Connect with us

    BANTWAL

    ಪದ್ಮರಾಜ್‌, ಸತ್ಯಜಿತ್ ಸುರತ್ಕಲ್‌ರಿಂದ ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಲಾಬಿ : ಹರಿಕೃಷ್ಣ ಬಂಟ್ವಾಳ್‌ ಆರೋಪ

    Published

    on

    ಮಂಗಳೂರು :  ಕರಾವಳಿಯ ಇಬ್ಬರು ಬಿಲ್ಲವ ನಾಯಕರು ಎಂದು ಕರೆಸಿಕೊಳ್ಳುತ್ತಿರುವ ಇಬ್ಬರು ಕಾಂಗ್ರೆಸ್ ಪಕ್ಷದ ಟಿಕೆಟ್‌ ಆಕಾಂಕ್ಷಿಗಳಾಗಿದ್ದು, ನಿಗಮ ಸ್ಥಾಪನೆ ಮಾಡಿದ ವಿಚಾರದಲ್ಲೂ ಅಪಸ್ವರ ಎಬ್ಬಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌ ಅವರು ಪದ್ಮರಾಜ್‌ ಮತ್ತು ಸತ್ಯಜಿತ್‌ ಸುರತ್ಕಲ್ ವಿರುದ್ದ ಆರೋಪ ಮಾಡಿದ್ದಾರೆ.

     

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂರು ನಿಗಮ ಮಂಡಳಿಗಳನ್ನು ಹೊಸದಾಗಿ ಘೋಷಣೆ ಮಾಡಿದ್ದಾರೆ.

    ನಾರಾಯಣ ಗುರು ಅಭಿವೃದ್ಧಿ ನಿಗಮ, ಗಾಣಿಗರ ನಿಗಮ, ಹಡಪದ ನಿಗಮ ಹೀಗೆ ಮೂರು ನಿಗಮಗಳನ್ನು ಮಾಡಿದ್ದಾರೆ.

    ಕರಾವಳಿಯ ಇಬ್ಬರು ಬಿಲ್ಲವ ನಾಯಕರು ಎಂದು ಕರೆಸಿಕೊಳ್ಳುತ್ತಿರುವ ಇಬ್ಬರು ಕಾಂಗ್ರೆಸ್ ಪಕ್ಷದ ಟಿಕೆಟ್‌ ಆಕಾಂಕ್ಷಿಗಳಾಗಿದ್ದು, ನಿಗಮ ಸ್ಥಾಪನೆ ಮಾಡಿದ ವಿಚಾರದಲ್ಲೂ ಅಪಸ್ವರ ಎಬ್ಬಿಸಿದ್ದಾರೆ.

    ಕೊನೆಗೂ ನಾರಾಯಣ ಗುರು ಅಭಿವೃದ್ಧಿ ನಿಗಮ ಮಾಡಿದ್ದಕ್ಕೆ ಅವರು ಸ್ವಾಗತ ಮಾಡಬೇಕಾಗಿತ್ತು.

    ಆದರೆ ಅದನ್ನು ಮಾಡದೇ ಅವರು ತಪ್ಪು ಹುಡುಕುತ್ತಿದ್ದಾರೆ. ಈ ನಿಗಮ ಆರಂಭವಾಗಲು ಹಲವು ಮಂದಿ ನಾಯಕರು ಕೆಲಸ ಮಾಡಿದ್ದಾರೆ.

    ಅಭಿವೃದ್ಧಿ ನಿಗಮ ಸ್ಥಾಪನೆಗೆ ನಾಯಕರಾದ ತಿಮ್ಮೇಗೌಡರು, ವೇದ ಕುಮಾರ್‌, ಪ್ರಣವಾನಂದ ಸ್ವಾಮೀಜಿ, ನವೀನ್ ಸುವರ್ಣ ಅವರೂ ತುಂಬಾ ಕೆಲಸ ಮಾಡಿದ್ದಾರೆ.

    ಆದರೆ ನಿಜವಾಗಿಯೂ ನಿಗಮ ಮಾಡಲು ಪ್ರಯತ್ನಿಸಿದವರಿಗೂ ಮೊನ್ನೆ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಪದ್ಮರಾಜ್‌ ಮತ್ತು ಸತ್ಯಜಿತ್‌ ಸುರತ್ಕಲ್‌ಗೂ ಏನೂ ಸಂಬಂಧ ಇಲ್ಲ.

    ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದವರು ಏನೂ ಪ್ರಯತ್ನ ಮಾಡಿಲ್ಲ. ಇವತ್ತು ಘೋಷಣೆ ಮಾಡಿದಾಕ್ಷಣ ಅನುದಾನ ಕೊಡ್ಲಿಕ್ಕೆ ಆಗುವುದಿಲ್ಲ.

    ಅದಕ್ಕೊಂದು ನೀತಿನಿಯಮಗಳು ಅನ್ನೋದು ಇದೆ. ಅಪಸ್ವರ ಎತ್ತುವ ಇವರಿಗೆ ಈ ಹಿಂದೆ ಮಾತನಾಡಲು ಏಕೆ ಆಗಿಲ್ಲ ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ಬಿಜೆಪಿ ಸರಕಾರವೇ ಬಂದ ಬಳಿಕ ನಾರಾಯಣ ಗುರುಗಳಿಗೆ ಆದ್ಯತೆ ನೀಡುತ್ತಿದೆ. ಆದರೆ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ ಇಬ್ಬರೂ ಕಾಂಗ್ರೆಸ್ ಪಕ್ಷದ ಟಿಕೆಟ್‌ ಆಕಾಂಕ್ಷಿಗಳು.

    ಹಿಂಬಾಗಿಲಿನ ಮೂಲಕ ಟಿಕೆಟ್ ಪಡೆಯಲು ಇವರಿಬ್ಬರೂ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ, ರಣ್‌ದೀಪ್  ಗಣೇಶ್ ಹೊಸಬೆಟ್ಟು, ರಾಧಾಕೃಷ್ಣ ಮೊದಲಾದವರುಉಪಸ್ಥಿತರಿದ್ದರು.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending