Friday, July 1, 2022

ಕೇಂದ್ರ ಸರಕಾರದ ಕೃಷಿ ಕಾಯ್ದೆಗೆ ವಿರೋಧ ಡಿ. 8ರಂದು ಭಾರತ್ ಬಂದ್‌ಗೆ ರೈತರ ಒಕ್ಕೂಟ ಕರೆ..!

ಕೇಂದ್ರ ಸರಕಾರದ ಕೃಷಿ ಕಾಯ್ದೆಗೆ ವಿರೋಧ ಡಿ. 8ರಂದು ಭಾರತ್ ಬಂದ್‌ಗೆ ರೈತರ ಒಕ್ಕೂಟ ಕರೆ..!

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್​ 8ರಂದು ‘ಭಾರತ್​ ಬಂದ್​’ಗೆ ರೈತ ನಾಯಕರು ಕರೆ ನೀಡಿದ್ದಾರೆ.ನಿನ್ನೆ ನಡೆದ ಸಭೆಯಲ್ಲಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕೆಂದು ಸರ್ಕಾರವನ್ನು ರೈತ ಸಂಘಟನೆಗಳು ಕೇಂದ್ರವನ್ನು ಒತ್ತಾಯಿಸಿವೆ.

ಇದರೊಂದಿಗೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಡಿ.8ಕ್ಕೆ ಭಾರತ್​ ಬಂದ್​ಗೆ ಕರೆ ನೀಡಲಾಗಿದೆ. ಪ್ರತಿಭಟನೆಯನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಲೇಬೇಕಿದೆ.

ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮಾತ್ರ ನಿಲ್ಲುವುದಿಲ್ಲ ಎಂದು ಅಖಿಲ ಭಾರತ ಕಿಸಾನ್​ ಸಭಾದ ಪ್ರಧಾನ ಕಾರ್ಯದರ್ಶಿ ಹನ್ನಾಮ್​ ಮೊಲ್ಲಾ ಹೇಳಿದ್ದಾರೆ.ಈಗಾಗಲೇ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಮಾತುಕತೆಗಳು ನಡೆದಿದ್ದು, ಫಲಪ್ರದವಾಗುವಲ್ಲಿ ವಿಫಲವಾಗಿದೆ. ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಲು ತಯಾರಿಲ್ಲ.

ಇತ್ತ ರೈತರು ಸಹ ತಮ್ಮ ನಿಲುವನ್ನು ಬಿಟ್ಟುಕೊಡುತ್ತಿಲ್ಲ. ಹೀಗಾಗಿ ನಾಳೆಯು ಸಹ ಸಭೆ ನಡೆಯಲಿದೆ. ಸರ್ಕಾರದ ಪರವಾಗಿ ರೈತರ ಜತೆ ಮಾತನಾಡಿರುವ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್​, ಎಲ್ಲರ ಸಲಹೆಗಳನ್ನು ಸರ್ಕಾರದೊಂದಿಗೆ ಚರ್ಚಿಸಿ, ಮುಕ್ತ ಮನಸ್ಸಿನಿಂದ ಪರಿಗಣಿಸಿಲಾಗುವುದು ಎಂದು 40 ರೈತ ನಾಯಕರಿಗೆ ಭರವಸೆಯನ್ನು ನೀಡಿದ್ದಾರೆ.ಆದರೆ, ರೈತರು, ತರಾತುರಿಯಲ್ಲಿ ಪಾಸ್​ ಮಾಡಿರುವ ಮೂರು ಕೃಷಿ ಕಾನೂನುಗಳಲ್ಲಿ ಸಾಕಷ್ಟು ದೋಷಗಳಿವೆ. ಅವುಗಳನ್ನು ರದ್ದುಪಡಿಸಬೇಕೆಂಬ ಬೇಡಿಕೆಗೆ ಅಂಟಿಕೊಂಡಿದ್ದಾರೆ.ತೋಮರ್​ ಅವರು ಸುಮಾರು 8 ಗಂಟೆಗಳವರೆಗೆ ರೈತರೊಂದಿಗೆ ಮಾತುಕತೆ ನಡೆಸಿದ ಬಳಿಕ ಎಲ್ಲ ವಿಚಾರಗಳನ್ನು ಸರ್ಕಾರ ಪರಿಗಣಿಸಲಿದೆ ಎಂದು ಹೇಳಿದ್ದು, ನಾಳಿನ ಸಭೆ ತುಂಬಾ ಮಹತ್ವ ಪಡೆದುಕೊಂಡಿದೆ.

ಒಂದು ವೇಳೆ ಸರ್ಕಾರ ಕೃಷಿ ಕಾನೂನುಗಳ ತಿದ್ದುಪಡಿಗೆ ಒಪ್ಪಿಕೊಳ್ಳುತ್ತವೆಯೇ ಎನ್ನುವ   ಪ್ರಶ್ನೆಗೆ ಉತ್ತರಿಸಿರುವ ತೋಮರ್​, ನಾನೇನು ಭವಿಷ್ಯ ಹೇಳುವವನಲ್ಲ. ಸಭೆ ಸೇರಿದ ಬಳಿಕ ಒಂದು ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದಷ್ಟೇ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...