Connect with us

LATEST NEWS

ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ

Published

on

ಮಂಗಳೂರು/ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಅಜಾತ ಶತ್ರು, ಸರಳ ಸಜ್ಜನಿಕೆಯ ರಾಜಕಾರಣಿ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ತಮ್ಮ 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನು ಕೊನೆಗೊಳಿಸಿದ್ದಾರೆ.
ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಮನವಿ ಮಾಡಿದ್ದಾರೆ.

ಆರ್. ಅಶೋಕ್ ಟ್ವೀಟ್

ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್ “ಕರ್ನಾಟಕ ರತ್ನ “ಎಸ್.ಎಂ.ಕೃಷ್ಣ”

ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.
ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಇದನ್ನೂ ಓದಿ: ಎಸ್.ಎಂ.ಕೃಷ್ಣ ಅಂತಿಮ ಯಾತ್ರೆ: ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ, ಸಿಎಂ ಸಿದ್ದರಾಮಯ್ಯ ಭಾಗಿ

ಶ್ರೀ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನೆರವೆರಿದೆ.

 

DAKSHINA KANNADA

ಮಂಗಳೂರು-ಸಿಂಗಾಪುರ ನೇರ ವಿಮಾನ ಯಾನ; ಬಹುಕಾಲದ ಬೇಡಿಕೆ ಈಡೇರಿಕೆ

Published

on

ಮಂಗಳೂರು : ಹೊಸ ವರ್ಷದ ಕೊಡುಗೆ ಎಂಬಂತೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಯಾನ 2025ರ ಜನವರಿ 21 ರಿಂದ ಶುರುವಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಕಂಪೆನಿ ಈ ವಿಮಾನ ಹಾರಾಟ ಆರಂಭಿಸಲು ಮುಂದೆ ಬಂದಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಕ್ಸ್ 862 ವಿಮಾನ 5.55 ಕ್ಕೆ ಹೊರಟು 13.25 ಕ್ಕೆ ಸಿಂಗಾಪುರ ತಲಪುತ್ತದೆ. ಮರು ಪ್ರಯಾಣದಲ್ಲಿ ಐಎಕ್ಸ್ 861 ವಿಮಾನ ಸಿಂಗಾಪುರದಿಂದ 14.25 ಕ್ಕೆ ಹೊರಟು 16.55 ಕ್ಕೆ ಮಂಗಳೂರು ತಲಪುವುದು.

2025ರ ಜ.21ರಿಂದ ಸಿಂಗಾಪುರಕ್ಕೆ ವಿಮಾನ :

ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024 ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು. ಫೆ.1 ರಿಂದ ದಿಲ್ಲಿಗೆ ದಿನನಿತ್ಯ ವಿಮಾನ ಸೌಲಭ್ಯಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1, 2025 ರಿಂದ ಮಂಗಳೂರು ಮತ್ತು ರಾಜಧಾನಿ ದಿಲ್ಲಿ ನಡುವೆ ದೈನಂದಿನ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

Continue Reading

Ancient Mangaluru

ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಭೀಕರ ಅಪ*ಘಾತ !

Published

on

ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.

 

ಕಾರಿನಲ್ಲಿದ್ದವರಿಗೆ ಗಂ*ಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ

ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ಮಾಹಿತಿ ತಿಳಿದು ಬಂದಿದೆ. ಕಾರಿನಲ್ಲಿ ಕೆಲ ಪೂಜಾ ಸಾಮಾಗ್ರಿಗಳು ಸೇರಿದಂತೆ ಕುಂಕುಮ ಪ್ರಸಾದಗಳು ಕಂಡುಬಂದಿದೆ.

Continue Reading

DAKSHINA KANNADA

ಉತ್ತಮ ಜನಸ್ಪಂದನೆಯೊಂದಿಗೆ ಮಂಗಳೂರು-ಕಾರ್ಕಳ KSRTC ಸಂಚಾರ ಆರಂಭ

Published

on

ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.

ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.

 

ಕೆ.ಎಸ್‌.ಆರ್‌.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌, ‘ಮಂಗಳೂರು-ಕಾರ್ಕಳ ಮಧ್ಯೆ 8 ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3 ಟ್ರಿಪ್‌ಗೆ ಅವಕಾಶ ನೀಡಿದೆ. ಕೇಂದ್ರ ಸರಕಾರದ ಏರಿಯಾ ಸ್ಕೀಂ ನಿಯಮ ಪ್ರಕಾರ ಹಾಗೂ ಚಾಪ್ಟರ್‌ -5ರಂತೆ ಹೊಸ ರೂಟ್‌ಗೆ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ’ ಎಂದು ವಾದ ಮಂಡಿಸಿದರು. ‘ಮುಂದಿನ ದಿನಗಳಲ್ಲಿ ಅಗತ್ಯ ಇರುವ ಇತರ ಪ್ರದೇಶಗಳಲ್ಲಿ ಸರಕಾರಿ ಬಸ್‌ ಸಂಚಾರ ಆರಂಭಿಸಲು ಸರಕಾರ ವನ್ನು ಕೇಳಿಕೊಂಡಿದ್ದೇವೆ’ ಎಂದು ಸದಸ್ಯ ಐವನ್‌ ಡಿ’ ಸೋಜಾ ತಿಳಿಸಿದರು.

ಇದನ್ನೂ ಓದಿ : ಮಂಗಳೂರು-ಕಾರ್ಕಳ ಕೆ.ಎಸ್‌.ಆರ್‌.ಟಿ.ಸಿ ಪ್ರಾಯೋಗಿಕ ಸಂಚಾರಕ್ಕೆ ನಾಳೆ ಚಾಲನೆ !!

 

ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ. ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ‌ ಪರವಾನಗಿ‌ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನ‌ಸ್ಪಂದನೆ ಲಭಿಸಿದೆ.

Continue Reading

LATEST NEWS

Trending

Exit mobile version