DAKSHINA KANNADA
ಉಳ್ಳಾಲದಲ್ಲಿ ದುಷ್ಕರ್ಮಿಗಳ ಅಟ್ಟಹಾಸ : ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್-ಕರಪತ್ರ..!
Published
4 years agoon
By
Adminಉಳ್ಳಾಲದಲ್ಲಿ ದುಷ್ಕರ್ಮಿಗಳ ಅಟ್ಟಹಾಸ : ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್-ಕರಪತ್ರ..!
outlaws in ullala- Condoms-pamphlets Found at Koragajja Kshetra..!
ಮಂಗಳೂರು : ಮಂಗಳೂರಿನ ವಿವಿಧ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಯಲ್ಲಿ ಕಾಂಡೊಮ್ ಹಾಗೂ ಹಳೇ ನೋಟುಗಳ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳೂರು ಹೊರವಲಯದ ಉಳ್ಳಾಲ ನಗರಸಭಾ ವ್ಯಾಪ್ತಿಯ ಪ್ಯಾರಿಸ್ ಜಂಕ್ಷನ್ನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಅದೇ ರೀತಿಯ ಕೃತ್ಯ ಬೆಳಕಿಗೆ ಬಂದಿದೆ.
ಕಾಂಡೊಮ್ ಸಹಿತ ಚುಣಾವಣಾ ಪ್ರಚಾರದ ಪತ್ರಗಳು ಹಾಗೂ ಸಿಎಂಯಾದಿಯಾಗಿ ಬಿಜೆಪಿ ಮುಖಂಡರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಅವರ ಭಾವಚಿತ್ರ ವಿರೂಪಗೊಳಿಸಿದಂತಹ ಘಟನೆ ಕೂಡ ನಡೆದಿದೆ.
ಕೋಮುಸೂಕ್ಷ್ಮ ಪ್ರದೇಶವಾದ ಉಳ್ಳಾಲದಲ್ಲಿ ಇಂತಹ ಹೇಯ ಕೃತ್ಯ ನಡೆದಿದ್ದು ಸ್ಥಳೀಯರು ಹಾಗೂ ಭಕ್ತವೃಂದ ಆರೋಪಿಗಳನ್ನು ಪತ್ತೆ ಮಾಡುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಪ್ರತೀ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆ ಇಟ್ಟಿದ್ದಾರೆ.
ಈ ಬಾರಿ ಸ್ವಲ್ಪ ತಡವಾಗಿ ಇಂದು ಸಂಜೆ ಕಾಣಿಕೆ ಡಬ್ಬಿ ತೆರೆದಿದ್ದು ಡಬ್ಬಿಯ ಒಳಗೆ ಕಾಂಡೋಮ್ ಗಳು ಮತ್ತು ಪ್ರಚೋದನಕಾರಿ ಬರಹಗಳಿದ್ದ ಪ್ಲೆಕ್ಸ್ ಒಂದು ಲಭಿಸಿದೆ.
ಬೆಂಗಳೂರಿನ K.R.I.D .L ನಿಗಮ ಅಧ್ಯಕ್ಷ ಎಂ.ರುದ್ರೇಶ್ ಅವರಿಗೆ ಶುಭಕೋರಿದ ಪ್ಲೆಕ್ಸ್ ಇದಾಗಿದ್ದು ಫ್ಲೆಕ್ಸಲ್ಲಿರುವ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಅಮಿತ್ ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಸೇರಿದಂತೆ ಅನೇಕ ಬಿಜೆಪಿ ನಾಯಕರ ಭಾವ ಚಿತ್ರಗಳಿದ್ದು ಎಲ್ಲವನ್ನು ಗೀಚಿ ವಿರೂಪಗೊಳಿಸಲಾಗಿದೆ.
ರಾಜಕಾರಣಿಗಳನ್ನು ಹೊಡೆದು ಕೊಲ್ಲಬೇಕು..!
ದೇವಲೋಕದಿಂದ ಹೊರಹಾಕಲ್ಪಟ್ಟ ದ್ರೋಹಿ ದೂತರುಗಳು ಸೇಡಿನ ಸ್ವಭಾವ ಹೊಂದಿದ್ದು ವಿಗ್ರಹಗಳ ಮೂಲಕ ಭೂಲೋಕದ ಜನರನ್ನು ಭ್ರಷ್ಟರನ್ನಾಗಿಸಿ ನಕಲಿ ದೇವರಾಗಿ ಅನಾದಿ ಕಾಲದಿಂದ ಮೆರೆಯಲ್ಪಡುತ್ತಿವೆ, ಎಚ್ಚರ.
ರಕ್ತ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ ,ಬಾಚಿ ತಿಂದು ತೇಗುವ ಈ ಹಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹೊಡೆದು , ಹಿಡಿದು ಕೊಲ್ಲ ಬೇಕಾಗಿದೆ. ಜನರು ಸಿದ್ಧರಾಗಬೇಕು ಎಂದು ಪ್ಲೆಕ್ಸಲ್ಲಿ ಬರೆಯಲಾಗಿದೆ.
ಕೊರಗಜ್ಜ ಸೇವಾ ಸಮಿತಿಯವರು ಈ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ನಗರದ ಕೊಟ್ಟಾರದ ಬಬ್ಬುಸ್ವಾಮಿ ಮತ್ತು ಅತ್ತಾವರದ ಬಾಬುಗುಡ್ಡೆಯ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯಲ್ಲೂ ಇದೇ ರೀತಿಯ ಅವಹೇಳನ ಬರಹದ ಪತ್ರ ಮತ್ತು ಕಾಂಡೋಮ್ ಕಂಡುಬಂದಿತ್ತು.
ಕೊಣಾಜೆ ಠಾಣಾ ವ್ಯಾಪ್ತಿಯಲ್ಲೂ ದುಷ್ಕೃತ್ಯ..!
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾರ್ ಬೆಳ್ಮಾ ಪ್ರದೇಶದ ಗೋಪಾಲ ಕೃಷ್ಣ ಮಂದಿರದಲ್ಲೂ ವಿಖೃತಿ ಮೆರೆಯಲಾಗಿದ್ದು ಭಾಗವಾ ಧ್ವಜವನ್ನು ಧ್ವಂಸ ಮಾಡಿ ಪರಿಸರವನ್ನು ಮಲ-ಮೂತ್ರಗಳಿಂದ ಅಪವಿತ್ರಗೊಳಿಸಲಾಗಿದೆ.
ಘಟನಾ ಸ್ಥಳಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದಾರೆ.
news update..!
ಇನ್ನು ಉಳ್ಳಾಲ ಕೇಂದ್ರ ಬಸ್ಸು ನಿಲ್ದಾಣದಲ್ಲಿರುವ ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡಮ್ ಮತ್ತು ನಿಂದನಾರ್ಹ ಬರಹಗಳುಲ್ಲ ಭಿತ್ತಿಪತ್ರವನ್ನು ಹಾಕಿ ವಿಕೃತಿ ಮೆರೆದಿದ್ದು, ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಕೊರಗಜ್ಜ ,ಗುಳಿಗಜ್ಜನ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ವಿಕೃತಿ ಮೆರೆದ ಕಿಡಿಗೇಡಿಗಳಿಗೆ ಕ್ಷೇತ್ರದ ಕಾರಣೀಕ ಶಕ್ತಿಗಳಾದ ಗುಳಿಗಜ್ಜ ಮತ್ತು ಕೊರಗಜ್ಜನವರು ತಕ್ಷಣವೇ ಶಿಕ್ಷಿಸಿ ಸಾನಿಧ್ಯದ ಕೀರ್ತಿ ಬೆಳಗಿಸುವಂತೆ ಸಾಮೂಹಿಕವಾಗಿ ಪ್ರಾರ್ಥಿಸಲಾಯಿತು.
DAKSHINA KANNADA
ಗೆಜ್ಜೆ ಹಸ್ತಾಂತರ, ಚೌಕಿ ಪೂಜೆಯೊಂದಿಗೆ ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಆರಂಭ
Published
2 hours agoon
26/11/2024ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ನಡೆಯಿತು. ನಿನ್ನೆ (ನ.25) ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ, ಸೇವೆಯಾಟ ‘ಪಾಂಡಾಶ್ವಮೇಧ’ ನಡೆಯಿತು.
ಈ ಸಂದರ್ಭ ವೇದವ್ಯಾಸ ತಂತ್ರಿ, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಗಣೇಶ್ ವಿ. ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ ಎಕ್ಕಾರು, ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಮತ್ತಿತರ ಹಿರಿಯ ಗಣ್ಯರು ಉಪಸ್ಥಿತರಿದ್ದರು. ಈ ಬಾರಿಯೂ ಕಟೀಲು ಮೇಳದ ಯಕ್ಷಗಾನ ಬಯಲಾಟಗಳು ಕಾಲಮಿತಿಯಲ್ಲಿ ನಡೆಯಲಿವೆ.
DAKSHINA KANNADA
ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ
Published
19 hours agoon
25/11/2024By
NEWS DESK4ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
DAKSHINA KANNADA
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
Published
21 hours agoon
25/11/2024By
NEWS DESK4ಮಂಗಳೂರು/ಮಸ್ಕತ್ : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.
ಈ ಸಂದರ್ಭ ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :
ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.
LATEST NEWS
ಸುಳ್ಯ: ಅಂಗಡಿ ಮತ್ತು ಹೋಟೆಲ್ನ ಬೀಗ ಮುರಿದು ಕಳ್ಳತನ- ನಗದು ಹಣ ಕಳವು
ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !
ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ
ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ
ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !
WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
Trending
- LATEST NEWS6 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru4 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION5 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS3 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!