ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಇಂದು ಬೆಂಗಳೂರಿನಲ್ಲಿ ಅಧಿಕಾರದ ಪ್ರಮಾಣವಚನ ಸ್ವೀಕರಿಸಿದರು.
ಇಂದು ರಾಜಭವನದ ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದ ಸಮಾರಮಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧನೆ ಮಾಡಿದರು.
ರಾಜ್ಯದ ಮುಖ್ಯಂತ್ರಿ ಸೇರಿದಂತೆ ಗಣ್ಯರು ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.