Connect with us

    ಪ್ರಶ್ನೆ ಮಾಡುತ್ತಾ ಕುಳಿತುಕೊಳ್ಳುವುದರಿಂದ ಸಮಸ್ಯೆ ಬಗೆಹರಿಯಲ್ಲ : ಟಿವಿ9 ಸುಕನ್ಯಾ

    Published

    on

    ಪ್ರಶ್ನೆ ಮಾಡುತ್ತಾ ಕುಳಿತುಕೊಳ್ಳುವುದರಿಂದ ಸಮಸ್ಯೆ ಬಗೆಹರಿಯಲ್ಲ : ಟಿವಿ9 ಸುಕನ್ಯಾ

    ಮಂಗಳೂರು :  ಯಾವುದೇ ಸಮಸ್ಯೆ ಬಗೆ ಹರಿಯುವುದಿಲ್ಲ. ಪ್ರಶ್ನೆಗಳಿಗೆ ಉತ್ತರವಾಗಿ ಬೆಳೆಯುವುದೇ ಮಹಿಳಾ ತಾಕತ್ತು ಎಂದು ಟಿವಿ9 ಸುದ್ದಿವಾಹಿನಿಯ ನಿರೂಪಕಿ ಸುಕನ್ಯಾ ಹೇಳಿದರು.
    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಗರದ ಪುರಭವನದಲ್ಲಿ ನಡೆದ ಪತ್ರಕರ್ತರ35ನೇ ರಾಜ್ಯ ಸಮ್ಮೇಳನದ ಎರಡನೇ ದಿನವಾದ ರವಿವಾರ ಮಾಧ್ಯಮ ಮತ್ತು ಮಹಿಳೆ ಗೋಷ್ಠಿಯನ್ನು ಅವರು ಉದ್ಘಾಟಿಸಿದರು.
    ಮಹಿಳಾಪರ ಧ್ವನಿ ಎಂದರೆ ಹೋರಾಟ, ಪ್ರಶ್ನಿಸುವುದು ಎಂದಂದುಕೊಂಡರೆ ತಪ್ಪು. ಮಹಿಳಾ ಮೀಸಲಾತಿ, ಮಹಿಳಾ ಹಕ್ಕುಗಳನ್ನು ಪ್ರಶ್ನಿಸುತ್ತಾ ಕುಳಿತುಕೊಳ್ಳುವುದರಿಂದ ಪ್ರಯೋಜನ ಶೂನ್ಯ. ಪ್ರಶ್ನೆಗಳಿಗೆ ಉತ್ತರವನ್ನು ಹುಡುಕುವ ಪ್ರಯತ್ನ ಮಾಡಿದಾಗ ಮಾತ್ರ ಹೋರಾಟಗಳು ಸಾರ್ಥಕವಾಗುತ್ತದೆ ಎಂದವರು ಅಭಿಪ್ರಾಯಪಟ್ಟರು.
    ಹಿರಿಯ ಪತ್ರಕರ್ತೆ ಶ್ರೀದೇವಿ ಕಳಸದ ಮಾತನಾಡಿ, ಸಮಾಜದ ಎಲ್ಲ ಸ್ತರಗಳನ್ನು ಒಳಗೊಳ್ಳುವ ಅವಕಾಶವನ್ನು ಪತ್ರಿಕೋದ್ಯಮ ನೀಡಿದೆ. ಪ್ರೀತಿ, ಶ್ರದ್ಧೆಯಿಂದ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣತೆ ಸಾಧ್ಯ ಎಂದರು.
    ಮಂಗಳೂರು ಆಕಾಶವಾಣಿಯ ಉಷಾಲತಾ ಸರಪಾಡಿ ಮಾತನಾಡಿ, ಗಂಡು-ಹೆಣ್ಣೆಂಬ ಬೇದಭಾವ ತೊಡೆದು ಹಾಕಿ ಸಮಾನವಾಗಿ ಮುನ್ನಡೆಯಬೇಕು. ಮಾಧ್ಯಮ ಕ್ಷೇತ್ರದಲ್ಲೂ ಈ ಕೆಲಸ ಆಗಬೇಕು. ಬಾಹ್ಯವಾಗಿ ಒಳಗೊಳ್ಳುವಿಕೆ ಇದ್ದರಷ್ಟೇ ಸಾಲದು. ಅಂತರಂಗದೊಳಗೂ ಈ ಸ್ವೀಕೃತಿಯನ್ನು ಒಪ್ಪಬೇಕು ಎಂದು ಆಶಿಸಿದರು.
    ಆಕಾಶವಾಣಿಯ ನಿಲಯ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅಧ್ಯಕ್ಷತೆ ವಹಿಸಿದ್ದರು. ಸಂಯುಕ್ತ ಕರ್ನಾಟಕದ ಕೀರ್ತಿ ಶೇಖರ್, ಆಕಾಶವಾಣಿಯ ಸವಿತಾ ಶಿವಕುಮಾರ್, ಪತ್ರಕರ್ತೆ ಮೇಘಾ ಎಲಿಗಾರ್ ಮಾತನಾಡಿದರು‌.
    ಹುಬ್ಬಳ್ಳಿ ಪ್ರಜಾವಾಣಿ ಸ್ಥಾನಿಕ ಸಂಪಾದಕಿ ಎಸ್. ರಶ್ಮಿ ಪ್ರಸ್ತಾವನೆಗೈದರು. ಉದಯವಾಣಿ ವರದಿಗಾರರಾದ ಧನ್ಯಾ ಬಾಳೆಕಜೆ ಸ್ವಾಗತಿಸಿದರು. ವಾರ್ತಾಭಾರತಿ ವರದಿಗಾರರಾದ ಸತ್ಯವತಿ ವಂದಿಸಿದರು. ನಮ್ಮ ಕುಡ್ಲ ವಾಹಿನಿಯ ನಿರೂಪಕಿ ಪ್ರಿಯಾ ಹರೀಶ್ ನಿರೂಪಿಸಿದರು.

    Click to comment

    Leave a Reply

    Your email address will not be published. Required fields are marked *

    health

    ಸೈಬರ್ ವಂಚನೆಯ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ ಎಂದ ಸುಪ್ರೀಂ ಕೋರ್ಟ್

    Published

    on

    ಮಂಗಳೂರು/ನವದೆಹಲಿ : ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕನಿಗೆ ನಷ್ಟ ಸಂಭವಿಸಿದ್ರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

    ಬ್ಯಾಂಕುಗಳಲ್ಲಿ ಗ್ರಾಹಕನ ಖಾತೆಯಲ್ಲಿ ಯಾವುದೇ ಅನಧಿಕೃತ ವಹಿವಾಟು ನಡೆದು ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕುಗಳೇ ನೇರವಾಗಿ ಹೊಣೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

    ಅಸ್ಸಾಂನ ಸೈಬರ್ ವಂಚನೆಗೆ ಒಳಗಾದ ಪಲ್ಲಭ್ ಭೌಮಿಕ್ ಅವರಿಗೆ 94,000 ರೂ. ಗಳನ್ನು ಮರುಪಾವತಿಸುವಂತೆ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ.

    ಈ ಪ್ರಕರಣವು ಬ್ಯಾಂಕುಗಳು ತಮ್ಮ ಗ್ರಾಹಕರ ಹಣವನ್ನು ವಂಚನೆಯ ಚಟುವಟಿಕೆಗಳಿಂದ ರಕ್ಷಿಸುವಲ್ಲಿ ಹಣಕಾಸು ಸಂಸ್ಥೆಗಳ ಜವಾಬ್ದಾರಿಗಳನ್ನು ತೀವ್ರವಾಗಿ ಎತ್ತಿ ತೋರಿಸಿದೆ.

    ಪ್ರಕರಣದ ಹಿನ್ನೆಲೆ

    ಪಲ್ಲಭ್ ಭೌಮಿಕ್ ಎನ್ನುವವರು ಆನ್ ಲೈನ್ ನಲ್ಲಿ ವಸ್ತುವೊಂದನ್ನು ಖರೀದಿಸಿದ್ದರು. 4,000 ರೂ. ಮೌಲ್ಯದ ಲೂಯಿಸ್ ಫಿಲಿಪ್ ಬ್ಲೇಜರ್ ಅನ್ನು ಹಿಂದಿರುಗಿಸಲು ಪ್ರಯತ್ನಿಸಿದಾಗ ಸೈಬರ್ ವಂಚನೆ ಸಂಭವಿಸಿದೆ. ಗ್ರಾಹಕ ಸೇವಾ ಪ್ರತಿನಿಧಿಯಾಗಿ ನಟಿಸಿ, ವಂಚಕರು ಪಲ್ಲಭ್ ಅವರನ್ನು ದುರುದ್ದೇಶಪೂರಿತ ಅಪ್ಲಿಕೇಶನ್ ಅನ್ನು ಸ್ಥಾಪಿಸುವಂತೆ ಹೇಳಿ ವಂಚನೆ ಮಾಡಿದ್ದರು.

    ಇದನ್ನೂ ಓದಿ: ಓಂ ಶಕ್ತಿ ದರ್ಶನ ಪಡೆದು ವಾಪಾಸಾಗುತ್ತಿದ್ದಾಗ ದುರಂ*ತ; ಐವರು ಸಾ*ವು

    ಇದು ಅವರ ಎಸ್ ಬಿಐ ಉಳಿತಾಯ ಖಾತೆಯಿಂದ 94,204 ರೂ. ಗಳನ್ನು ಕಳವು ಮಾಡಲು ಕಾರಣವಾಯಿತು. ಕದ್ದ ಹಣವನ್ನು ಯುಪಿಐ ವಹಿವಾಟುಗಳ ಮೂಲಕ ಬಹು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಯಿತು.

    ಈ ಸಮಸ್ಯೆಯ ಮೂಲ ಯಾವುದೆಂದರೆ ಲೂಯಿಸ್ ಫಿಲಿಪ್ ಅವರ ವೆಬ್ ಸೈಟ್ ನಲ್ಲಿ 2021 ರಲ್ಲಿ ನಡೆದ ಡೇಟಾ ಉಲ್ಲಂಘನೆಯಾಗಿದ್ದು, ಇದರಿಂದ ಗ್ರಾಹಕರ ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗಿದೆ. ಈ ಡೇಟಾವನ್ನು ದುರುಪಯೋಗಪಡಿಸಿಕೊಂಡು, ವಂಚಕನು ವಂಚನೆ ನಡೆಸಿದ್ದಾನೆ.

    ಕಾನೂನು ಹೋರಾಟ ನಡೆಸಿದ ಪಲ್ಲಭ್
    ಈ ವಿಷಯವನ್ನು ನಿಯಮದಂತೆ 24 ಗಂಟೆಯೊಳಗೆ ಪಲ್ಲಭ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ಆದರೆ ನ್ಯೂ ಒಟಿಪಿ, ಎಂಪಿನ್ ಸೇರಿದಂತೆ ರಹಸ್ಯ ಮಾಹಿತಿಯನ್ನು ವಂಚಕರಿಗೆ ನೀಡಿದ್ದೀರಿ. ಹೀಗಾಗಿ ಇದರಲ್ಲಿ ಬ್ಯಾಂಕ್ ನ ತಪ್ಪಿಲ್ಲ. ಹಣ ಮರಳಿಸಲಾಗಲ್ಲ ಎಂದು ಬ್ಯಾಂಕ್ ಹೇಳಿತ್ತು. ಈ ಬಗ್ಗೆ ಪಲ್ಲಭ್ ಹೈಕೋರ್ಟ್ ಮೊರೆ ಹೋಗಿದ್ದರು. ಗುವಾಹಟಿ ಹೈಕೋರ್ಟ್ ಪಲ್ಲಭ್ ಪರ ತೀರ್ಪು ನೀಡಿತ್ತು. ಇದನ್ನು ಎಸ್ ಬಿಐ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು.

    ಈ ಕುರಿತು ಇದೀಗ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ‘ಮೂರನೇ ವ್ಯಕ್ತಿಯಿಂದಾದ ವಂಚನೆ ಪ್ರಕರಣಕ್ಕೆ ಗ್ರಾಹಕ ಹೊಣೆಯಾಗುವುದಿಲ್ಲ ಎಂದು ಆರ್ ಬಿಐ ನಿಯಮಗಳೇ ಹೇಳಿವೆ. ಸೈಬರ್ ವಂಚನೆಯಂಥ ಪ್ರಕರಣದಲ್ಲಿ ಗ್ರಾಹಕರ ಹಿತ ಕಾಪಾಡುವುದು ಬ್ಯಾಂಕ್ ಗಳ ಹೊಣೆಗಾರಿಕೆ. ಈ ಪ್ರಕರಣದಲ್ಲಿ ತಾಂತ್ರಿಕ ಸಂಪನ್ಮೂಲ ಲಭ್ಯವಿದ್ದರೂ ವಂಚನೆ ತಡೆಯುವಲ್ಲಿ ಎಸ್ ಬಿಐ ವಿಫಲವಾಗಿದೆ. ಈ ಹಿನ್ನೆಲೆ ಗ್ರಾಹಕನಿಗೆ ಹಣ ಮರಳಿಸುವಂತೆ ಎಸ್ ಬಿಐಗೆ ನ್ಯಾಯಪೀಠ ಸೂಚಿಸಿದೆ.

    Continue Reading

    LATEST NEWS

    ಓಂ ಶಕ್ತಿ ದರ್ಶನ ಪಡೆದು ವಾಪಾಸಾಗುತ್ತಿದ್ದಾಗ ದುರಂ*ತ; ಐವರು ಸಾ*ವು

    Published

    on

    ಮಂಗಳೂರು/ ಕೋಲಾರ : ತಮಿಳುನಾಡಿನ ರಾಣಿಪೇಟೆ ಬಳಿ ಭೀ*ಕರ ಅಪ*ಘಾತ ಸಂಭವಿಸಿದ್ದು, ಕೋಲಾರದ ನಾಲ್ವರು ಸೇರಿ ಐವರು ಮೃ*ತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾ*ತ ಸಂಭವಿಸಿದ್ದು, ಬಸ್ ಚಾಲಕ ಹಾಗೂ ಕ್ಯಾಂಟರ್‌ನಲ್ಲಿದ್ದ ನಾಲ್ವರು ಸಾ*ವನ್ನಪ್ಪಿದ್ದಾರೆ.  ಬಸ್‌ನಲ್ಲಿದ್ದ ಓರ್ವ ಮಹಿಳೆ ಗಂ*ಭೀರವಾಗಿ ಗಾ*ಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್, ಕೃಷ್ಣಪ್ಪ ಮೃ*ತಪಟ್ಟವರು. ನಲ್ಲೂರು ಗ್ರಾಮದ ಸರಸ್ವತಮ್ಮ ಗಂಭೀ*ರವಾಗಿ ಗಾ*ಯಗೊಂಡ ಮಹಿಳೆ.

    ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಾಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನ್ನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು.

    ಇದನ್ನೂ ಓದಿ : ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ

    ಗಾ*ಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿಯ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ರಾಣಿಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ

    Published

    on

    ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಗುತ್ತಿಗ ಆಧಾರದ ಮೇಲೆ ಪಡೆಯುವ ಬಸ್ ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ.

    ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್’ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ. ಇಷ್ಟು ದಿನ ಪ್ರತಿ ಕಿಮೀ.ಗೆ 47 ರೂ ದರದಲ್ಲಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತಿತ್ತು. ಇದೀಗ ಈ ದರನ್ನು 54 ರೂ.ಗೆ ಪರಿಷ್ಕರಿಸಲಾಗಿದ್ದು, ಇದರ ಪರಿಣಾಮ ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳವಾಗಿದೆ. ಕರ್ನಾಟಕದ ಹೊರಗಿನ ಸೇವೆಗಳಿಗೆ, ಪ್ರತಿ ಕಿ.ಮೀ.ಗೆ 50 ರೂ.ನಿಂದ 57 ರೂ.ಗೆ ಹೆಚ್ಚಿಸಲಾಗಿದೆ.

    ರಾಜ್ಯದೊಳಗೆ ಪ್ರತಿ ಕಿ.ಮೀ.ಗೆ 52 ರೂ.ನಂತೆ ಕಾರ್ಯನಿರ್ವಹಿಸುತ್ತಿದ್ದ ಅಶ್ವಮೇಧ ಸೇವೆಗಳನ್ನು ಪ್ರತಿ ಕಿ.ಮೀ.ಗೆ 58 ರೂ.ಗೆ ಹೆಚ್ಚಿಸಲಾಗಿದೆ, ಇದರಂತೆ ಪ್ರತಿ ಕಿ.ಮೀ.ಗೆ 6 ರೂ. ಹೆಚ್ಚಳವಾಗಿದೆ. ರಾಜಹಂಸ, ಐರಾವತ, ಪಲ್ಲಕ್ಕಿ, ಅಂಬಾರಿ, ಮಿಡಿ ಬಸ್, ಎಸಿ ಅಲ್ಲದ ಸ್ಲೀಪರ್, ಫ್ಲೈ ಬಸ್ ಮತ್ತು ಇತರ ಎಲ್ಲಾ ಬಸ್ ಸೇವೆಗಳ ದರವನ್ನೂ ಹೆಚ್ಚಳ ಮಾಡಲಾಗಿದೆ.

    ಮುಂಗಡವಾಗಿ ಸೇವೆಗಳನ್ನು ಬುಕ್ ಮಾಡಿದವರಿಗೆ ಹಳೆಯ ದರಗಳ ಪ್ರಕಾರ ಶುಲ್ಕ ವಿಧಿಸಲಾಗುತ್ತದೆ. ಅಶ್ವಮೇಧದ ದರಗಳು ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 58 ರೂ. ಮತ್ತು ರಾಜ್ಯದ ಹೊರಗೆ 61 ರೂ. ಇರಲಿದೆ. ರಾಜಹಂಸ ಬಸ್ ಸೇವೆ ದರ ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 59 ರೂ. ಮತ್ತು ಹೊರಗೆ 63 ರೂ., ಪಲ್ಲಕ್ಕಿ ಬಸ್‌ಗಳ ದರ ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 80 ರೂ. ಮತ್ತು ರಾಜ್ಯದ ಹೊರಗೆ 85 ರೂ ಇರಲಿದೆ.

    ಜನವರಿ 7 ರಂದು ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದ್ದು, ಡೀಸೆಲ್ ದರ ಹೆಚ್ಚಳ ಮತ್ತು ನೌಕರರ ವೇತನದಲ್ಲಿನ ಹೆಚ್ಚಳದಿಂದಾಗಿ ಕಾರ್ಯಾಚರಣೆಯ ವೆಚ್ಚದಲ್ಲಿ ಹೆಚ್ಚಳ ಮಾಡಲಾಗಿದೆ. ನಿಯಮಿತ ದೈನಂದಿನ ಕಾರ್ಯಾಚರಣೆಗಳಿಂದ ಬರುವ ಆದಾಯದ ಜೊತೆಗೆ, ಒಪ್ಪಂದದ ಸೇವೆಗಳು ಬಸ್ ನಿಗಮಕ್ಕೆ ಆದಾಯದ ಪ್ರಮುಖ ಮೂಲಗಳಾಗಿವೆ. ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚಗಳಿಂದಾಗಿ ಬೆಲೆಯನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

    Continue Reading

    LATEST NEWS

    Trending