Connect with us

  LATEST NEWS

  ಪ್ರೀತಿಗೆ ವಿರೋಧ; ತಂದೆ-ತಾಯಿ, ಸಹೋದರನನ್ನೇ ಕೊಂ*ದ ಬಾಲಕ

  Published

  on

  ಮಂಗಳೂರು / ವಾರಣಾಸಿ : ಪ್ರೀತಿ ಕುರುಡು ಅಂತಾರೆ..ಪ್ರೀತಿಗಾಗಿ ಜನರು ಏನು ಬೇಕಾದರೂ ಮಾಡ್ತಾರೆ…ಅನ್ನೋದನ್ನು ನಾವು ಪ್ರಸ್ತುತ ಕಾಲಘಟ್ಟದಲ್ಲಿ ನೋಡುತ್ತೇವೆ…ಕೊ*ಲೆ ಮಾಡೋದು ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಹಾಗಂತ ತಂದೆ-ತಾಯಿಯನ್ನೇ ಕೊ*ಲೆ ಮಾಡ್ತಾರಾ? ಹೌದು, ಇಂತಹುದೊಂದು ಘಟನೆ ವಾರಣಾಸಿಯಲ್ಲಿ ನಡೆದಿದೆ.


  ಅವನಿಗೆ ಪ್ರೀತಿ ಮಾಡಿ, ಮದುವೆ ಆಗೋ ವಯಸ್ಸಲ್ಲ…ಕೇವಲ 15 ಅಷ್ಟೇ…ಮೀಸೆ ಚಿಗುರದ ಬಾಲಕನಿಗೆ ಪ್ರೇಮದ ಅಮಲೇರಿ ಅದು ತನ್ನವರನ್ನೇ ಹ*ತ್ಯೆ ಮಾಡೋ ಮಟ್ಟಕ್ಕೆ ಹೋಗಿದೆ ಅಂದ್ರೆ ಆ ಬಾಲಕ ಎಂತಹ ವಿಕೃತ ಮನಸ್ಥಿತಿಗೆ ತಲುಪಿದ್ದ ಅನ್ನೋದನ್ನು ದೇವರೇ ಬಲ್ಲ.

  ಏನಿದು ಘಟನೆ?

  15 ರ ಹರೆಯದ ಬಾಲಕ ಕಳೆದ ಎರಡು ವರ್ಷಗಳಿಂದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದನಂತೆ. ಆಕೆಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರ ಬರ್ಬರವಾಗಿ ಕೊಂ*ದಿದ್ದಾನೆ. ಸದ್ಯ ಗಾಜಿಪುರ ಪೊಲೀಸರು ಬಂಧಿಸಿದ್ದು, ಬಾಲಕ ತಪ್ಪೊಪ್ಪಿಕೊಂಡಿದ್ದಾರೆ. ಜುಲೈ 7 ಮತ್ತು 8 ರ ಮಧ್ಯರಾತ್ರಿ ಘಾಜಿಪುರ ಜಿಲ್ಲೆಯ ನಂದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

  ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ಆತನ ತಂದೆ ಮುನ್ಷಿ ಬಿಂದ್ (45), ತಾಯಿ ದೇವಂತಿ ಬಿಂದ್(40) ಮತ್ತು ಸಹೋದರನ ಕತ್ತು ಸೀಳಲು ಬಳಸಿದ್ದ ಹರಿತವಾದ ಆಯುಧವನ್ನು ವಶಪಡಿಸಿಕೊಂಡಿರುವುದಾಗಿ ಎಂದು ಗಾಜಿಪುರ ಎಸ್ಪಿ ಓಂವಿರ್ ಸಿಂಗ್ ಮಂಗಳವಾರ(ಜುಲೈ 9) ತಿಳಿಸಿದ್ದಾರೆ.

  ಮದ್ಯ ಸೇವಿಸಿ ಕೃತ್ಯ :

  ಹಲವು ದಿನಗಳ ಹಿಂದೆ ಮೂವರನ್ನು ಕೊಲ್ಲಲು ನಿರ್ಧರಿಸಿದ್ದೆ, ಆದರೆ ಸಾಧ್ಯವಾಗಲಿಲ್ಲ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನಂತೆ. ಭಾನುವಾರ ರಾತ್ರಿ, ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದಾಗ ಮದ್ಯ ಸೇವಿಸಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬಂದ ಬಾಲಕ ತಂದೆ, ತಾಯಿ ಹಾಗೂ ಸಹೋದರನ ಕತ್ತು ಸೀಳಿದ್ದಾನೆ.

  ಇದನ್ನೂ ಓದಿ : ಮನೆಯಲ್ಲಿ ಕಪ್ಪು ನಾಯಿ ಸಾಕಿದರೆ ಶುಭವೋ, ಅಶುಭವೋ?

  ಕೃ*ತ್ಯ ಎಸಗಿದ ನಂತರ, ಮನೆಯಿಂದ ಸ್ವಲ್ಪ ದೂರದಲ್ಲಿರುವ ಹೊಲದಲ್ಲಿ ಚಾ*ಕುವನ್ನು ಬಚ್ಚಿಟ್ಟು ಹತ್ತಿರದ ಆರ್ಕೆಸ್ಟ್ರಾ ಪ್ರದರ್ಶನವನ್ನು ನೋಡಲು ಹೋಗಿದ್ದಾನೆ. ಬಳಿಕ ಬೆಳಗಿನ ಜಾವ 1.45 ರ ಸುಮಾರಿಗೆ ಮನೆಗೆ ಹಿಂದಿರುಗಿದ ಬಾಲಕ ಮನೆಯವರನ್ನು ಯಾರೋ ಕೊ*ಲೆಗೈದು ಹೋಗಿರುವುದಾಗಿ ಗ್ರಾಮಸ್ಥರಿಗೆ ಕರೆ ಮಾಡಿ ನಾಟಕ ಮಾಡಿದ್ದಾನೆ. ಬಳಿಕ ಪೊಲೀಸ್​​ ವಿಚಾರಣೆ ವೇಳೆ ಬಾಲಕ ಬಾಯ್ಬಿಟ್ಟಿದ್ದಾನೆ.

  LATEST NEWS

  ಕಾಸರಗೋಡು: ಗ್ರೈಂಡರ್ ಗೆ ಶಾಲ್‌ ಸಿಲುಕಿ ಮಹಿಳೆ ಸಾ*ವು

  Published

  on

  ಕಾಸರಗೋಡು: ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃ*ತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.

  ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( ೫೨) ಮೃ*ತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  LATEST NEWS

  ಶಿರೂರು ಗುಡ್ಡ ಕುಸಿ*ತ ಪ್ರಕರಣ : ನೀರುಪಾಲಾಗಿದ್ದ ವೃದ್ಧೆಯ ಶ*ವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!

  Published

  on

  ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃ*ತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
  ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾ*ನಿಗೊಳಗಾಗಿದೆ.

  ಬೇಸರದ ಸಂಗತಿ ಎಂದರೆ, ಮೃ*ತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಹಿಳೆಯರು ಕಾಳಜಿ ಕೇಂದ್ರದಲ್ಲಿದ್ದಾರೆ.

  ಹೆಗಲಾದ ಪತ್ರಕರ್ತರು :
  ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶ*ವ ಆಂಬುಲೆನ್ಸ್ ನಲ್ಲಿ ಉಳಿದಿದ್ದು, ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃ*ತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂ*ಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

  ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯು.ಆರ್.ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶ*ವಸಂಸ್ಕಾರದಲ್ಲಿ ಸಹಕರಿಸಿದರು.

  ಇದನ್ನೂ ಓದಿ : 4 ವರ್ಷದ ಬಾಲಕಿ ಕಿಡ್ನಾ*ಪ್, ಅತ್ಯಾ*ಚಾರ ಮಾಡಿ ಕೊ*ಲೆ.. ಮೃ*ತದೇಹ ಏನು ಮಾಡಿದ್ದ ಗೊತ್ತಾ?
  ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
  ಶಿರೂರು ಗುಡ್ಡ ಕು*ಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರಿ ಸದ್ದಿನೊಂದಿಗೆ ಸ್ಫೋ*ಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾ*ಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

  ನೀರು‌ ಚಿಮ್ಮುತ್ತಿದ್ದಂತೆ ಬಾಂ*ಬ್‌ನಂತೆ ಸ್ಫೋ*ಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನಗಾಗಿ ಶೋಧ ಮುಂದುವರಿದಿದೆ.

  Continue Reading

  DAKSHINA KANNADA

  ಸರ್ಕಾರಿ ಬಸ್ ಮತ್ತು ಟ್ಯಾಂಕರ್ ಮಧ್ಯೆ ಅಪ*ಘಾತ; ಹಲವರಿಗೆ ಗಾ*ಯ

  Published

  on

  ಚಿಕ್ಕಮಗಳೂರು: KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿ*ಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾ*ಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

  ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪ*ಘಾತ ಸಂಭವಿಸಿದೆ. ಅಪ*ಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾ*ಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾ*ನಿ ಸಂಭವಿಸಿಲ್ಲ.

  KSRTC, ಟ್ಯಾಂಕರ್ ಅಪ*ಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  Continue Reading

  LATEST NEWS

  Trending