Wednesday, October 5, 2022

ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ: ಗ್ರಾ.ಪಂ ಸ್ಥಾನಕ್ಕೆ ಶ್ರೀ ಪ್ರಣವಾನಂದ ಸ್ವಾಮೀಜಿ ರಾಜೀನಾಮೆ

ಹಾವೇರಿ: ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಶ್ರೀ ಪ್ರಣವಾನಂದ ಸ್ವಾಮೀಜಿ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಗ್ರಾ.ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರಾಜ್ಯದ ಮೊದಲ ಮಠಾಧೀಶರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇವರು ರಾಣೆಬೆನ್ನೂರು ಅರೆಮಲ್ಲಾಪುರದ ಶರಣಬಸವೇಶ್ವರ ಮಠದ ಪೀಠಾಧಿಕಾರಿಯಾಗಿದ್ದಾರೆ.


ಶ್ರೀಗಳು ಕಳೆದ ಗ್ರಾ. ಚುನಾವಣೆಯಲ್ಲಿ 2ನೇ ವಾರ್ಡಿನ ಸದಸ್ಯರಾಗಿ ಆಯ್ಕೆಗೊಂಡಿದ್ದರು.
ರಾಜೀನಾಮೆ ಕುರಿತು ಮಾತನಾಡಿದ ಇವರು ‘ಈಗಿನ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ.

ಭ್ರಷ್ಟಾಚಾರದಿಂದ ತುಂಬಿ ತುಳುಕುತ್ತಿದೆ. ಪಿಡಿಒನಿಂದ ಹಿಡಿದು ಎಲ್ಲರೂ ಕೂಡಾ ಹಗರಣದಲ್ಲಿ ಮುಳುಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳು ಜನರ ಮನೆ ತಲುಪುತ್ತಿಲ್ಲ. ಒಟ್ಟಾರೆಯಾಗಿ ಜನರಿಗೆ ನ್ಯಾಯ ಕೊಡಿಸಲು ಕೂಡಾ ಸಾಧ್ಯವಾಗ್ತಿಲ್ಲ. ಗ್ರಾಮ ಪಂಚಾಯತ್ ಸಭೆಯಲ್ಲಿ ಮಾಹಿತಿ ಕೇಳಿದ್ರೆ ಜೀವ ಬೆದರಿಕೆ ಹಾಕುತ್ತಾರೆ’ ಎಂದು ಆರೋಪಿಸಿದರು.

ಆಳ್ವಿಕೆಯಿಂದ ಆಡಳಿತ ವ್ಯವಸ್ಥೆ ಬರಬೇಕೆಂದು ಪ್ರಯತ್ನಪಟ್ಟೆ. ರಾಜೀನಾಮೆ ಬಳಿಕ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿಯಡಿ ದೂರು ದಾಖಲಿಸುತ್ತೇನೆ’ ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...