Connect with us

DAKSHINA KANNADA

ರೈ, ಖಾದರ್ ಬಿಟ್ಟು ಎಲ್ಲರನ್ನೂ ಬಿಜೆಪಿಗೆ ಕರೆತನ್ನಿ: ಕಾರ್ಯಕರ್ತರಿಗೆ ನಳಿನ್‌ ಸೂಚನೆ

Published

on

ಪುತ್ತೂರು: ಜಿಲ್ಲೆಯಲ್ಲಿ ರಮನಾಥ ರೈ, ಯು.ಟಿ.ಖಾದರ್ ಬಿಟ್ಟು ಎಲ್ಲರನ್ನೂ ಕರೆತನ್ನಿ, ಕಾಂಗ್ರೆಸ್ ಮುಖಂಡರನ್ನು ಬಿಟ್ಟು ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ.

ಜಿಲ್ಲೆಯನ್ನು ಕಾಂಗ್ರೇಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.


ಪುತ್ತೂರಿನ ಕಬಕದಲ್ಲಿ ನಡೆದ ವಿಧಾನಪರಿಷತ್‌ ಚುನಾವಣಾ ಸಭೆಯಲ್ಲಿ ಮಾತನಾಡಿದ ನಳಿನ್ ರಾಜ್ಯದಲ್ಲಿ ಕಾಂಗ್ರೇಸ್ ಸದ್ಯದಲ್ಲೇ ನಶಿಸಿ ಹೋಗಲಿದೆ. ಕಾಂಗ್ರೆಸ್‌ಗೆ ಮೂರು ಶಾಪ ತಟ್ಟಿದೆ.

ಮಹಾತ್ಮಾ ಗಾಂಧಿ ಶಾಪ, ಡಾ.ಬಿ.ಆರ್.ಅಂಬೇಡ್ಕರ್ ಶಾಪ ಮತ್ತು ಗೋವಿನ ಶಾಪವಿದೆ. ಬಿಜೆಪಿ ತತ್ವ ಸಿದ್ಧಾಂತ ಒಪ್ಪುವ ಎಲ್ಲರಿಗೂ ಬಿಜೆಪಿಗೆ ಸ್ವಾಗತ ಎಂದರು.

ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರಿಸಿದ್ದಕ್ಕೆ ಕಪ್ಪು ಪಟ್ಟಿ ಪ್ರದರ್ಶನ
ನಳಿನ್ ಭಾಷಣದ ಬಳಿಕ ಕಾಂಗ್ರೆಸ್ ಪಕ್ಷದ ಹಲವು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ಚುನಾವಣಾ ಪ್ರಚಾರ ಸಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,

ಈ ಸಂದರ್ಭದಲ್ಲಿ ರಾಜೇಶ್ ಬಾಳೆಕಲ್ಲು ರವರು ಬಿಜೆಪಿ ಸೇರ್ಪಡೆಯಾಗಲು ಬಿಜೆಪಿ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಎದ್ದು ನಿಂತು ಕಪ್ಪು ಬಾವುಟ ತೋರಿಸಿ ಕಾರ್ಯಕರ್ತರು ರಾಜೇಶ್ ಬಾಳೆಕಲ್ಲು ರವರು ಬಿಜೆಪಿ ಸೇರ್ಪಡೆಯನ್ನು ವಿರೋಧಿಸಿ ದಿಕ್ಕಾರ ಕೂಗಿದರು ಎನ್ನಲಾಗಿದೆ.


ರಾಜೇಶ್ ಬಾಳೆಕಲ್ಲು ಬಿಜೆಪಿ ಬರುವುದು ಮಾಣಿಲದ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಮುಜುಗರ ಉಂಟಾಗಿತ್ತು.

ಇದರಿಂದ ಒಂದು ಕಡೆ ರಾಜೇಶ್ ಗೆ ಬೆಂಬಲ ಸೂಚಿಸಿದರೆ ಇನ್ನೊಂದೆಡೆ ಧಿಕ್ಕಾರ ಕೂಗಲಾಗಿದೆ. ಈ ಹಿಂದೆಯೇ ಅವರು ಬಿಜೆಪಿ ಸೇರುವುದಾಗಿ ಸುದ್ದಿ ಕೇಳಿ ಬಂದಿತ್ತು.

ರಾಜೇಶ್ ಬಿಜೆಪಿ ಬರಬಾರದೆಂದು ಮಾಣಿಲದ ಹಿರಿಯ ಕಾರ್ಯಕರ್ತರು ಸಂಬಂಧಪಟ್ಟವರಿಗೆ ಮನವಿ ಮಾಡಿದ್ದರು.

ಇದರಿಂದ ರಾಜೇಶ್ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ಹಾಗೇ ಉಳಿದಿತ್ತು. ಇಂದು ಸೇರ್ಪಡೆ ಆಗುವುದಾಗಿ ನಿರ್ಣಾಯಿಸಲಾಗಿದ್ದು, ಅದರಂತೆ ಸೇರ್ಪಡೆಯಾಗಿದ್ದಾರೆ.

ಈ ವಿವಾದ ಮುಂದಿನ ದಿನಗಳಲ್ಲಿ ಯಾವ ರೀತಿಯ ಪರಿಣಾಮ ಬೀಳುತ್ತದೆ ಎಂದು ಕಾದು ನೋಡಬೇಕಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending