Monday, October 18, 2021

ಉಳ್ಳಾಲದಲ್ಲಿ ದುಷ್ಕರ್ಮಿಗಳ ಅಟ್ಟಹಾಸ : ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್-ಕರಪತ್ರ..!

ಉಳ್ಳಾಲದಲ್ಲಿ ದುಷ್ಕರ್ಮಿಗಳ ಅಟ್ಟಹಾಸ : ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್-ಕರಪತ್ರ..!

  outlaws in ullala- Condoms-pamphlets Found at Koragajja Kshetra..! 
ಮಂಗಳೂರು : ಮಂಗಳೂರಿನ ವಿವಿಧ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಯಲ್ಲಿ ಕಾಂಡೊಮ್ ಹಾಗೂ‌‌ ಹಳೇ ನೋಟುಗಳ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಮಂಗಳೂರು ಹೊರವಲಯದ ಉಳ್ಳಾಲ ನಗರಸಭಾ ವ್ಯಾಪ್ತಿಯ ಪ್ಯಾರಿಸ್ ಜಂಕ್ಷನ್​ನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ‌ ಅದೇ ರೀತಿಯ ಕೃತ್ಯ ಬೆಳಕಿಗೆ ಬಂದಿದೆ.

ಕಾಂಡೊಮ್ ಸಹಿತ ಚುಣಾವಣಾ ಪ್ರಚಾರದ ಪತ್ರಗಳು ಹಾಗೂ ಸಿಎಂಯಾದಿಯಾಗಿ ಬಿಜೆಪಿ ಮುಖಂಡರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಅವರ ಭಾವಚಿತ್ರ ವಿರೂಪಗೊಳಿಸಿದಂತಹ ಘಟನೆ ಕೂಡ ನಡೆದಿದೆ.

ಕೋಮುಸೂಕ್ಷ್ಮ ಪ್ರದೇಶವಾದ ಉಳ್ಳಾಲದಲ್ಲಿ‌ ಇಂತಹ ಹೇಯ ಕೃತ್ಯ ನಡೆದಿದ್ದು ಸ್ಥಳೀಯರು ಹಾಗೂ ಭಕ್ತವೃಂದ ಆರೋಪಿಗಳನ್ನು ಪತ್ತೆ ಮಾಡುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಪ್ರತೀ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆ ಇಟ್ಟಿದ್ದಾರೆ.

ಈ ಬಾರಿ ಸ್ವಲ್ಪ ತಡವಾಗಿ ಇಂದು ಸಂಜೆ ಕಾಣಿಕೆ‌ ಡಬ್ಬಿ ತೆರೆದಿದ್ದು ಡಬ್ಬಿಯ ಒಳಗೆ ಕಾಂಡೋಮ್ ಗಳು ಮತ್ತು ಪ್ರಚೋದನಕಾರಿ ಬರಹಗಳಿದ್ದ ಪ್ಲೆಕ್ಸ್ ಒಂದು ಲಭಿಸಿದೆ.

ಬೆಂಗಳೂರಿನ K.R.I.D .L ನಿಗಮ ಅಧ್ಯಕ್ಷ ಎಂ.ರುದ್ರೇಶ್ ಅವರಿಗೆ ಶುಭಕೋರಿದ ಪ್ಲೆಕ್ಸ್ ಇದಾಗಿದ್ದು ಫ್ಲೆಕ್ಸಲ್ಲಿರುವ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಅಮಿತ್ ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಸೇರಿದಂತೆ ಅನೇಕ ಬಿಜೆಪಿ ನಾಯಕರ ಭಾವ ಚಿತ್ರಗಳಿದ್ದು ಎಲ್ಲವನ್ನು ಗೀಚಿ ವಿರೂಪಗೊಳಿಸಲಾಗಿದೆ.

ರಾಜಕಾರಣಿಗಳನ್ನು ಹೊಡೆದು ಕೊಲ್ಲಬೇಕು..!

ದೇವಲೋಕದಿಂದ ಹೊರಹಾಕಲ್ಪಟ್ಟ ದ್ರೋಹಿ ದೂತರುಗಳು ಸೇಡಿನ ಸ್ವಭಾವ ಹೊಂದಿದ್ದು ವಿಗ್ರಹಗಳ ಮೂಲಕ ಭೂಲೋಕದ ಜನರನ್ನು ಭ್ರಷ್ಟರನ್ನಾಗಿಸಿ ನಕಲಿ ದೇವರಾಗಿ ಅನಾದಿ ಕಾಲದಿಂದ ಮೆರೆಯಲ್ಪಡುತ್ತಿವೆ, ಎಚ್ಚರ.

ರಕ್ತ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ ,ಬಾಚಿ ತಿಂದು ತೇಗುವ ಈ ಹಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹೊಡೆದು , ಹಿಡಿದು ಕೊಲ್ಲ ಬೇಕಾಗಿದೆ. ಜನರು ಸಿದ್ಧರಾಗಬೇಕು ಎಂದು ಪ್ಲೆಕ್ಸಲ್ಲಿ ಬರೆಯಲಾಗಿದೆ.

ಕೊರಗಜ್ಜ ಸೇವಾ ಸಮಿತಿಯವರು ಈ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಮಂಗಳೂರು ನಗರದ ಕೊಟ್ಟಾರದ ಬಬ್ಬುಸ್ವಾಮಿ ಮತ್ತು ಅತ್ತಾವರದ ಬಾಬುಗುಡ್ಡೆಯ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯಲ್ಲೂ ಇದೇ ರೀತಿಯ ಅವಹೇಳನ ಬರಹದ ಪತ್ರ ಮತ್ತು ಕಾಂಡೋಮ್ ಕಂಡುಬಂದಿತ್ತು.

ಕೊಣಾಜೆ ಠಾಣಾ ವ್ಯಾಪ್ತಿಯಲ್ಲೂ ದುಷ್ಕೃತ್ಯ..!

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾರ್ ಬೆಳ್ಮಾ ಪ್ರದೇಶದ ಗೋಪಾಲ ಕೃಷ್ಣ ಮಂದಿರದಲ್ಲೂ ವಿಖೃತಿ ಮೆರೆಯಲಾಗಿದ್ದು ಭಾಗವಾ ಧ್ವಜವನ್ನು ಧ್ವಂಸ ಮಾಡಿ ಪರಿಸರವನ್ನು ಮಲ-ಮೂತ್ರಗಳಿಂದ ಅಪವಿತ್ರಗೊಳಿಸಲಾಗಿದೆ.

ಘಟನಾ ಸ್ಥಳಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದಾರೆ.

 

 

news update..!

ಇನ್ನು ಉಳ್ಳಾಲ ಕೇಂದ್ರ ಬಸ್ಸು ನಿಲ್ದಾಣದಲ್ಲಿರುವ ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡಮ್ ಮತ್ತು ನಿಂದನಾರ್ಹ ಬರಹಗಳುಲ್ಲ ಭಿತ್ತಿಪತ್ರವನ್ನು ಹಾಕಿ ವಿಕೃತಿ ಮೆರೆದಿದ್ದು, ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಕೊರಗಜ್ಜ ,ಗುಳಿಗಜ್ಜನ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ವಿಕೃತಿ ಮೆರೆದ ಕಿಡಿಗೇಡಿಗಳಿಗೆ ಕ್ಷೇತ್ರದ ಕಾರಣೀಕ ಶಕ್ತಿಗಳಾದ ಗುಳಿಗಜ್ಜ ಮತ್ತು ಕೊರಗಜ್ಜನವರು ತಕ್ಷಣವೇ ಶಿಕ್ಷಿಸಿ ಸಾನಿಧ್ಯದ ಕೀರ್ತಿ ಬೆಳಗಿಸುವಂತೆ ಸಾಮೂಹಿಕವಾಗಿ ಪ್ರಾರ್ಥಿಸಲಾಯಿತು.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...