Connect with us

    BELTHANGADY

    ಬೆಳ್ತಂಗಡಿ ಶಾಸಕರನ್ನು ಬಿಡದ ಪಲ್ಲಕ್ಕಿ ವಿವಾದ: ತಪ್ಪು ಕಾಣಿಕೆ ಸಲ್ಲಿಸಿ ಕ್ಷಮೆಯಾಚನೆ

    Published

    on

    ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಇನ್ನೂ ಕೂಡ ಮೇಲ್ಜಾತಿ, ಕೀಳ್ಜಾತಿ ಎಂಬ ತಾರತಮ್ಯ ಜೀವಂತದಲ್ಲಿದ್ದಂತೆ ಕಾಣುತ್ತಿದೆ.

    ಶಾಸಕರೊಬ್ಬರು ಪಲ್ಲಕ್ಕಿ ಹೊತ್ತಿದ್ದ ವಿಚಾರ ವಿವಾದಕ್ಕೆ ಕಾರಣವಾಗಿದೆ. ಇದೀಗ ಪಲ್ಲಕ್ಕಿ ಹೊರಲು ಶಾಸಕರನ್ನು ಕರೆತಂದ ಯುವಕರು ದೇವಸ್ಥಾನದಲ್ಲಿ ತಪ್ಪು ಕಾಣಿಕೆ ಸಲ್ಲಿಸಿ ಕ್ಷಮೆ ಯಾಚಿಸಿದ್ದಾರೆ.


    ಕಾರ್ತಿಕ ಹುಣ್ಣಿಮೆಯ ದೀಪೋತ್ಸವದಂದು ಬೆಳ್ತಂಗಡಿ ಲಾಯಿಲ ವೆಂಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ನಡೆದಿತ್ತು.

    ಈ ನಿಮ್ಮಿತ್ತ ರಾತ್ರಿ ಪೇಟೆ ಸವಾರಿ, ಪಲ್ಲಕ್ಕಿ ಉತ್ಸವ ನಡೆದಿತ್ತು. ಪಲ್ಲಕ್ಕಿ ಉತ್ಸವ ಬೆಳ್ತಂಗಡಿ ನಗರದ ಮಧ್ಯಭಾಗ ತಲುಪುತ್ತಿದ್ದಂತೆ, ಸ್ಥಳೀಯ ಶಾಸಕ ಹರೀಶ್ ಪೂಂಜಾ ಅಲ್ಲಿಗೆ ತಲುಪಿದ್ದಾರೆ. ಈ ವೆಳೆ ಅವರು ದೇವರ ಪಲ್ಲಕ್ಕಿ ಕಡೆಗೆ ತೆರಳಿ ಕೈ ಮುಗಿದು ಪ್ರಸಾದ ಸ್ವೀಕರಿಸಿದ್ದಾರೆ.

    ಈ ಸಂದರ್ಭ ಅಲ್ಲೆ ಇದ್ದ ಕೆಲ ಯುವಕರು ದೇವರ ಪಲ್ಲಕ್ಕಿಗೆ ಹೆಗಲು ಕೊಡುವಂತೆ ಮನವಿ ಮಾಡಿದರು. ಅದರಂತೆ ಪಲ್ಲಕ್ಕಿಗೆ ಹೆಗಲು ಕೊಟ್ಟು ಶಾಸಕರು ಹೊತ್ತು ಸಾಗಿದರು.

    ಇದೀಗ ಈ ಘಟನೆ ವಿವಾದಕ್ಕೆ ಕಾರಣವಾಗಿದೆ. ಇನ್ನು ದೇವಸ್ಥಾನವೂ ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ್ದಾಗಿದ್ದು, ಗೌಡ ಸಾರಸ್ವತರಲ್ಲದೆ ಬೇರೆ ಜಾತಿಗೆ ಪಲ್ಲಕ್ಕಿ ಹೊರಲು ನಿಷೇಧ ಇದೆ ಎಂದು ಹೇಳಲಾಗ್ತಿದೆ.

    ಈ ಹಿನ್ನೆಲೆಯಲ್ಲಿ ಪಲ್ಲಕ್ಕಿ ಹೊರುವಂತೆ ಹೇಳಿದ ಯುವಕರನ್ನು ಕರೆದು ದೇವಸ್ಥಾನದಲ್ಲಿ ತಪ್ಪು ಕಾಣಿಕೆ ಒಪ್ಪಿಸಿ ಕ್ಷಮೆಯಾಚಿಸಿದ್ದಾರೆ.

    ಸದ್ಯ ಈ ಎಲ್ಲಾ ಘಟನಾವಳಿಗಳು 21ನೇ ಶತಮಾನದಲ್ಲೂ ನಡಿಯುತ್ತಿದ್ದು ನಾವೆಲ್ಲಾ ಒಂದೆ ಅನ್ನೋ ಮಾತು ಬರೀ ಧ್ವನಿವರ್ಧಕಗಳ ಮುಂದೆ ಚಾಲ್ತಿಯಲ್ಲಿದ್ದಂತೆ ಕಾಣುತ್ತಿದೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending