Connect with us

    ಕರಾವಳಿಯ ಅಕ್ಷರ ಸಂತನಿಗೆ ಒಲಿದ ದೇಶದ ಅತ್ಯುನ್ನತ ಗೌರವ ” ಪದ್ಮಶ್ರೀ”

    Published

    on

    ಕರಾವಳಿಯ ಅಕ್ಷರ ಸಂತನಿಗೆ ಒಲಿದ ದೇಶದ ಅತ್ಯುನ್ನತ ಗೌರವ ” ಪದ್ಮಶ್ರೀ”

    ಮಂಗಳೂರು : ಕಿತ್ತಳೆ ಹಣ್ಣು ಮಾರಿ ತನ್ನೂರಿಗೆ ಶಾಲೆ ಒದಗಿಸಿಕೊಟ್ಟ ‘ಅಕ್ಷರ ಸಂತ’ ಹರೇಕಳ ಹಾಜಬ್ಬರ ಸಾಧನೆಗೆ ಮತ್ತೊಂದು ಪ್ರಶಸ್ತಿ ಅರಸಿ ಬಂದಿದೆ.

    ಹೌದು, ಈ ಬಾರಿ ಅವರನ್ನ ಅರಸಿ ಬಂದಿರೋದು ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಶ್ರೀ ಪ್ರಶಸ್ತಿ ಅನ್ನೋದು ಜಿಲ್ಲೆಯ ಕೀರ್ತಿಯನ್ನೂ ಹೆಚ್ಚಿಸಿದೆ.

    ಸುಮಾರು 2 ದಶಕಗಳ ಕೊಣಾಜೆ ಸಮೀಪದ ನ್ಯೂಪಡ್ಪುವಿನಲ್ಲಿ ಶಾಲೆ ಕನಸು ಕಂಡಿದ್ದ ಹರೇಕಳ ಹಾಜಬ್ಬ ಆ ಕನಸನ್ನ ಈಡೇರಿಸಿದ್ದರು.

    2004ರಲ್ಲಿ ಕನ್ನಡ ಪತ್ರಿಕೆ ಹೊಸ ದಿಗಂತ ಮತ್ತು ವಿಜಯ ಕರ್ನಾಟಕ ವರದಿಗಾರರು ಮತ್ತು ಆಗಿನ ಈ ಟಿವಿ ಕನ್ನಡ ಸುದ್ದಿ ಮಾದ್ಯಮ ಹಾಜಬ್ಬ ಅವರನ್ನು ಹುಡುಕಿ ಹೋಗಿ ಅವರ ಸಾಧನೆಯನ್ನು ಕಣ್ಣಾರೆ ಕಂಡು ಸಚಿತ್ರ ವರದಿ ಮಾಡಿ ಬೆಳಕಿಗೆ ತಂದಿದ್ದರು.

    ಆ ಬಳಿಕ ಕನ್ನಡ ಪ್ರಭ ಪತ್ರಿಕೆ ಹಾಜಬ್ಬರನ್ನು `ವರ್ಷದ ವ್ಯಕ್ತಿ’ ಎಂದು ಪ್ರಶಸ್ತಿ ನೀಡಿ ಗುರುತಿಸುವ ಮೂಲಕ ಹಾಜಬ್ಬ ಅವರನ್ನು ಸಾಧನೆ ಮತ್ತು ಶ್ರಮವನ್ನು ಕೊಂಡಾಡಿತ್ತು.

    ಬಳಿಕ 2006 ರಲ್ಲಿ ಸಿಎನ್‍ಎನ್-ಐಬಿಎನ್ `ರಿಯಲ್ ಹೀರೋ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ.

    ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್, ನಗರದ ಹಳೇ ಸರ್ವಿಸ್‌ ಬಸ್‌ ನಿಲ್ದಾಣಗಳಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.

    ಕಿತ್ತಳೆ ಮಾರಾಟ ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು.

    ಈ ಹಿನ್ನೆಲೆಯಲ್ಲಿಯೇ ತನ್ನೂರಿನ ಮಕ್ಕಳಿಗೆ ತನ್ನ ಗತಿ ಬಾರದಿರಲೆಂದು ಶಾಲೆ ತೆರೆಯಲು ಕಚೇರಿಯಿಂದ ಕಚೇರಿಗೆ ಅಲೆದು ಶಾಲೆ ನಿರ್ಮಾಣ ಮಾಡಿದ್ದರು.

    ಅಲ್ಲದೇ ಇದೀಗ ಪಿಯು ಕಾಲೇಜಿನ ನಿರ್ಮಾಣದ ಕನಸೂ ಕಾಣುತ್ತಿರುವವರು. ಇದೀಗ ಇವರು ಶಿಕ್ಷಣ ಕ್ಷೇತ್ರದಲ್ಲಿ ನೀಡಿರುವ ಅಪರೂಪದ ಸೇವೆಯನ್ನ ಗುರುತಿಸಿ ಅವರನ್ನು ದೇಶದ ನಾಲ್ಕನೇ ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ಇದೀಗ ಇವರ ಪಾಲಿಗೆ ಪದ್ಮ ಶ್ರೀ ಗೌರವ ಸಂದಿದ್ದು, 71 ನೇ ಗಣರಾಜ್ಯೋತ್ಸವ ನಿಟ್ಟಿನಲ್ಲಿ ಆಯ್ಕೆಯಾದ 21 ಮಂದಿಯಲ್ಲಿ ಹರೇಕಳ ಹಾಜಬ್ಬರೂ ಸ್ಥಾನ ಪಡೆದಿರುವುದು ಕರಾವಳಿಯನ್ನು ಹೆಮ್ಮೆ ಪಡುವಂತೆ ಮಾಡಿದೆ.

    ಇದೀಗ ಅವರು ತನ್ನೂರಿನಲ್ಲಿ ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ.

    ವಿಡಿಯೋಗಾಗಿ..

    Click to comment

    Leave a Reply

    Your email address will not be published. Required fields are marked *

    LATEST NEWS

    ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

    Published

    on

    ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್‌ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.

    ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್‌.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.

     

    Continue Reading

    DAKSHINA KANNADA

    ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    Published

    on

    ಮಂಗಳೂರು : ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್‌ ಹಾಗೂ ಕಾಸರಗೋಡು ನಿವಾಸಿ ಕಲಾಮ್‌  ಬಂಧಿತರು.  ಈ ಪೈಕಿ ಸುಹೈಲ್ ಹಾಗೂ ಝುಬೈರ್‌ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್‌ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಬಂಧಿತರಿಂದ ನಕಲಿ ಪಾಸ್‌ ಪೋರ್ಟ್‌, ಮೊಬೈಲ್‌ ಫೋನ್‌, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್‌ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್‌ನ ಸಹಕಾರದಲ್ಲಿ ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಂಡು  ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.

    Continue Reading

    DAKSHINA KANNADA

    ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    Published

    on

    ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಮತ್ತು ಜೂನಿಯರ್ ಎಂಜಿನಿಯರ್ ನಾಗರಾಜ್‌ ಎಂಬುವವರನ್ನು ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ.
    ಗುತ್ತಿಗೆದಾರರಿಂದ ಲಂಚ ಸ್ವೀಕಾರ:
    ಪಿಡಬ್ಲ್ಯೂಡಿ ಕ್ಲಾಸ್‌ ವನ್‌ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಗುತ್ತಿಗೆ ವಹಿಸಿ ಕೆಲಸ ನಿರ್ವಹಿಸುತ್ತಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯವರು ದೂರು ನೀಡಿದ್ದಾರೆ. ಕಾಮಗಾರಿಯ ಮೊತ್ತ 9,77,154 ರೂಪಾಯಿಗಳ ಬಿಲ್ಲು ಮಂಜೂರಾತಿಯಾಗಿದ್ದು, ಜೂನಿಯ‌ರ್ ಎಂಜಿನಿಯರ್ ನಾಗರಾಜು ಅವರು 37,000 ರೂಪಾಯಿ ಹಾಗೂ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಅವರು 15,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪ್ರಕರಣ ದಾಖಲಾಗಿದ್ದು, ಜೂನಿಯರ್ ಎಂಜಿನಿಯರ್ ನಾಗರಾಜು ಅವರು ಮುಂಗಡವಾಗಿ 7000 ರೂ. ಹಣವನ್ನು ಗುತ್ತಿಗೆದಾರರಿಂದ ಪಡೆದುಕೊಂಡಿದ್ದರು.
    ಈ ದೂರಿನ ಹಿನ್ನೆಲೆಯಿಂದ ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಪಟ್ಟಣ ಪಂಚಾಯಿತಿ ದಾಳಿಗೆ ವ್ಯವಸ್ಥೆ ಮಾಡಿ ಆರೋಪಿಗಳಾದ ಜೂನಿಯರ್ ಎಂಜಿನಿಯರ್ ನಾಗರಾಜುರಿಂದ 30 ಸಾವಿರ ರೂಪಾಯಿ ಹಾಗೂ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿಯವರಿಂದ 15 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಅವರನ್ನು ಸೆರೆ ಹಿಡಿಯಲಾಗಿದೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಡಾ. ಉಪಾಧೀಕ್ಷಕರಾದ ಗಾನಾ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಮತ್ತು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

    ವಿಡಿಯೋ ನೋಡಿ:

    Continue Reading

    LATEST NEWS

    Trending