ಮಂಗಳೂರು : ಉಸಿರಾಟದ ತೊಂದರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಗೆ ದಾಖಲಿಸಿದಾಗ ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ತಂತು ಶಸ್ತ್ರ ಚಿಕಿತ್ಸೆ ಮತ್ತು ಸಣ್ಣ ಮಟ್ಟಿನ ಹೃದಯದ ಚಿಕಿತ್ಸೆ ಕೂಡ ಮಾಡಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸಿದ ಅವರನ್ನು ಎರಡು ದಿನಗಳ ಹಿಂದೆ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು.
ಇದೀಗ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು ಅವರನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಕ್ಕೆ ಮೂಲತ್ವ ಫೌಂಡೇಶನ್ನ ಪ್ರಕಾಶ್ ಕೋಟ್ಯಾನ್, ಕಲ್ಪನಾ ಕೋಟ್ಯಾನ್ ಹಾಗೂ ಸೊಸೆ ಮಂಗಳಾ ಮತ್ತು ಮಂಜುನಾಥ್ ಅವರು ಕರೆದುಕೊಂಡು ಹೋಗಿದ್ದಾರೆ.