Wednesday, August 12, 2020

ನಗರಾಭಿವೃದ್ದಿ ಸಚಿವರ ಎದುರೇ ಸ್ಪೋಟಗೊಂಡ ಮಂದಾರ ಬೈಲ್ ನಿವಾಸಿಗಳ ಆಕ್ರೋಶ..!

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ನಗರಾಭಿವೃದ್ದಿ ಸಚಿವರ ಎದುರೇ ಸ್ಪೋಟಗೊಂಡ ಮಂದಾರ ಬೈಲ್ ನಿವಾಸಿಗಳ ಆಕ್ರೋಶ..!

ಮಂಗಳೂರು :  ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಇಂದು ಮಂಗಳೂರಿಗೆ ಆಗಮಿಸಿ ನಗರದ ಹೊರವಲಯದ ಪಚ್ಚನಾಡಿ ಡಂಪಿಂಗ್ ಯಾರ್ಡ್ ಪ್ರದೇಶಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಚಿವರು,  ಪಚ್ಚನಾಡಿಯ ಮಂದಾರ ಬೈಲ್  ಪ್ರದೇಶಕ್ಕೆ ಭೇಟಿ ಕೊಟ್ಟು, ಬಾಕಿ ಇರುವ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ತಮ್ಮ ಮನೆ  ಮಠಗಳು, ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡ ಅಲ್ಲಿನ ಪರಿಸರವಾಸಿಗಳು , ಘಟನೆ ನಡೆದು ಇಷ್ಟು ಸಮಯವಾದ್ರೂ ಸಮರ್ಪಕವಾದ ರೀತಿಯಲ್ಲಿ ಯಾವುದೇ ಪರಿಹಾರ ಸಿಗದಿರುವುದರ ಬಗ್ಗೆ ಸಚಿವರನ್ನು ತರಾಟೆಗೆ ತೆಗೆದುಕೊಂಡು, ಮುಂದೇನು ಎನ್ನುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ರು.

ಜನರ ಆಕ್ರೋಶಗಳಿಗೆ ಸಮಾಧಾನವಾಗಿಯೇ ಸ್ಪಂದಿಸಿದ ಸಚಿವರು ಅಧಿಕಾರಿಗಳನ್ನು ಹಾಗೂ ಇಂಜಿನಿಯರ್ ಗಳನ್ನು ವಿಳಂಬ ಕಾಮಗಾರಿ ಬಗ್ಗೆ ತರಾಟೆಗೆ ತೆಗೆದುಕೊಂಡರು.

ಮಾತ್ರವಲ್ಲದೆ, 15 ದಿನಗಳ ಒಳಗಾಗಿ ತಡೆಗೋಡೆಯ ಕಾಮಗಾರಿಯನ್ನು ಹಾಗೂ ಇತರ ಕಾಮಗಾರಿಗಳನ್ನು ಸುಸಜ್ಜಿತ ರೀತಿಯಲ್ಲಿ ಪೂರ್ತಿಗೊಳಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಇಂಜಿನಿಯರ್‌ಗಳಿಗೆ ಸೂಚನೆಯನ್ನು ನೀಡಿದರು.

ನಿಗದಿತ ಸಮಯದಲ್ಲಿ ಕೆಲಸ ಕಾರ್ಯಗಳನ್ನು ಪೂರ್ತಿಗೊಳಿಸದೆ ಇದ್ದರೆ, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕೂಡ ಸಚಿವರು  ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಾಜಿ ಮೇಯರ್ ಭಾಸ್ಕರ್ ಮೊಯಿಲಿ, ಮಹಾ ನಗರ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಶಾನಾಡಿ ಸೇರಿದಂತೆ ಇನ್ನಿತರರು ಜೊತೆಗಿದ್ದರು.

ವಿಡಿಯೋಗಾಗಿ..

 

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.