Home ಕರ್ನಾಟಕ ವಾರ್ತೆ ಕೊರೊನಾ ಎಫೆಕ್ಟ್: ಆನ್ ಲೈನ್ ನಲ್ಲಿ ದೇವರ ದರ್ಶನಕ್ಕೆ ಅವಕಾಶ.!!

ಕೊರೊನಾ ಎಫೆಕ್ಟ್: ಆನ್ ಲೈನ್ ನಲ್ಲಿ ದೇವರ ದರ್ಶನಕ್ಕೆ ಅವಕಾಶ.!!

ಕೊರೊನಾ ಎಫೆಕ್ಟ್: ಆನ್ ಲೈನ್ ನಲ್ಲಿ ದೇವರ ದರ್ಶನಕ್ಕೆ ಅವಕಾಶ..!!

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಇಡೀ ದೇಶವೇ ನಲುಗಿ ಹೋಗಿದೆ. ಈ ನಡುವೆ ಮಹಾಮಾರಿಯಿಂದ ಕಾಪಾಡು ಅಂತ ದೇವರನ್ನು ಬೇಡಿಕೊಳ್ಳಲು, ದೇವಸ್ಥಾನಕ್ಕೂ ಕಾಲಿಡುವಂತಿಲ್ಲ.

ಪರಿಸ್ಥಿತಿ ಹೀಗಿರುವಾಗ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶೀಘ್ರದಲ್ಲೇ ಆನ್ ಲೈನ್ ನಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ ಅನ್ನೋ ಸಿಹಿ ಸುದ್ದಿ ನೀಡಿದ್ದಾರೆ.

ಸರ್ಕಾರ ಕೂಡ ಈ ಬಗ್ಗೆ ಚಿಂತನೆ ನಡೆಸಿದೆ ಎಂದ ಸಚಿವ ಕೋಟ, ದೇವಾಲಯಗಳಲ್ಲಿ ಆನ್ ಲೈನ್ ಪೂಜೆಗೆ ಅವಕಾಶ ನೀಡಲು ನಿರ್ಧಾರಿಸಲಾಗಿದೆ. ಮೇ 26ರಿಂದ ಅವಕಾಶ ನೀಡಲಾಗುವುದು ಎಂದರು.

ರಾಜ್ಯದ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡೇಶ್ವರಿ, ಕಟೀಲು ದುರ್ಗಾಪರಮೇಶ್ವರಿ, ಬನಶಂಕರಿ ಸೇರಿದಂತೆ 50 ದೇವಾಲಯಗಳಲ್ಲಿ ಅವಕಾಶ ನೀಡಲಾಗುವುದು ಎಂದರು.

ವೆಬ್ ಸೈಟ್ ಒಂದನ್ನು ಅಭಿವೃದ್ಧಿ ಪಡಿಸಲಾಗಿದೆ ಆ ವೆಬ್ ಸೈಟ್ ಮುಖಂತರ ಜನರು ದೇವರ ದರ್ಶನ ಕುರಿತು ಮಾಹಿತಿ ಪಡೆದುಕೊಳ್ಳಬಹುದು.

ಪೂಜೆ ಸೇರಿದಂತೆ ಲೈವ್ ದರ್ಶನ ವ್ಯವಸ್ಥೆ ಮಾಡಲಾಗುವುದು. ರಥೋತ್ಸವದಂತಹ ಕಾರ್ಯಕ್ರಮ, ಹೆಚ್ಚು ಜನ ಸೇರುವ ಕಾರ್ಯಕ್ರಮ ಹೊರತುಪಡಿಸಿ ಇನ್ನೆಲ್ಲಾ ರೀತಿಯ ಕಾರ್ಯಕ್ರಮ ತೋರಿಸಲಾಗುವುದು ಎಂದರು.

ಭಕ್ತರು ಆನ್ ಲೈನ್ ಮೂಲಕ ಹಣ ಪಾವತಿಸಿ ತಮ್ಮ ಹೆಸರಿನಲ್ಲಿ 20 ಸೇವೆ ಪೂಜೆ ಮಾಡಿಸಬಹುದು.

ಈ ಕುರಿತು ಸರಕಾರ ಮುಂದಿನ ದಿನಗಳಲ್ಲಿ ಆದೇಶ ಹೊರಡಿಸುವ ನಿರೀಕ್ಷೆ ಇದೆ ಎಂದವರು ಮಾಹಿತಿ ನೀಡಿದ್ದಾರೆ.

- Advertisment -

RECENT NEWS

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ...

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ ಬೆಂಗಳೂರು: ಹಲವಾರು ದಿಟ್ಟ ಕ್ರಮಗಳಿಂದ ಸರಕಾರವನ್ನು ಹಲವು ಬಾರಿ ಎದುರು ಹಾಕಿಕೊಂಡಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು...