Monday, January 24, 2022

ಮೋದಿಗೆ ಹೇಳಿದರೂ ಈಡೇರದ ಬೇಡಿಕೆ: ಸ್ವತಃ ಸೇತುವೆ ನಿರ್ಮಿಸಿದ ಗ್ರಾಮಸ್ಥರು

ಸುಳ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಸೂಚನೆ ನೀಡಿದ್ದರೂ ಮೀನುಗಾರಿಕಾ ಸಚಿವರ ಊರಿನ ಜನರ ಸೇತುವೆ ಬೇಡಿಕೆ ಈಡೇರದ ಕಾರಣ ಊರಮಂದಿಯೇ ಸೇತುವೆ ನಿರ್ಮಿಸಿದ್ದಾರೆ.ಇಂತದ್ದೊಂದು ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ನಡೆದಿದೆ.

ತಮ್ಮೂರಲ್ಲಿರೋ ಹೊಳೆಗೆ ಶಾಶ್ವತ ಸೇತುವೆ ಬೇಕೆಂದು ಮೊಗ್ರ ಊರಿನ ಜನರು ಮನವಿ ಸಲ್ಲಿಸಿದ್ದರು. ಆದರೆ ಶಾಸಕ, ಸಚಿವರಿಗೆ ಮನವಿ ಸಲ್ಲಿಸಿ ಪ್ರಯೋಜನಕಾರಿಯಾಗದೇ ನೇರ ಪ್ರಧಾನಿಗೆ ವಿಡಿಯೋ ಸಿ.ಡಿ ಕಳುಹಿಸಿ ಸೇತುವೆಗೆ ಮನವಿ ಮಾಡಿದ್ದರು. ಪ್ರಧಾನಿ ಕಾರ್ಯಾಲಯದಿಂದಲೂ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಗೆ ಸೂಚನೆ ನೀಡಲಾಗಿತ್ತು.

ಆದರೆ, ಪ್ರಧಾನಿಯೇ ಸೂಚಿಸಿದರೂ ಅಧಿಕಾರಿಗಳು ಇಚ್ಛಾ ಶಕ್ತಿ ಮೆರೆಯಲಿಲ್ಲ. ಹೀಗಾಗಿ ಇನ್ನು ಪ್ರಯೋಜನವಿಲ್ಲ ಅಂತಾ ತಾವೇ ಸಮಸ್ಯೆ ಬಗೆಹರಿಸಲು ಮುಂದಾ‍ದ ಗ್ರಾಮಸ್ಥರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ತಾತ್ಕಾಲಿಕ ಕಬ್ಬಿಣದ ಸೇತುವೆ ತಯಾರಿಸಿದ್ದಾರೆ. ಈ ಕಾಮಗಾರಿಯನ್ನು ಗ್ರಾಮಸ್ಥರೇ ಮಾಡಿರೋದು ವಿಶೇಷ.

ವಿಪರ್ಯಾಸ ಅಂದರೆ ಸಚಿವ ಎಸ್‌.ಅಂಗಾರ ಪ್ರತಿನಿಧಿಸುವ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಈ ಗ್ರಾಮದ ಜನರು ನೂರಾರು ಬಾರಿ ಮನವಿ ಸಲ್ಲಿಸಿದ್ದರೂ ಜನಪ್ರತಿನಿಧಿಗಳು ಕ್ಯಾರೆ ಎಂದಿದ್ದಿಲ್ಲ. ಹೀಗಾಗಿ ಗ್ರಾಮಸ್ಥರೇ ಜತೆಗೆ ಸೇರಿ ಹಲವು ದಶಕಗಳಿಂದ ಎದುರಿಸುತ್ತಿದ್ದ ತೀವ್ರ ಸಮಸ್ಯೆಗೆ ಮುಕ್ತಿ ನೀಡಿದ್ದಾರೆ.

Hot Topics

ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಧನ ಸಹಾಯ ಹಾಗೂ ಅಕ್ಕಿ ವಿತರಣೆ

ಕಾರ್ಕಳ: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರು ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ಟ್ರಸ್ಟ್ ವತಿಯಿಂದ ಮಿತ್ತಬೈಲ್...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

“ಬಿಜೆಪಿಗರಿಗೆ ವಿಶ್ವಗುರು ನರೇಂದ್ರ ಮೋದಿ ಒಬ್ಬರೇ”

ಮಂಗಳೂರು: ಬಿಜೆಪಿಗರಿಗೆ ಇಡೀ ಪ್ರಪಂಚದಲ್ಲಿ ಏಕೈಕ ಗುರು ವಿಶ್ವಗುರು ಎನ್ನುವ ನರೇಂದ್ರ ಮೋದಿ ಬಿಟ್ಟು ಬೇರೆ ಯಾವ ಗುರುಗಳಿಗೂ ಗೌರವ ಕೊಡದಿದ್ದುದನ್ನು ನೋಡಿದ್ದೇವೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್...