Tuesday, January 26, 2021

ಅಮಾನುಷವಾಗಿ ಡಾಲ್ಫಿನ್ ಮೀನು ಕೊಂದ ದುಷ್ಕರ್ಮಿಗಳು; ವೀಡಿಯೋ ಆಧರಿಸಿ ದುಷ್ಕರ್ಮಿಗಳ ಬಂಧನ..!

ಅಮಾನುಷವಾಗಿ ಡಾಲ್ಫಿನ್ ಮೀನು ಕೊಂದ ದುಷ್ಕರ್ಮಿಗಳು; ವೀಡಿಯೋ ಆಧರಿಸಿ ದುಷ್ಕರ್ಮಿಗಳ ಬಂಧನ..!

ನವದೆಹಲಿ: ಉತ್ತರ ಪ್ರದೇಶದ ಪ್ರತಾಪ್ ಘರ್ ನಗರದ ಗಂಗಾ ನದಿಯಲ್ಲಿ ಅಪರೂಪದ ಸಸ್ತನಿ ಜಾತಿಗಳಲ್ಲಿ ಗಂಗೆಟಿಕ್ ಡಾಲ್ಫಿನ್ ಗಳು ಒಂದಾಗಿವೆ. ಇದನ್ನ ನೋಡಿದ ಕೆಲ ಯುವಕರು ದಡಕ್ಕೆ ಬಂದಿದ್ದ ಡಾಲ್ಫಿನ್ ವೊಂದನ್ನು ದೊಣ್ಣೆ ಮತ್ತು ಕೊಡಲಿಯಿಂದ ಅಮಾನವೀಯವಾಗಿ ಹೊಡೆದು ಸಾಯಿಸಿದ್ದಾರೆ.

ಈ ಸಂಬಂಧ ಉತ್ತರಪ್ರದೇಶ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕಳೆದ ತಿಂಗಳಲ್ಲಿ ಈ ಘಟನೆ ನಡೆದಿದ್ದು ವಿಡಿಯೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಡಾಲ್ಫಿನ್ ಮೀನಿಗೆ ಯುವಕರು ದೊಣ್ಣೆ ಮತ್ತು ಕೊಡಲಿಯಿಂದ ಹೊಡೆದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದೆ.ಆರೋಪಿಗಳು ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ವೀಡಿಯೋ ಆಧರಿಸಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.