Connect with us

    bangalore

    ಮತ್ತೆ ಕರ್ನಾಟಕದಲ್ಲಿ ಮುನ್ನೆಲೆಗೆ ಬಂದ ಹಿಜಾಬ್ ದಂಗಲ್-ವಿರೋಧ ಪಕ್ಷದ ನಾಯಕರುಗಳಿಂದ ಆಕ್ರೋಶ

    Published

    on

    ಬೆಂಗಳೂರು: ಶಾಲಾ- ಕಾಲೇಜುಗಳಲ್ಲಿ ಈ ಹಿಂದೆ ಹಿಜಾಬ್ ನಿಷೇಧವಾಗಿತ್ತು. ಆದರೆ ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಅದರ ಸುದ್ದಿ ಹರಿದಾಡುತ್ತಿದ್ದ ಬೆನ್ನಲೆ ವಿರೋಧ ಪಕ್ಷದವರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಈ ಹಿಂದೆ ಉಡುಪಿಯಲ್ಲಿ ಹಿಜಾಬ್ ನಿಷೇಧ ರಾಜ್ಯಾಧ್ಯಂತ ವ್ಯಾಪಿಸಿತ್ತು. ಕಾಲೇಜು ಆವರಣಗಳಲ್ಲಿ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳ ನಡುವಿನ ಗಲಾಟೆ ನಡೆದಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳು ಕಾಂಗ್ರೆಸ್‌ ಕಡೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕ್ರೋಡಿಕರಣವಾಗಿದ್ದವು. ಈ ನಡುವೆ ನಾವು ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುತ್ತೇವೆ ಎಂದು ನಾಯಕರು ಹೇಳಿದ್ದರು. ಅದರಂತೆ ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ಉಡುಪು ಆಹಾರ ಅವರವರ ಇಷ್ಟ ಎಂದು ಪ್ರತಿಪಾದನೆ ಮಾಡಿದ್ದಾರೆ. ನಾವು ಹಿಜಾಬ್ ನಿಷೇಧದ ಆದೇಶವನ್ನು ವಾಪಸ್ ಪಡೆದುಕೊಳ್ಳುತ್ತೇವೆ. ಇನ್ನು ಮುಂದೆ ಹಿಜಾಬ್ ಧರಿಸಬಹುದು ಎಂದು ಹೇಳಿದ್ದರು. ಉಡುಪು ಆಹಾರ ಪದ್ದತಿ ನಿಮ್ಮ ಆಯ್ಕೆ. ನಾನೇಕೆ ಇವುಗಳಿಗೆ ಅಡ್ಡಿಯಾಗಲಿ? ಎಂದು ಪ್ರಶ್ನಿಸಿದ್ದಾರೆ.ನೀವು ಬಯಸಿದ ಉಡುಪನ್ನು ಧರಿಸಿ, ನಿಮಗೆ ಬೇಕಾದನ್ನು ತಿನ್ನಿ, ನನಗೆ ಬೇಕನಿಸಿದ್ದನ್ನು ನಾನು ತಿನ್ನುವೆ. ಉಡುಪು ಆಹಾರ ಅವರರವ ಇಷ್ಟ ಎಂದು ಹೇಳಿದ್ದರು. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಡೆಯ ಹಿಂದೆ ರಾಜಕೀಯ ಉದ್ದೇಶವೂ ಇದೆ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ಮತಗಳ ಕ್ರೊಡೀಕರಣದ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲೂ ಇದೇ ತಂತ್ರಗಾರಿಕೆಯನ್ನು ಪ್ರಯೋಗ ಮಾಡುವ ಉದ್ದೇಶ ಇದೆ ಎಂಬ ವ್ಯಾಖ್ಯಾನಗಳು ಎಲ್ಲೆಡೆ ವ್ಯಕ್ತವಾಗುತ್ತಿದೆ. ಈ ಮೂಲಕ ಬಿಜೆಪಿಯ ಹಿಂದುತ್ವ ಪ್ರಯೋಗಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ ಪ್ರಯೋಗ ಮಾಡಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆ.

    Click to comment

    Leave a Reply

    Your email address will not be published. Required fields are marked *

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    LATEST NEWS

    Trending