Tuesday, July 5, 2022

ಮುಸ್ಲಿಂಮರ ಜೊತೆ ವ್ಯವಹಾರ ನಡೆಸಲ್ಲ: 32 ಅಂಗಡಿಗಳ ಹೆಸರಿರುವ ವಾಟ್ಸಪ್‌ ಸಂದೇಶ ವೈರಲ್‌

ಪುತ್ತೂರು: ಕರಾವಳಿಯಲ್ಲಿ ಹಿಂದೂಯೇತರರಿಗೆ ದೇವಸ್ಥಾನಗಳ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಿರ್ಬಂಧ ವಿಚಾರ-ವಿವಾದ ದಿನದಿಂದ ದಿನಕ್ಕೆ ಜಟಿಲಗೊಳ್ಳುತ್ತಿದೆ. ಕರಾವಳಿಯಲ್ಲಿ ಆರಂಭವಾದ ಈ ವಿವಾದ ಇದೀಗ ಮಲೆನಾಡು, ಬೆಂಗಳೂರಿಗೂ ಕಾಲಿಟ್ಟಿದೆ.

ಈ ಮಧ್ಯೆ ವಿವಾದ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಮುಸ್ಲಿಮರ ಜೊತೆ ದೈನಂದಿನ ವ್ಯವಹಾರ‌ ಮಾಡುವುದಿಲ್ಲ ಎಂಬ 32 ಅಂಗಡಿಗಳ ಹೆಸರುಗಳಿರುವ ಒಕ್ಕಣೆಯ ಬರಹಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಾದಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದೊಂದು ಸುಳ್ಳು ಸುದ್ದಿಯಾಗಿದ್ದು, ಈ ಬಗ್ಗೆ ಉಪ್ಪಿನಂಗಡಿ ವರ್ತಕ ಸಮುದಾಯ ಪೊಲೀಸರಿಗೆ ದೂರು ನೀಡಲು ಮುಂದಾಗಿದೆ.


ವಾಟ್ಸಪ್‌ನಲ್ಲಿ ಹರಿದಾಡುತ್ತಿರುವ ಸಂದೇಶ
“ಹಿಂದೂ ವರ್ತಕರ ಒಕ್ಕೂಟ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೃಢ ಹಾಗೂ ಧೈರ್ಯಶಾಲಿ ನಿರ್ಣಯ ಕೈಗೊಂಡಿದ್ದೇವೆ, ಈ ಕೆಳಗಿನ ಅಂಗಡಿಗಳ ಮಾಲಕರಾದ ನಾವುಗಳು ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತರಾಗಿದ್ದು,

ನಮ್ಮ ಅಂಗಡಿಗಳಿಂದ ಯಾವುದೇ ಸಾಮಾಗ್ರಿಗಳನ್ನು ಮುಸ್ಲಿಮರಿಗೆ ಕೊಡುವುದಿಲ್ಲ, ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ” ಎಂಬ ಬರಹದ ಕೆಳಗೆ ಒಟ್ಟು 32 ಅಂಗಡಿಗಳ ಹೆಸರುಗಳನ್ನು ನಮೂದಿಸಿ ಬರೆದ ವಾಟ್ಸಪ್‌ ಮೆಸೇಜ್‌ ಪುತ್ತೂರು ತಾಲೂಕಿನಲ್ಲಿ ಹರಿದಾಡುತ್ತಿದೆ.


ಇದೊಂದು ಸುಳ್ಳು ಸುದ್ದಿಯಾಗಿದ್ದು, ಕೆಲವು ಕಿಡಿಗೇಡಿಗಳು ಇಂತಹ ಸಂದೇಶ ಸೃಷ್ಟಿಸಿ ಮತೀಯ ಸಂಘರ್ಷಕ್ಕೆ ಹುನ್ನಾರ ನಡೆಸುತ್ತಿದ್ದಾರೆ ಎಂದಿರುವ ಉಪ್ಪಿನಂಗಡಿ ವರ್ತಕರು ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಉಪ್ಪಿನಂಗಡಿ ವರ್ತಕರಿಂದ ಡಿವೈಎಸ್ಪಿಗೆ ದೂರು

1 COMMENT

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...