DAKSHINA KANNADA
ನಿರಾಶ್ರಿತರ ಬಾಳಿಕೆ ಬೆಳಕಾದ ಮಂಗಳೂರಿನ ಪಚ್ಚನಾಡಿ ಪರಿಹಾರ ಕೇಂದ್ರ…
Published
2 years agoon
By
Adminಮಂಗಳೂರು: ದೇಶ ಅದೆಷ್ಟೇ ಮುಂದುವರೆದರೂ ಕೂಡಾ ರಸ್ತೆ ಬದಿಯಲ್ಲಿ ಅಲೆದಾಡುವ, ಕೊಳಚೆ ಪ್ರದೇಶದಲ್ಲಿ ಬಿದ್ದು ಹೊರಳಾಡುವ ಅದೆಷ್ಟೋ ಮಂದಿ ನಿರಾಶ್ರಿತರನ್ನು ಕಾಣುತ್ತಲೇ ಇದ್ದೇವೆ.
ಇದೀಗ ಅದಕ್ಕೆ ಮುಕ್ತಿ ನೀಡುವಂತೆ ಅಂಥವರಿಗಾಗಿಯೇ, ನಿರಾಶ್ರಿತರನ್ನು ಸಲಹಲೆಂದೇ ಕರ್ನಾಟಕ ಸರಕಾರವು ಸಮಾಜ ಕಲ್ಯಾಣ ಇಲಾಖೆ ಮೂಲಕ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಆರಂಭಿಸಿದೆ.
ಪಚ್ಚನಾಡಿ ನಿರಾಶ್ರಿತರ ಕೇಂದ್ರವೂ ಅವುಗಳಲ್ಲಿ ಒಂದಾಗಿದ್ದು, ನೂರಾರು ಮಂದಿ ನಿರಾಶ್ರಿತರಿಗೆ ನೆಮ್ಮದಿಯ ಬದುಕು ಕಟ್ಟಿಕೊಡುತ್ತಿದೆ.
ಅನ್ಯ ಜಿಲ್ಲೆ, ರಾಜ್ಯಗಳಿಂದ ಆಗಮಿಸಿ ಮಂಗಳೂರಿನ ಬೀದಿ ಬೀದಿಗಳಲ್ಲಿ ಅಲೆದಾಡುತ್ತಿದ್ದ ನಿರಾಶ್ರಿತರನ್ನು ಕರೆತಂದು ಮಂಗಳೂರಿನ ಪಚ್ಚನಾಡಿಯ ನಿರಾಶ್ರಿತರ ಪರಿಹಾರ ಕೆಂದ್ರಕ್ಕೆ ಸೇರ್ಪಡೆ ಮಾಡಲಾಗಿದೆ.
ಪಚ್ಚನಾಡಿ ನಿರಾಶ್ರಿತರ ಕೇಂದ್ರದ ಅಧೀಕ್ಷಕ ಅಶೋಕ್ ಕುಮಾರ್ ಹೇಳುವಂತೆ ‘ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ಮೂಲಕ ಆರಂಭಿಸಲಾಗಿರುವ ಈ ಕೇಂದ್ರದ ಮೂಲಕ ಇಂದು ಬೀದಿ ಬೀದಿಗಳಲ್ಲಿ ಅಲೆದಾಡುತ್ತಿದ್ದ ಭಿಕ್ಷುಕರು, ನಿರಾಶ್ರಿತರು ಸನ್ನಡತೆಯ ಬದುಕನ್ನು ನಡೆಸುವಂತಾಗಿದೆ. ಕೆಲವರು ಮರಳಿ ಮನೆ ಸೇರಿದವರೂ ಇದ್ದಾರೆ.
ಪಚ್ಚನಾಡಿ ನಿರಾಶ್ರಿತರ ಕೇಂದ್ರದಲ್ಲಿ ಪ್ರಸ್ತುತ 120 ಪುರುಷರು, 5 ಮಹಿಳೆ ನಿರಾಶ್ರಿತರು ವಾಸವಿದ್ದಾರೆ. ಬಂಧಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ , ಆರೋಗ್ಯ ಕೇಂದ್ರದಲ್ಲಿ ಆರೋಗ್ಯವನ್ನು ಪರಿಶೀಲಿಸಿ ಬಳಿಕ ಕೇಂದ್ರಕ್ಕೆ ಸೇರ್ಪಡೆ ಮಾಡಲಾಗುತ್ತದೆ.
ಭಿಕ್ಷಾಟನೆ ನಿಷೇಧ ಕಾಯ್ದೆಯನ್ವಯ ನಿರಾಶ್ರಿತರ ಕೆಂದ್ರದಲ್ಲಿ ಮೂರು ವರ್ಷಗಳ ಕಾಲ ಇರಿಸಲು ಅವಕಾಶವಿದೆ. ಈ ನಡುವೆ ಅವರ ಮೂಲ ವಿಳಾಸವನ್ನು ಪತ್ತೆ ಮಾಡಿ ಮನೆಗೆ ಕಳುಹಿಸುವ ಕೆಲಸ ಕಾನೂನುಪ್ರಕಾರ ಮಾಡಲಾಗುತ್ತದೆ.
ಒಂದು ವೇಳೆ ಮನೆಮಂದಿ ಯಾರೂ ಇಲ್ಲದೇ ಇದ್ದಲ್ಲಿ ಅವರನ್ನು ಅನಾಥಾಶ್ರಮಕ್ಕೆ ಕಳುಹಿಸಿಕೊಡಲಾಗುತ್ತದೆ. ಇಲ್ಲಿರುವ ನಿರಾಶ್ರಿತರ ಮೂಲಕ ಆರೋಗ್ಯಕರವಾದ ಚಟುವಟಿಕೆಗಳನ್ನು , ಸ್ವ ಉದ್ಯೋಗಕ್ಕೆ ಪೂರಕವಾದ ಕೆಲಸ ಕಾರ್ಯಗಳನ್ನು , ಕೃಷಿ ಚಟುವಟಿಕೆಗಳನ್ನು ಕೂಡಾ ಮಾಡಿಸಲಾಗುತ್ತಿದೆ.
ನಿರಾಶ್ರಿತರನ್ನು ಖುಷಿಯಾಗಿಟ್ಟುಕೊಳ್ಳಲು ಅವರನ್ನು ಆಟೋಟಗಳಲ್ಲೂ ಪಾಲ್ಗೊಳ್ಳಿಸಲಾಗುತ್ತದೆ. ಅವರಿಗೆ ಕೊಕ್ಕೋ, ಚೆಸ್, ಕ್ಯಾರಂ ಇತ್ಯಾದಿ ಕ್ರೀಡೆಗಳನ್ನೂ ಆಡಿಸಲಾಗುತ್ತಿದೆ.
ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಒಟ್ಟಿನಲ್ಲಿ ಪಚ್ಚನಾಡಿ ನಿರಾಶ್ರಿತರ ಕೇಂದ್ರದ ಮೂಲಕ ಹಲವು ಮಂದಿ ಮತ್ತೆ ತಮ್ಮ ನೈಜ ಬದುಕಿನತ್ತ ಮರಳುತ್ತಿರುವುದು ಸಂತಸದ ಸಂಗತಿ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ