DAKSHINA KANNADA
ಚೈತ್ರಾ ಕುಂದಾಪುರಗೂ ನಮ್ಮ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ: ಶರಣ್ ಪಂಪ್ ವೆಲ್
ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮ್ಮ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ವಿಶ್ವಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಮಂಗಳೂರು : ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮ್ಮ ಸಂಘಟನೆಗೂ ಸಂಬಂಧ ಇಲ್ಲ. ನಮ್ಮ ಕಾರ್ಯಕ್ರಮಕ್ಕೆ ಭಾಷಣಕಾರರಾಗಿ ಕರೆಯುತ್ತಿದ್ದೆವು.
ಯಾಕೆಂದರೆ ಚೆನ್ನಾಗಿ ಭಾಷಣ ಮಾಡ್ತಾಳೆ. ಸಾಕಷ್ಟು ಕಲಿತಿದ್ದಾಳೆ. ಸಾಕಷ್ಟು ತಿಳುವಳಿಕೆ ಇದೆ. ಹೀಗಾಗಿ ಬೇರೆ ಬೇರೇ ಕಾರ್ಯಕ್ರಮಕ್ಕೆ ನಾವು ಕರೆಯುತ್ತಿದ್ದೆವು ಎಂದು ವಿಶ್ವಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಪ್ರಕರಣದ ಬಗ್ಗೆ ದೂರು ನೀಡಲಾಗಿದೆ ಎಂದು ನನ್ನ ಗಮನಕ್ಕೆ ತಂದಿದ್ದೇ ಗುರುಪುರ ಸ್ವಾಮೀಜಿ ಅವರು.
ಅದಕ್ಕೆ ನಾನು ಅವರಿಗೆ ಧೈರ್ಯ ತುಂಬಿದ್ದೆ. ನಿಮ್ಮ ಪಾತ್ರ ಇಲ್ಲ ಎಂದ ಮೇಲೆ ನೀವು ಏಕೆ ಆತಂಕ ವ್ಯಕ್ತಪಡಿಸುತ್ತೀರಿ.
ತನಿಖೆ ಆಗ್ತಾ ಇದೆ. ತನಿಖೆ ಆಗಲಿ ಎಂದು ಹೇಳಿದ್ದೇನೆ ಎಂದರು.
ಈಗ ಸಿಸಿಬಿಯವರು ತನಿಖೆ ಮಾಡುತ್ತಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲೇ ಬೇಕು.
ನಮ್ಮ ಸಂಘಟನೆ ಇಂಥವರಿಗೆ ಸಹಕಾರ ಯಾವತ್ತೂ ನೀಡುವುದಿಲ್ಲ. ಮುಂದೆಯೂ ನೀಡುವುದಿಲ್ಲ ಎಂದರು.
ಸೆ. 25ರಿಂದ ಅ. 30ರವರೆಗೆ ಶೌರ್ಯ ಜಾಗರಣ ರಥಯಾತ್ರೆ:
ಬಜರಂಗದಳದ ನೇತೃತ್ವದಲ್ಲಿ ಸೆ. 25ರಿಂದ ಅ. 10ರವರೆಗೆ ರಾಜ್ಯದಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದೆ ಎಂದು ಶರಣ್ ಪಂಪ್ ವೆಲ್ ನುಡಿದರು.
ಈ ಶೌರ್ಯ ಜಾಗರಣ ರಥಯಾತ್ರೆಯು ಕೊಡಗು ಮೂಲಕ ಅ. 6ರಂದು ಸುಳ್ಯ ತಾಲೂಕಿಗೆ ತಲುಪಲಿದ್ದು, ಸುಳ್ಯದಲ್ಲಿ ಬೃಹತ್ ಕಾರ್ಯಕ್ರಮದ ಬಳಿಕ ರಥವನ್ನು ಸ್ವಾಗತಿಸಲಿದ್ದೇವೆ.
ಅ. 7ರಂದು ಪುತ್ತೂರಿನಲ್ಲಿ ಸಾರ್ವಜನಿಕ ಸಭೆ, ಅ.9ರಂದು ಮಂಗಳೂರಿನಲ್ಲಿ ಬೃಹತ್ ಶೋಭಾಯಾತ್ರೆಯೊಂದಿಗೆ ಕದ್ರಿ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.
ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ಉಡುಪಿಯಲ್ಲಿ ಬೃಹತ್ ಹಿಂದೂ ಸಮಾಜೋತ್ಸವದ ಮೂಲಕ ಸಂಪನ್ನಗೊಳ್ಳಲಿದೆ ಎಂದರು.
ವಿಶ್ವಹಿಂದು ಪರಿಷತ್, ಬಜರಂಗದಳ ಎಂದಿಗೂ ಸಮಾಜವಿರೋಧಿ, ರಾಷ್ಟ್ರವಿರೋಧಿ ಕೆಲಸ ಮಾಡಿಲ್ಲ.
ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಬಜರಂಗಳದ ಘಟಕ ನಿರ್ಮಾಣ ಮಾಡಲಿದ್ದೇವೆ.
ಇಂದು 1000 ಇರುವುದು ಮುಂದಿನ ಒಂದು ವರ್ಷದಲ್ಲಿ ನಾವು 5000 ಮಾಡಲಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮನೋಹರ್ ಸುವರ್ಣ, ಭುಜಂಗ ಕುಲಾಲ್, ನವೀನ್ ಮೂಡುಶೆಡ್ಡೆ, ಪುನೀತ್ ಅತ್ತಾವರ ಮೊದಲಾದವರಿದ್ದರು.
DAKSHINA KANNADA
ಪುತ್ತೂರಿನಲ್ಲಿ ಕಳವುಗೈದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ..!
ಪುತ್ತೂರು: ಅಂತರ್ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ ಮನೆ ನಿವಾಸಿಯಾಗಿದ್ದು, ಆತನ ಮೇಲೆ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2023 ರಲ್ಲಿಯೇ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಡಿಸೆಂಬರ್ 19 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
BANTWAL
ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೆಬಲ್ ಗಣೇಶ್ ಪ್ರಸಾದ್ ಮತ್ತು ಕಾನ್ ಸ್ಟೆಬಲ್ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಮಂಗಳೂರಿನಲ್ಲಿ ಮೂರು ದಿನ ನೀರು ಪೂರೈಕೆ ವ್ಯತ್ಯಯ
ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ ಶುಕ್ರವಾರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ವ್ಯತ್ಯಯಗೊಳ್ಳಲಿದೆ ಎಂದು ಪಾಲಿಕೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ತಿಳಿಸಿದ್ದಾರೆ.
ತುಂಬೆ- ಬೆಂದೂರ್‌ವೆಲ್–ಪಣಂಬೂರು ಪ್ರದೇಶಗಳಿಗೆ ನೀರು ಪೂರೈಸುವ 1 ಸಾವಿರ ಮಿಲಿ ಮೀಟರ್ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲಪಡಿಸುವುದು, ತುಂಬೆ ರಾಮಲ್‌ಕಟ್ಟೆ ಬಳಿ ಕೆಯುಐಡಿಎಫ್‌ಸಿ ವತಿಯಿಂದ ಬಲ್ಕ್ ಫ್ಲೋ ಮೀಟರ್ ಅಳವಡಿಕೆ ಹಾಗೂ ಪಾಲಿಕೆ ವತಿಯಿಂದ 900 ಮಿ.ಮೀ ವ್ಯಾಸದ ಕೊಳವೆಯನ್ನು ಕೆಐಒಸಿಎಲ್ ಬಳಿ ಬದಲಾಯಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಂಗಳೂರಿನ ಬೆಂದೂರ್‌ವೆಲ್‌ಗಿಂತ ತಗ್ಗಿನಲ್ಲಿರುವ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರು ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್‌ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯು ಭಾಗಶಃ ಸ್ಥಗಿತಗೊಳ್ಳಲಿದೆ. ಕಾನ, ಬಾಳ, ಕುಳಾಯಿ, ಮುಕ್ಕ, ಪಣಂಬೂರು ಪ್ರದೇಶಗಳಿಗೆ ನೀರು ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.
- Ancient Mangaluru6 days ago
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
- DAKSHINA KANNADA6 days ago
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
- bangalore5 days ago
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
- bangalore4 days ago
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!