Connect with us

International news

Open AI ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಶ*ವವಾಗಿ ಪತ್ತೆ! ಎಲಾನ್ ಮಸ್ಕ್ ಏನಂದ್ರು?

Published

on

ಮಂಗಳೂರು/ಸ್ಯಾನ್ ಫ್ರಾನ್ಸಿಸ್ಕೋ : ಕೃತಕ ಬುದ್ಧಿಮತ್ತೆ ಕಂಪೆನಿ ಓಪನ್ ಎಐನ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ಶ*ವವಾಗಿ ಪತ್ತೆಯಾಗಿದ್ದಾರೆ.

ಓಪನ್ ಎಐ ಕಾರ್ಯಚಟುವಟಿಕೆಗಳು ಕಾನೂನನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿದ ಬೆನ್ನಲ್ಲೇ  ಸುಚಿರ್ ಬಾಲಾಜಿ ತನ್ನ ಫ್ಲ್ಯಾಟ್‌ನಲ್ಲೇ ಶ*ವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿ ಹಾಕಿದೆ. ಪೊಲೀಸರ ಪ್ರಕಾರ, ನವೆಂಬರ್ 26 ರಂದು ಸುಚಿರ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಡಿಸೆಂಬರ್ 14 ರಂದು ಬೆಳಕಿಗೆ ಬಂದಿದೆ.

ಏನಂದ್ರು ಎಲಾನ್ ಮಸ್ಕ್ ?

ಎಲಾನ್ ಮಸ್ಕ್ ಹಾಗೂ ಸ್ಯಾಮ್ ಆಲ್ಟ್‌ಮನ್ 2015 ರಲ್ಲಿ ಓಪನ್ ಎಐ ಕಂಪೆನಿ ಆರಂಭಿಸಿದ್ದರು. ಮೂರು ವರ್ಷಗಳ ಬಳಿಕ ಓಪನ್ ಎಐ ತೊರೆದಿದ್ದ ಮಸ್ಕ್, ಪ್ರತಿಸ್ಪರ್ಧಿ ಕಂಪೆನಿ ಎಕ್ಸ್ ಎಐ ಅನ್ನು ಸ್ಥಾಪಿಸಿದ್ದರು.

2020ರ ನವೆಂಬರ್‌ನಿಂದ 2024ರ ಆಗಸ್ಟ್ ವರೆಗೆ ಸುಚಿರ್ ಬಾಲಾಜಿ ಓಪನ್ ಎಐ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು ಎನ್ನಲಾಗಿದೆ. ಸುಚಿರ್ ನಿ*ಧನದ ಬಗ್ಗೆ ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದಾರೆ. ಡೇನಿಯಲ್ ಎಂಬವರು ಮಾಡಿರುವ ಟ್ವೀಟ್ ಅನ್ನು ರೀ ಪೋಸ್ಟ್ ಮಾಡಿರುವ ಮಸ್ಕ್, ‘ಹ್ಞುಂ’ ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ.

ಸುಚಿರ್ ಬಾಲಾಜಿ ಮಾಡಿದ್ದ ಆರೋಪ ಏನು?

ಓಪನ್ ಎಐ ಹಕ್ಕು ಸ್ವಾಮ್ಯ ನಿಯಮ ಉಲ್ಲಂಘಿಸುತ್ತಿದೆ ಎಂದು ಸುಚಿರ್ ಬಾಲಾಜಿ ಅಕ್ಟೋಬರ್‌ನಲ್ಲಿ ದೂರಿದ್ದರು. ಇದೆಲ್ಲಾ ತಿಳಿದ ಬಳಿಕ ಕಂಪೆನಿ ತೊರೆಯುವುದು ಬಿಟ್ಟು ನಿಮಗೆ ಬೇರೆ ದಾರಿ ಇಲ್ಲ. ಅಲ್ಲದೇ, ಚಾಟ್‌ ಜಿಟಿಪಿ ಅಂತರ್ಜಾಲವನ್ನು ಹಾಳುಗೆಡವುತ್ತಿದೆ ಎಂದು ಆರೋಪಿಸಿದ್ದರು. ಎಐ ಮಾಡೆಲ್‌ಗಳನ್ನು ಸಿದ್ಧಪಡಿಸಲು ದತ್ತಾಂಶವನ್ನು ಕಾಪಿ ಮಾಡುವ ಓಪನ್ ಎಐ ಪ್ರಕ್ರಿಯೆಯು ಸಂಭಾವ್ಯ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ.

ಇದನ್ನೂ ಓದಿ : ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್ !

ಉತ್ಪಾದಿಸಿದ ಮಾಡೆಲ್‌ಗಳು ತಮ್ಮ ತರಬೇತಿಗೆ ಬಳಸಿದ ದತ್ತಾಂಶಕ್ಕೆ ಹೋಲುವ ಔಟ್ ಪುಟ್‌ಗಳನ್ನು ಉತ್ಪಾದಿಸುವುದು ಅಪರೂಪ. ತರಬೇತಿಯ ಸಮಯದಲ್ಲಿ ಕಾಪಿರೈಟ್ ಹೊಂದಿರುವ ವಸ್ತುಗಳನ್ನು ಪುನರಾವರ್ತಿಸುವ ಕ್ರಿಯೆಯನ್ನು ‘ನ್ಯಾಯಯುತ ಬಳಕೆ’ಯ ಅಡಿಯಲ್ಲಿ ರಕ್ಷಿಸದಿದ್ದರೆ ಇದು ಕಾನೂನುಗಳನ್ನು ಉಲ್ಲಂಘಿಸಬಹುದು. ಇದು ಅಂತರ್ಜಾಲ ಪರಿಸರ ವ್ಯವಸ್ಥೆಗೆ ಸುಸ್ಥಿರ ಮಾದರಿಯಲ್ಲ ಎಂದು ಆರೋಪಿಸಿದ್ದರು. ಈ ಆರೋಪವನ್ನು ಓಪನ್ ಎಐ ತಳ್ಳಿ ಹಾಕಿತ್ತು.

 

 

Click to comment

Leave a Reply

Your email address will not be published. Required fields are marked *

International news

WWE ಫ್ಯಾನ್ಸ್ ಗೆ ಆಘಾತ: ರೇಯ್ ಮಿಸ್ಟೀರಿಯೋ ನಿಧನ !

Published

on

ಮಂಗಳೂರು/ಮೆಕ್ಸಿಕೊ: ತನ್ನದೇ ವಿಭಿನ್ನ ಶೈಲಿಯಲ್ಲಿ ಎಂಟ್ರಿ ಕೊಡುತ್ತಿದ್ದ ರೇಯ್ ಮಿಸ್ಟೀರಿಯೋ ಅಬ್ಬರ ನೋಡೋದೇ ಒಂದು ಆನಂದವಾಗಿತ್ತು. 66 ವರ್ಷದ ರೇ ಮಿಸ್ಟೀರಿಯೋ ಸೀನಿಯರ್‌ ಸಾವನ್ನಪ್ಪಿರುವ ಸುದ್ದಿ ವರದಿಯಾಗಿದೆ.

WWE ಸ್ಟಾರ್ ಗಳ ಸಾವಿನ ಸುದ್ದಿ ಬಗ್ಗೆ ಆಗಾಗ ಸುಳ್ಳು ಸುದ್ದಿ ಕೇಳಿ ಬರುತ್ತಲೇ ಇರುತ್ತದೆ. ಆದರೆ ಈ ಬಾರಿ ರೇ ಮಿಸ್ಟೀರಿಯೋ ಅಭಿಮಾನಿಗಳು ಇದು ಕೂಡ ಸುಳ್ಳಾಗಲಿ ಎಂದು ಬಯಸಿದ್ದರು. ಆದರೆ ಈ ಬಾರಿ ಮಿಸ್ಟೀರಿಯೋ ಕುಟುಂಬಸ್ಥರು ಈ ಶಾಕಿಂಗ್ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ರೇಯ್ ಮಿಸ್ಟೀರಿಯೋ, 1990ರ ಮಕ್ಕಳ ಹಾಟ್ ಫೇವರೆಟ್ WWE ಸ್ಟಾರ್. ರೇಯ್ ಮಿಸ್ಟೀರಿಯೋ ಫೈಟಿಂಗ್ ಹಾಗೂ ಪಲ್ಟಿ ಹೊಡೆಯೋ ಸ್ಟೈಲ್‌ ಅಷ್ಟು ರೋಮಾಂಚನಕಾರಿ.

ಇದನ್ನೂ ಓದಿ: ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !

ಸಾಮಾನ್ಯವಾಗಿ WWEನಲ್ಲಿ ದಢೂತಿ ದೇಹ. 6 ಅಡಿಗಿಂತ ಎತ್ತರದ ಕುಸ್ತಿಪಟುಗಳು ಅಖಾಡಕ್ಕೆ ಇಳಿಯುತ್ತಾರೆ. ಆದರೆ ಮಿಸ್ಟೀರಿಯೋ ಸೀನಿಯರ್ WWE ಸೂಪರ್ ಸ್ಟಾರ್‌ಗಳ ಮಧ್ಯೆ ಕುಳ್ಳನಂತೆ ಕಾಣುತ್ತಿದ್ದರು. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಅನ್ನೋ ಹಾಗೇ ಮಿಸ್ಟೀರಿಯೋ ಸೀನಿಯರ್‌ ಅನ್ನ ಸೋಲಿಸೋದು ಅಷ್ಟು ಸುಲಭವಲ್ಲ.

ರೇಯ್ ಮಿಸ್ಟೀರಿಯೋ ಆಡಿದ ಒಂದೊಂದು ಮ್ಯಾಚ್‌ಗಳು ರೋಚಕ ಫಲಿತಾಂಶಗಳನ್ನೇ ಕೊಡುತ್ತಿದ್ದವು. ರೇಯ್ ಮಿಸ್ಟೀರಿಯೋ ಫೈಟಿಂಗ್ ಸ್ಟೈಲ್ ಹಾಗೂ ರೋಚಕ ಟ್ವಿಸ್ಟ್‌ಗಳು ನೋಡುಗರನ್ನ ತುದಿಗಾಲಲ್ಲಿ ನಿಲ್ಲುವಂತೆ ಮಾಡುತ್ತಿದ್ದವು.

ಕುಸ್ತಿ ಪ್ರಪಂಚದ ಮೇಲೆ ರೇ ಮಿಸ್ಟೀರಿಯೋ ಸೀನಿಯರ್ ಅವರ ಪ್ರಭಾವವು ಮುಂದಿನ ಪೀಳಿಗೆಯೂ ಕೂಡ ನೆನಪಿಸುವಂತೆ ಮಾಡುತ್ತದೆ. ಅವರ ವಿಶಿಷ್ಟ ಶೈಲಿಯ ಫೈಟಿಂಗ್ ಗಳು, ರಿಂಗ್ ನಲ್ಲಿ ಆಡುವ ರೀತಿ, ಪಲ್ಟಿ ಹೊಡೆಯೋ ಸ್ಟೈಲ್ ಅಭಿಮಾನಿಗಳನ್ನು ರೋಮಾಂಚನಗೊಳಿಸುತ್ತಿತ್ತು. ಆದರೆ ಇವರ ನಿಧನ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅತೀವ ದುಃಖ ಉಂಟುಮಾಡಿದೆ.

Continue Reading

International news

ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ

Published

on

ಮಂಗಳೂರು/ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ನಿವೃತ್ತಿಯಾಗುವುದಕ್ಕೂ ಮುನ್ನ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ರಷ್ಯಾದ ಮೇಲೆ ಉಕ್ರೇನ್ ಡ್ರೋನ್ ದಾಳಿ; ಬೆಚ್ಚಿಬಿದ್ದ ಕಜಾನ್ ಜನತೆ !

4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಿದೆ.

Continue Reading

International news

ರಷ್ಯಾದ ಮೇಲೆ ಉಕ್ರೇನ್ ಡ್ರೋನ್ ದಾಳಿ; ಬೆಚ್ಚಿಬಿದ್ದ ಕಜಾನ್ ಜನತೆ !

Published

on

ಮಂಗಳೂರು/ಕೀವ್: ಉಕ್ರೇನ್ ನ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜನ್ ನಗರದ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ ನಡೆದಿದ್ದು, ಭಾರತದ ಪ್ರಧಾನಿ ಸೇರಿದಂತೆ ಹಲವು ವಿಶ್ವ ನಾಯಕರು ಆಗಮಿಸಿದ್ದರು.

ಇತ್ತೀಚೆಗೆ ಉಕ್ರೇನ್ ಮೇಲೆ ಕ್ಷೀಪಣಿ ದಾಳಿ ನಡೆಸಿದ್ದ ರಷ್ಯಾಗೆ ಡ್ರೋನ್ ದಾಳಿ ಮೂಲಕ ಉಕ್ರೇನ್ ತಿರುಗೇಟು ನೀಡಿದ್ದು, ಉಕ್ರೇನ್ ದಿಢೀರ್ ಕ್ರಮಕ್ಕೆ ರಷ್ಯಾದ ಕಜಾನ್ ಜನತೆ ಬೆಚ್ಚಿ ಬಿದ್ದಿದ್ದಾರೆ.

ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಕಟ್ಟಡಗಳು ವ್ಯಾಪಕವಾಗಿ ಹಾನಿಗೊಳಗಾಗಿರುವುದಾಗಿ ವರದಿಗಳು ತಿಳಿಸಿವೆ.

ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ದಾಳಿಯಲ್ಲಿ 3 ಕಟ್ಟಡಗಳು ಹಾನಿಗೊಳಗಾಗಿದ್ದು, ಜನರನ್ನು ಅಲ್ಲಿಂದ ಸ್ಥಳಾಂತರಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಆಡಳಿತವು ಜನರಿಗೆ ಊಟ, ಬಟ್ಟೆಗಳನ್ನು ಒದಗಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಡೋಕ್ಲಾಂನಲ್ಲಿ 22 ಗ್ರಾಮಗಳನ್ನು ನಿರ್ಮಾಣ ಮಾಡಿದ ಚೀನಾ !

ಕಜನ್ ಮಾಸ್ಕೋದಿಂದ ಪೂರ್ವಕ್ಕೆ ಸುಮಾರು 800 ಕಿಲೋಮೀಟರ್ ದೂರದಲ್ಲಿದೆ. ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಪ್ರಕಾರ, ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯ ಕಜಾನ್ ನಗರದಲ್ಲಿ ಡ್ರೋನ್ ಅನ್ನು ಉರುಳಿಸಿದ್ದು, ಕೆಲವು ಡ್ರೋನ್ ಗಳು ಅದನ್ನು ಭೇದಿಸಿ ದಾಳಿನಡೆಸಿವೆ ಎಂದು ತಿಳಿಸಿದೆ.

9/11 ಶೈಲಿಯ ದಾಳಿ
ಉಕ್ರೇನ್ ದಾಳಿಯು, ಸಪ್ಟೆಂಬರ್ 11, 2001ರಂದು ನ್ಯೂಯಾರ್ಕ್ ವಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಕ್ಕೆ ವಿಮಾನದ ಮೂಲಕ ದಾಳಿ ನಡೆಸಿದ ಘಟನೆಯನ್ನು ನೆನಪಿಸುವಂತಿದೆ.

ಸೆಪ್ಟೆಂಬರ್ 11, 2001ರಂದು ಅಮೆರಿಕಗೆ ಅಲ್ ಕೈದಾ ಉಗ್ರ ಸಂಘಟನೆ ಶಾಕ್ ಕೊಟ್ಟಿದ್ದರು. ಈ ಭೀಕರ ಉಗ್ರ ದಾಳಿಯಲ್ಲಿ 2977 ಅಮಾಯಕರು ಮೃತರಾಗಿದ್ದರು.

ಅಲ್ ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ಅಧಿನಾಯಕ ಒಸಾಮಾ ಬಿನ್ ಲಾಡೆನ್ ನೇತೃತ್ವದಲ್ಲಿ ಅಮೆರಿಕದ ಮೇಲೆ ಉಗ್ರ ದಾಳಿ ನಡೆಸಿತ್ತು. ನ್ಯೂಯಾರ್ಕ್ ನ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರದ ಮೇಲೆ ವಿಮಾನ ದಾಳಿ ನಡೆದಿತ್ತು. ಸೆಪ್ಟೆಂಬರ್ 11, 2001 ಈ ಘಟನೆ ನಡೆದಿದ್ದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಉಕ್ರೇನ್ ನ ಈ ದಢೀರ್ ದಾಳಿಯು 9/11ರ ಅಟ್ಯಾಕ್ ಸ್ಮರಿಸುವಂತೆ ಮಾಡಿದೆ.

 

Continue Reading

LATEST NEWS

Trending

Exit mobile version