Friday, July 1, 2022

“ತಮ್ಮ ವಿದ್ಯಾರ್ಥಿಗಳು ಪುಸ್ತಕ ಮತ್ತು ಪತ್ರಿಕೆಗಳನ್ನೇ ಓದುವುದಿಲ್ಲ”

ಲಖನೌ: ತಮ್ಮ ವಿದ್ಯಾರ್ಥಿಗಳು ಪುಸ್ತಕ ಮತ್ತು ಪತ್ರಿಕೆಗಳನ್ನೇ ಓದುವುದಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಮುಂದೆ ಶಿಕ್ಷಕರು ಅಲವತ್ತುಕೊಂಡಿದ್ದಾರೆ.


ಉತ್ತರ ಪ್ರದೇಶದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತರಗತಿಯ ವಿದ್ಯಾರ್ಥಿಗಳ ಜತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಂವಾದ ನಡೆಸಿದ್ದರು. ಅದಾದ ಬಳಿಕ, ಇತರ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳ ಜತೆ ಈ ಕುರಿತು ಪ್ರಶ್ನೆ ಕೇಳಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಶಿಕ್ಷಕಕರು, ತಮ್ಮ ವಿದ್ಯಾರ್ಥಿಗಳಿಗೆ ಪತ್ರಿಕೆಗಳ ಬಗ್ಗೆ ತಿಳಿದಿಲ್ಲ. ಕೆಲವರಂತೂ, ಪ್ರಮುಖ ಪತ್ರಿಕೆಗಳು ಯಾವುದಿದೆ ಎಂಬುವುದೇ ತಿಳಿದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಕೆಲವರು ತಾವು ಹೆಡ್‌ಲೈನ್ಸ್ ಮಾತ್ರ ಓದುವುದಾಗಿಯೂ,

ಮತ್ತೆ ಕೆಲವರು ಪತ್ರಿಕೆಯಲ್ಲಿ ಬರುವ ಕಾಮಿಕ್ಸ್ ಮತ್ತು ಪಝಲ್‌ಗಳನ್ನು ಮಾತ್ರ ಗಮನಿಸುವುದಾಗಿ ಹೇಳಿಕೊಂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಪುಸ್ತಕ ಮತ್ತು ಪತ್ರಿಕೆ ಓದುವ ಅಭ್ಯಾಸ ಕಡಿಮೆಯಾಗುತ್ತಿದೆ ಎಂದು ಶಿಕ್ಷಕರು ದೂರಿದ್ದಾರೆ.

LEAVE A REPLY

Please enter your comment!
Please enter your name here

Hot Topics

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...