಯವಾಗಿದೆ. ಯುನೈಟೆಡ್ ಕಿಂಗ್ ಡಮ್ ನ ಎಲೆಕ್ಟ್ರಿಕಲ್ ಸೇಫ್ಟಿ ಇನ್ ಸ್ಟಿಟ್ಯೂಟ್ ಈ ಬಗ್ಗೆ ಅಧ್ಯಯನ ನಡೆಸಿದೆ. ಕಳಪೆ ಗುಣಮಟ್ಟದ ಚಾರ್ಜರ್ ಹಾಗೂ ಚೈನೀಸ್ ಚಾರ್ಜರ್ ಗಳಿಂದಲೂ ಅಪಘಾತಗಳು ಸಂಭವಿಸುತ್ತಿವೆ. ಕಳೆದ ಐದು ವರ್ಷಗಳಲ್ಲಿ, ಅಪಘಾತಗಳಿಗೆ ಗುರಿಯಾಗುವ ಎಲೆಕ್ಟ್ರಾನಿಕ್ ಯಂತ್ರೋಪಕರಣಗಳ ಕುರಿತು ವಿವಿಧ ದೇಶಗಳಲ್ಲಿ ಅಧ್ಯಯನಗಳನ್ನು ನಡೆಸಿದೆ.
ನೀವು ಎಷ್ಟೇ ದುಬಾರಿ ಮೊಬೈಲ್ ತೆಗೆದುಕೊಂಡರು ಕೂಡ, ಕಡಿಮೆ ಬೆಲೆಯ ಚಾರ್ಜರ್ ನಿಮ್ಮ ಮೊಬೈಲ್ ಹಾಳು ಮಾಡುತ್ತವೆ. ಇನ್ನೂ, ಚಾರ್ಜರ್ ಖರೀದಿಸುವಾಗ ತೂಕವಿಲ್ಲದೆ ಹಗುರವಾಗಿ ಕಂಡರೆ ಅದು ಒಳ್ಳೆಯದಲ್ಲ. ಬದಲಾಗಿ ಅದು ಉತ್ತಮ ಗುಣಮಟ್ಟದಿಂದ ಕೂಡಿರುವುದಿಲ್ಲ. ಉತ್ತಮವಾದ ಚರ್ಜಾರ್ ಗಳು ಸ್ವಲ್ಪ ಭಾರವಾಗಿರುತ್ತದೆ.
ಇದನ್ನೂ ಓದಿ: ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯಿಂದ ಸಿಹಿಸುದ್ಧಿ !!
ಇತ್ತೀಚೆಗೆ, ಪ್ರಪಂಚದಾದ್ಯಂತ ಸೆಲ್ ಫೋನ್ ಗಳು ಸ್ಪೋಟಗೊಳ್ಳುವುದನ್ನು ಕೇಳಿರಬಹುದು. ಇದಕ್ಕೆ ಮುಖ್ಯ ಕಾರಣ ಚಾರ್ಜರ್ ಗಳು ಎಂದು ಹೇಳಿದರೆ ನೀವು ನಂಬಲೇ ಬೇಕು. ಹಳೆಯ ಚಾರ್ಜರ್ ಗಳನ್ನು ಜನರು ಬಳಸಲು ಇನ್ನೊಂದು ಕಾರಣ, ಮೊಬೈಲ್ ಕಂಪನಿಗಳು ಫೋನ್ ಜೊತೆ ಚಾರ್ಜರ್ ಕೊಡುವುದನ್ನು ನಿಲ್ಲಿಸಿದೆ. ಇದರಿಂದ ಹಳೆಯ ಚಾರ್ಜರ್ ಗಳಿಗೆ ಗಮ್ ಟೇಪ್, ಪ್ಲಾಸ್ಟರ್ ಸುತ್ತಿ ಅಥವಾ ಲಬ್ಬರ್ ಸುತ್ತಿ ಮತ್ತೆ ಮತ್ತೆ ಉಪಯೋಗಿಸುತ್ತಾರೆ. ಇಂತಹ ಚಾರ್ಜರ್ ಗಳನ್ನು ಬಳಸುವುದರಿಂದ ವಿದ್ಯುತ್ ಅಪಘಾತ ಸಂಭವಿಸಬಹುದು ಎಂದು ಅಧ್ಯಯನ ಹೇಳಿದೆ.
ಗಮ್ ಟೇಪ್ ಅಥವಾ ಪ್ಲಾಸ್ಟರ್ ಸುತ್ತಿದ ಚಾರ್ಜಿಂಗ್ ಕೇಬಲ್ ವೈರ್ ಗಳಿಂದ ಶಾರ್ಟ್ ಸರ್ಕ್ಯೂಟ್ ಉಂಟಾದ ಘಟನೆಗಳು ನಡೆದಿವೆ. ಒಂದು ವೇಳೆ ಚಾರ್ಜಿಂಗ್ ಕೇಬಲ್ ಎಲ್ಲಿಯಾದರೂ ಕತ್ತರಿಸಲ್ಪಟ್ಟರೆ ಮತ್ತು ಅದರ ಒಳ ಭಾಗವು ತುಂಬಾ ಕಾಣುತ್ತಿದ್ದರೆ, ಅದನ್ನು ಬಳಸುವುದನ್ನು ನಿಲ್ಲಿಸಿ.
ಈ ಕತ್ತರಿಸಲ್ಪಟ್ಟ ಚಾರ್ಜಿಂಗ್ ಕೇಬಲ್ ವೈರ್ ಗಳಿಂದ ಶಾರ್ಟ್ ಸರ್ಕ್ಯೂಟ್ ಗಳಂತಹ ಘಟನೆಗಳು ಸಂಭವಿಸಿದೆ. ಮೊಬೈಲ್ ಫೋನ್ ಗಳು ಮಾತ್ರವಲ್ಲದೆ, ಟ್ಯಾಬ್, ಲ್ಯಾಪ್ ಟಾಪ್, ಟ್ರಿಮ್ಮರ್ ಹಾಗೂ ಇನ್ನಿತರೆ ಯಂತ್ರೋಪಕರಣಗಳಲ್ಲಿಯೂ ಹಾನಿಗೊಳಗಾದ ಕೇಬಲ್ ಗಳಿರುವ ಹಳೆಯ ಚಾರ್ಜರ್ ಗಳನ್ನು ಉಪಯೋಗಿಸಬಾರದು.
ಆದಷ್ಟು ಉತ್ತಮ ಚಾರ್ಜರ್ ಕೇಬಲ್ ಗಳನ್ನು ಬಳಸುವುದರಿಂದ ಮೊಬೈಲ್ ಸುರಕ್ಷಿತವಾಗಿರುತ್ತದೆ ಮತ್ತು ಜಾಸ್ತಿ ಬಾಳಿಕೆ ಬರುತ್ತದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ನೀವು ಸುರಕ್ಷಿತವಾಗಿರುತ್ತಿರ.
ಮಂಗಳೂರು/ಬೆಂಗಳೂರು: ಹಿಂದೂ ದೇವರುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಹಾಕಿದ ವ್ಯಕ್ತಿಯ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಕೊಲ್ಲೂರು ಮೂಕಾಂಬಿಕೆ ಅಮ್ಮನ ಬಗೆಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಾಘವೇಂದ್ರ ಭಟ್ ಈ ಕುರಿತು ಮಾತನಾಡಿ, “ಅಂಜುಮ್ ಶೇಖ್ ಎಂಬಾತ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಕೊಲ್ಲೂರು ಮೂಕಾಂಬಿಕೆ, ತಿರುಪತಿ ತಿಮ್ಮಪ್ಪ ಮತ್ತು ಗಣೇಶ ದೇವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಈ ಕಾಮೆಂಟ್ನಿಂದ ನಮಗೆ ಅತ್ಯಂತ ನೋವುಂಟು ಆಗಿದೆ ಇಂತವರ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಧರ್ಮದ ಬಗ್ಗೆ ಈ ರೀತಿ ಕಾಮೆಂಟ್ ಮಾಡಿದ್ದಕ್ಕೆ ಪೊಲೀಸ್ ಠಾಣೆ, ಶಾಸಕರ ಮನೆಗೆ ಬೆಂಕಿ ಹಚ್ಚಿದ್ದಾರೆ. “ನಾವು ಅವರ ತರಹ ಬೆಂಕಿ ಹಚ್ಚುವ ಕೆಲಸ ಮಾಡಲ್ಲ. ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದೇವೆ. ನಾವು ರಾಮನ ತರಹ ಇದ್ದೀವಿ, ಆದರೆ ಪರಶುರಾಮ ಆಗಬೇಕಾಗುತ್ತದೆ” ಎಂದು ದೂರಿನಲ್ಲಿ ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ಸೂಕ್ಷ್ಮ ರಿತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ರ ರಿಯಾಲಿಟಿ ಶೋ 119ನೇ ದಿನಕ್ಕೆ ಕಾಲಿಡುತ್ತಿದೆ. ಅದರ ನಡುವೆ ವಾರ ವಾರ ಎಲಿಮಿನೇಟ್ ಪ್ರಕ್ರಿಯೆ ತೀವ್ರ ಕೂತುಹಲ ಕೆರಳಿಸಿದೆ. ಈ ವಾರ ಬಿಗ್ ಬಾಸ್ ನಿಂದ ಧರ್ಮ ಕೀರ್ತಿರಾಜ್ ಎಲಿಮೀನೆಟ್ ಆಗಿ ಹೊರಬಂದಿದ್ದಾರೆ.
ಸದಾ ನಗುಮುಖದಲ್ಲೇ ಕಾಣಿಸಿಕೊಳ್ಳುವ ಧರ್ಮ, ಯಾರ ತಂಟೆಗೂ ಹೊಗುತ್ತಿರಲಿಲ್ಲ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದ್ದರು. ಆದರೆ ಧರ್ಮ ಮತ್ತು ಅನುಷಾ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದರು. ಆದರೆ ಅನುಷಾ ಈ ಮೊದಲೇ ಎಲಿಮಿನೇಟ್ ಆಗಿದ್ದರು. ಇದು ಧರ್ಮ ಅವರಿಗೆ ಬೇಸರ ಮೂಡಿಸಿತ್ತು.
ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಕೊನೆಯ ಹಂತದಲ್ಲಿ ಧರ್ಮ ಹಾಗೂ ಚೈತ್ರಾ ಉಳಿದುಕೊಂಡಿದ್ದರು. ಫೈನಲ್ ಆಗಿ ಧರ್ಮ ಮನೆಯಿಂದ ಹೊರಬಂದರು. ಧರ್ಮ ಬೇಸರದಿಂದಲೇ ಹೊರನಡೆದರು.
ಧರ್ಮ ಸದಾ ಕೂಲ್ ಆಗಿಯೇ ಇರುತ್ತಾರೆ. ಅವರು ಯಾವುದೇ ಕಿತ್ತಾಟಕ್ಕೂ ಹೋಗುತ್ತಿರಲಿಲ್ಲ. ತಾಳ್ಮೆ ಕಳೆದುಕೊಂಡು ಒಂದು ದಿನ ಕೂಗಾಡಿದವರಲ್ಲ. ಇನ್ನೊಂದು ಕಡೆ, ಧರ್ಮ ಎಲ್ಲಿಯೂ ಕೂಡ ಹೈಲೈಟ್ ಆಗುತ್ತಿರಲಿಲ್ಲ. ಇವರಿಗಿಂತ ನಂತರ ವೈಲ್ಡ್ ಕಾರ್ಡ್ ನಲ್ಲಿ ಬಂದ ಹನುಮಂತ, ರಜತ್ ಹಾಗೂ ಶೋಭಾ ಶೆಟ್ಟಿ ಈಗಗಾಲೇ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ.
ಧರ್ಮ ಶಾಂತತೆಯ ಸ್ವರೂಪವನ್ನು ಹೊಂದಿರುವ ವ್ಯಕ್ತಿತ್ವ. ಈ ಮೊದಲು ಎಲಿಮಿನೇಟ್ ಆಗಿರುವ ಲಾಯರ್ ಜಗದೀಶ್ ವಿರುದ್ದ ಇಡೀ ಮನೆಯೇ ತಿರುಗಿ ಬಿದ್ದಾಗಲೂ ಧರ್ಮ ಫೈಟ್ ಗೆ ಹೋಗಿರಲಿಲ್ಲ. ಇದು ಅವರ ಮುಗ್ದತೆ ಮತ್ತು ತಾಳ್ಮೆಯ ಸ್ವರೂಪವನ್ನು ತೋರಿಸುತ್ತದೆ.
ಬಿಗ್ ಬಾಸ್ ಮನೆ ಎಂದರೆ ನೆನಪಾಗುವುದೇ ಜಗಳ, ಕೋಪ ಮತ್ತು ಮಾತುಗಾರಿಕೆ. ಎಲ್ಲೋ ಒಂದು ಕಡೆ ಧರ್ಮ ಅವರಿಗೆ ತಮ್ಮ ತಾಳ್ಮೆಯೇ ಮುಳುವಾಗಿ ಎಲಿಮಿನೇಟ್ ಆಗಲು ಕಾರಣವಾಯಿತು ಎಂದು ಹೇಳಬಹುದು.