Connect with us

LATEST NEWS

“Facebook ಬಂದ್‌ಗೆ ಆದೇಶಿಸಬೇಕಾಗುತ್ತದೆ” ಮಂಗಳೂರಿನ ವ್ಯಕ್ತಿ ಸೌದಿಯಲ್ಲಿ ಬಂಧನ ಪ್ರಕರಣಕ್ಕೆ ಹೈಕೋರ್ಟ್‌ ಗರಂ

Published

on

ಬೆಂಗಳೂರು: ‘ಅರಬ್‌ ದೇಶದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಸಂಸ್ಥೆ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್‌ಬುಕ್‌ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ’ ಎಂದು ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್

ಪ್ರಕರಣ ವಿವರ

ಮಂಗಳೂರಿನ ಶೈಲೇಶ್ ಕುಮಾರ್ ಕಳೆದ 25 ವರ್ಷಗಳಿಂದ ಸೌದಿ ಅರೇಬಿಯಾದ ಉದ್ಯೋಗಿಯಾಗಿದ್ದಾರೆ. 2019ರಲ್ಲಿ ಕೇಂದ್ರ ಸರ್ಕಾರದ ಸಿಎಎ ಹಾಗೂ  ಎನ್‌ಆರ್‌ಸಿ ಬೆಂಬಲಿಸಿ ತನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಆಗ ಇದನ್ನು ಫೇಸ್‌ಬುಕ್‌ನಿಂದ ತೆಗೆಯಬೇಕು.

ಇಲ್ಲದಿದ್ದರೆ ನಿನ್ನನ್ನು ಸೌದಿಯಲ್ಲಿ ಉಳಿಯಲು ಬಿಡುವುದಿಲ್ಲ. ನಿನ್ನನ್ನು ಸೌದಿಯಲ್ಲೇ ಮುಗಿಸಿ ಹಾಕುತ್ತೇನೆ ಎಂಬ ಬೆದರಿಕೆ ಕರೆ ಬರುತ್ತದೆ. ಇದರಿಂದ ಹೆದರಿದ ಶೈಲೇಶ್‌ ತಮ್ಮ ಹೆಸರಿನ ಫೇಸ್‌ಬುಕ್‌ ಖಾತೆಯನ್ನೇ ಅಳಿಸಿ ಹಾಕುತ್ತಾರೆ.

ಇದಾದ ನಂತರ 2020 ಜನವರಿ 16ರಂದು ಫೇಸ್‌ಬುಕ್‌ನಲ್ಲಿ ಶೈಲೇಶ್‌ ಕುಮಾರ್‌ ಹೆಸರಲ್ಲಿ ಫೇಕ್‌ ಐಡಿ ಸೃಷ್ಟಿಯಾಗುತ್ತದೆ. ಇದರಲ್ಲಿ ಫೆ.12 ಮತ್ತು 15ರಂದು ಇದೇ ಅಕೌಂಟ್‌ನಿಂದ ಇಸ್ಲಾಂ ವಿರೋಧಿ ಪೋಸ್ಟ್‌ಗಳು, ಸೌದಿ ದೊರೆಯ ಬಗೆಗಿನ ವಿರುದ್ಧ ಅನೇಕ ಪೋಸ್ಟ್‌ಗಳಾಗಿರುತ್ತವೆ.

ಈ ಬಗ್ಗೆ ಸ್ವತಃ ತಾನು ಕೆಲಸ ಮಾಡುವ ಕಂಪೆನಿಗೆ ಮಾಹಿತಿ ನೀಡಿದಾಗ, ಕಂಪೆನಿ ಪೊಲೀಸರಿಗೆ ದೂರು ನೀಡುವಂತೆ ಸೂಚಿಸುತ್ತಾರೆ. ಅದರಂತೆ 2020ರ ಫೆ.23ರಂದು ಖುದ್ದು ದೂರು ನೀಡಲು ಪೊಲೀಸ್‌ ಠಾಣೆಗೆ ತೆರಳಿದಾಗ, ಅಲ್ಲಿನ ಪೊಲೀಸರು ಶೈಲೇಶ್‌ ಕುಮಾರ್‌ ಅವರನ್ನೇ ಬಂಧಿಸುತ್ತಾರೆ.

ಇದನ್ನರಿತ ಕುಟುಂಬ ಮಂಗಳೂರು ನಗರ ಸೈಬರ್‌ ಕ್ರೈಂ ಠಾಣೆ, 2021 ಆ.28ರಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೂ ದೂರು ನೀಡಿದ್ದರು. ಜೊತೆಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮುಖಾಂತರ ವಿದೇಶಾಂಗ ಇಲಾಖೆಗೆ ಈ ಬಗ್ಗೆ ದೂರು ನೀಡಿದ್ದರು.

ಶೈಲೇಶ್

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಪೊಲೀಸರು, ಫೇಸ್‌ಬುಕ್‌ ಸಂಸ್ಥೆಗೆ ಪತ್ರ ಬರೆದು, ಶೈಲೇಶ್ ಹೆಸರಿನಲ್ಲಿ ನಕಲಿ ಖಾತೆ ತೆರೆದವರ ಮಾಹಿತಿ ನೀಡುವಂತೆ ಕೋರಿದ್ದರು. ಈ ಮನವಿಗೆ ಪೂರಕ ಸ್ಪಂದನೆ ಸಿಗದ  ಕಾರಣ  ಶೈಲೇಶ್‌ ಪತ್ನಿ, ‘ಪೊಲೀಸರು ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ’ ಎಂದು ಆಕ್ಷೇಪಿಸಿ 2021ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಹಿನ್ನೆಲೆ ಹಾಲಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಕುಲದೀಪ್ ಜೈನ್ ಹಾಗೂ ಪ್ರಕರಣದ ತನಿಖಾಧಿಕಾರಿ ನಿನ್ನೆ ಖುದ್ದು ವಿಚಾರಣೆಗೆ ಹಾಜರಾಗಿದ್ದರು.

ಈ ವೇಳೆ ಹೈಕೋರ್ಟ್‌ ಫೇಸ್‌ಬುಕ್‌ ಸಂಸ್ಥೆ ವಿರುದ್ಧ ಗರಂ ಆಗಿದೆ. ಜೊತೆಗೆ ‘ಫೇಸ್‌ಬುಕ್ ಸಂಸ್ಥೆಯು ಒಂದು ವಾರದಲ್ಲಿ ಘಟನೆಯ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.

ಜೊತೆಗೆ ಶೈಲೇಶ್‌ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು ಎಂದು ಹೇಳಿ ವಿಚಾರಣೆಯನ್ನು ಜೂ. 22ಕ್ಕೆ ಮುಂದೂಡಲಾಗಿದೆ.

ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧಿಯಾದ ಮಂಗಳೂರಿಗ: ಕಣ್ಣೀರಿನಲ್ಲಿ ಕೈತೊಳೆಯುತ್ತಿರುವ ಪತ್ನಿ, ಮಕ್ಕಳು

LATEST NEWS

ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?

Published

on

ಮಹಾರಷ್ಟ್ರ: ಅಪ್ರಾಪ್ತ ಬಾಲಕಿಯೊಬ್ಬಳು ಎರಡು ಬಾರಿ ಅಕ್ರಮ ಗರ್ಭ ಧರಿಸಿ ಇದೀಗ ತನ್ನ ಪೋಷಕರ ವಿರುದ್ಧ ಠಾಣೆ ಮೆಟ್ಟಿಲೇರಿರುವ ಘಟನೆ ಮಹಾರಷ್ಟ್ರದಲ್ಲಿ ನಡೆದಿದೆ. ಹೌದು, 17 ವರ್ಷದ ಬಾಲಕಿಯೊಬ್ಬಳು ಬೇರೆ ಬೇರೆ ಯುವಕರಿಂದ ಎರಡು ಬಾರಿ ಗರ್ಭ ಧರಿಸಿದ್ದಾಳೆ.

pregnant

ಮೊದಲಾಗಿ ಅಕ್ರಮ ಸಂಬಂಧ ಹೊಂದಿದ್ದ ಪುರುಷನಿಂದ ಗರ್ಭ ಧರಿಸಿದ್ದಳು. ಈ ಮಗುವನ್ನು ಪೋಷಕರು ತನಗರಿಯದೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕಿ ಪೋಷಕರು ಸೇರಿದಂತೆ ಶಿಕ್ಷಕರು, ವಕೀಲರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಮುಂದೆ ಓದಿ..; 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ಪೋಷಕರು ನನ್ನನ್ನು ಮುಂಬೈಗೆ ಕರೆದುಕೊಂಡು ಹೋಗಿ ವಕೀಲರ ನೇತೃತ್ವದಲ್ಲಿ ಕೆಲವು ದಾಖಲೆ ಪತ್ರಗಳಿಗೆ ಸಹಿ ಹಾಕಿಸಿದ್ದಾರೆ.  7ನೇ ತರಗತಿಯ ಬಳಿಕ ಶಾಲೆಯಿಂದ ಹೊರಗುಳಿದ ಬಾಲಕಿಯ ನಿಯಮಿತ ತಪಾಸಣೆ ಮತ್ತು ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 2021ರ ಸೆಪ್ಟೆಂಬರ್ 24ರಂದು ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮರುದಿನ ಆ ಮಗುವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಹಸ್ತಾಂತರಿಸಿದ್ದು, ಹೆರಿಗೆಯ ಬಗ್ಗೆ ಯಾರಲ್ಲೂ ಮಾತನಾಡದಂತೆ ಆಕೆಗೆ ಪೋಷಕರು ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಇನ್ನು ಹೆರಿಗೆ ಆದ ಆರು ತಿಂಗಳ ಬಳಿಕ ಅಪ್ರಾಪ್ತೆ ಮಗುವಿನ ತಂದೆಯನ್ನು ಸಂಪರ್ಕಿಸಿದ್ದಾಳೆ. ಈ ವೇಳೆ ಆತ ಅವಳನ್ನು ವರಿಸಳು ಸಿದ್ಧನಾಗಿದ್ದೇನೆ ಎಂದು ಹೇಳುತ್ತಾನೆ. ಆದರೆ ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ತನ್ನ ಪೋಷಕರು ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಪೈಕಿ ಪೋಷಕರು ಮತ್ತು ಚಿಕ್ಕಪ್ಪ ತಲಾ 1.5 ಲಕ್ಷ ರೂ. , ಸಾಮಾಜಿಕ ಕಾರ್ಯಕರ್ತೆ ಮತ್ತು ಇತರ ಕೆಲವರು ಉಳಿದ 1 ಲಕ್ಷ ರೂ.ಗಳನ್ನು ಹಂಚಿಕೊಂಡಿದ್ದಾರೆ ಎಂದು ಅಪ್ರಾಪ್ತೆ ದೂರಿನಲ್ಲಿ ತಿಳಿಸಿದ್ದಾಳೆ.

ಈ ಕುರಿತಾಗಿ ಪ್ರಶ್ನಿಸಿದಕ್ಕೆ ಅಜ್ಜಿ ಮನೆಗೆ ಕಳುಹಿಸಿದ್ದಾರೆ. ಇನ್ನು ಅಲ್ಲಿ ಈ ಬಾಲಕಿಗೆ 23ವರ್ಷದ ಯುವಕನ ಜೊತೆ ಮದುವೆ ಫಿಕ್ಸ್ ಮಾಡಲಾಗಿತ್ತು.  ಈ ವೇಳೆ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಲೈಂಗಿಕ ಸಂಪರ್ಕ ಹೊಂದುತ್ತಾಳೆ. ಬಳಿಕ ಬಾಲಕಿ ಮತ್ತೊಮ್ಮೆ ಗರ್ಭ ಧರಿಸುತ್ತಾಳೆ. ಅಷ್ಟಾಗಲೇ ವಿವಾಹ ನಿಶ್ಚಯವಾಗಿದ್ದ ಹುಡುಗನಿಗೆ ಇವಳ ಮೊದಲ ಮಗುವಿನ ಕುರಿತಾಗಿ ತಿಳಿದು ಇವಳನ್ನು ಮದುವೆಯಾಗಲು ನಿರಾಕರಿಸುತ್ತಾನೆ. ಬಳಿಕ ಅಜ್ಜಿ ಮನೆಯಿಂದ ಹೊರಟು ಬರ್ತಾಳೆ. ಪರಿಚಯಸ್ಥರ ನೆರವಿನಿಂದ ಗಂಡು ಮಗುವಿಗೆ ಜನ್ಮ ನೀಡಿದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಪೋಷಕರು ಎರಡನೇ ಮಗವನ್ನೂ ಮಾರಾಟ ಮಾಡುವಂತೆ ಒತ್ತಡ ಹೇರುತ್ತಿದ್ದು ಈ ನಿಟ್ಟಿನಲ್ಲಿ ಬಾಲಕಿ ಪೊಲೀಸ್ ಮೆಟ್ಟಿಲೇರಿದ್ದಾಳೆ. ಇನ್ನು ಪೊಲೀಸರು ಮಾರಾಟ ಮಾಡಿದ್ದ ಹೆಣ್ಣು ಮಗುವನ್ನು ಹುಡುಕಲು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

 

 

Continue Reading

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

Trending