Friday, August 12, 2022

ಅಮೃತ ಮಹೋತ್ಸವದ ಅಂಗವಾಗಿ ಆ. 10ರಂದು ಪಾದಯಾತ್ರೆ: ಮಾಜಿ ಶಾಸಕ ಲೋಬೋ

ಮಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆ. 10ರಂದು ಕಾಂಗ್ರೆಸ್‌ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಜೆ.ಆರ್‌.ಲೋಬೊ ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಅಂದು ಪಾಂಡೇಶ್ವರದಲ್ಲಿರುವ ಜವಹರಲಾಲ್‌ ನೆಹರೂ ಅವರ ಪ್ರತಿಮೆಗೆ ಬೆಳಿಗ್ಗೆ 9.30ಕ್ಕೆ ಹೂವಿನ ಹಾರ ಹಾಕುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಪಾದಯಾತ್ರೆಯು ಎ.ಬಿ.ಶೆಟ್ಟಿ ವೃತ್ತ, ಗಡಿಯಾರ ಗೋಪುರ, ಕೊಡಿಯಾಲ್ ಬೈಲ್‌, ಪಿ.ವಿ.ಎಸ್‌ ವೃತ್ತ,

ಬೆಸೆಂಟ್‌ ಕಾಲೇಜು ಮಾರ್ಗವಾಗಿ ಲಾಲ್‌ಬಾಗ್‌ ವೃತ್ತದವರೆಗೆ ಸಾಗಲಿದೆ. ಲಾಲ್‌ಬಾಗ್‌ನ ಗಾಂಧಿ ಪುತ್ಥಳಿಗೆ ಹಾರ ಹಾಕುವ ಮೂಲಕ ಪಾದಯಾತ್ರೆ ಸಂಪನ್ನಗೊಳ್ಳಲಿದೆ.

ಈಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡರು ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಶಾಹುಲ್‌ ಹಮೀದ್‌, ಪ್ರಕಾಶ್‌ ಸಾಲ್ಯಾನ್‌, ಟಿ.ಕೆ.ಸುಧೀರ್‌, ಅಬ್ದುಲ್‌ ಸಲೀಂ, ಸುನಿಲ್‌ ಪೂಜಾರಿ, ರಾಕೇಶ್‌ ದೇವಾಡಿಗ, ಹೈದರಾಲಿ, ರಿತೇಶ್‌ ಇದ್ದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಕಳವು-ಆರೋಪಿ ಅಂದರ್

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.ಕುಂಬಾಸಿ ವಿನಾಯಕ ನಗರ ನಿವಾಸಿ ಸುಭಾಷ್ ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಇವರು ಮೂಲತಃ ಮರವಂತೆಯ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...