Connect with us

    LATEST NEWS

    ರಾಜ್ಯದಲ್ಲಿ ಜುಲೈ ಮೊದಲವಾರದಿಂದ ‘ಕಲಿ ಗಡಂಗ್‌’ ಆರಂಭ

    Published

    on

    ಕುಂದಾಪುರ: ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೀಡಾದ ಸಣ್ಣಪುಟ್ಟ ರೈತರಿಗೆ ಈ ಹೊಸ ಉದ್ಯಮ ಆಶಾದೀಪವಾಗುವ ಲಕ್ಷಣ ಗೋಚರಿಸುತ್ತಿದ್ದು, ಅದರಂತೆ ತಾಲೂಕಿನ ಜಪ್ತಿ ಎಂಬಲ್ಲಿ ಕಲ್ಪರಸ ತೆಗೆಯುವ ಸಂಸ್ಕರಣಾ ಘಟಕ ಆರಂಭಿಸಲಾಗಿದೆ. 14 ಯುವಕರಿಗೆ 45 ದಿನದ ತರಬೇತಿ ಈಗಾಗಲೇ ನೀಡಲಾಗಿದೆ. ತೆಂಗಿನ ಮರ ಹತ್ತುವುದು, ಹೊಂಬಾಳೆಗೆ ಕಟ್ಟು ಬಿಗಿದು ಐಸ್ ಬಾಕ್ಸ್ ಜೋಡಿಸುವುದು, ದಿನಕ್ಕೇರಡು ಬಾರಿ ಕಲ್ಪರಸ ತೆಗೆದು ಕೆಡದಂತೆ ಕಾಪಾಡುವ ತರಬೇತಿ ಕೊಡಲಾಗುತ್ತಿದೆ. ಜುಲೈ ಮೊದಲ ವಾರದಲ್ಲಿ ಅಧಿಕೃತವಾಗಿ ಕಲ್ಪರಸ ಸಿಗುವ ಔಟ್ ಲೆಟ್​ಗಳು ಆರಂಭವಾಗಿಲಿದೆ ಎಂದು ಉ.ಕಾ.ಸ ಸಂಸ್ಥೆಯ ನಿರ್ದೇಶಕರಾದ ಸತ್ಯನಾರಾಯಣ ಉಡುಪ ತಿಳಿಸಿದ್ದಾರೆ.

    ರೈತರೇ ಸೇರಿಕೊಂಡು ಈ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಭಾರತೀಯ ಕಿಸಾನ್ ಸಂಘ ನೇತೃತ್ವದಲ್ಲಿ ಉ.ಕಾ.ಸ ಎಂಬ ಸಂಸ್ಥೆಯನ್ನು ಕಲ್ಪರಸ ಮಾರುಕಟ್ಟೆ ನಿರ್ವಹಣೆಗಂತಲೇ ಹುಟ್ಟುಹಾಕಿದ್ದು, ಯುವ ಜನಾಂಗವನ್ನು ಈ ಉದ್ಯಮಕ್ಕೆ ಆಕರ್ಷಿಸಲಾಗುತ್ತಿದೆ. ಸದ್ಯ ಉಡುಪಿ ಜಿಲ್ಲೆಯಲ್ಲಿ 1,028 ರೈತರು ಸಂಸ್ಥೆಗೆ ಶೇರುದಾರರಾಗಿದ್ದು, ಮುಂದಿನ 5 ವರ್ಷದಲ್ಲಿ 5 ಸಾವಿರ ಕುಟುಂಬ ಸೇರ್ಪಡೆಯಾಗಲಿದೆ.

    ಒಂದು ರೈತ ಕುಟುಂಬಕ್ಕೆ 8 ತೆಂಗಿನ ಮರಗಳಿಂದ ಮಾತ್ರ ಕಲ್ಪರಸ ಸಂಗ್ರಹಿಸುವ ಅವಕಾಶವಿದೆ. ಒಂದು ಮರದಿಂದ ಪ್ರತಿದಿನ 2 ಲೀಟರ್ ಸಿಹಿ ರಸ ಇಳಿಯಲಿದೆ. ವರ್ಷಕ್ಕೆ 8 ಮರದಿಂದ 5,000 ಲೀಟರ್ ರಸ ಇಳಿದರೆ ವಾರ್ಷಿಕ ಸುಮಾರು 1 ಲಕ್ಷ ರೂಪಾಯಿ ಆದಾಯ ಸಿಗುತ್ತದೆ. ಕಲ್ಪರಸ ತೆಗೆಯುವ ತಜ್ಞ ಯುವಕರು ಲೀಟರ್​ಗೆ 25 ರೂಪಾಯಿ, ಪಿಎಫ್, ಇಎಸ್​ಐ ಸೌಲಭ್ಯ ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

    LATEST NEWS

    ಮೊಸಳೆ ತಲೆ ಬುರುಡೆ ಕಳ್ಳ ಸಾಗಣೆ ಯತ್ನ; ಕೆನಡಾ ಮೂಲದ ವ್ಯಕ್ತಿ ಅರೆಸ್ಟ್

    Published

    on

    ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

    ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.

    ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

     

    Continue Reading

    LATEST NEWS

    ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!

    Published

    on

    ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.

    ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.

    Continue Reading

    LATEST NEWS

    ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

    Published

    on

    ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.

    ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.

    ಇದನ್ನೂ ಓದಿ : ಫ್ರಿಡ್ಜ್‌ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ಗೊತ್ತಾ..?

    2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

     

    Continue Reading

    LATEST NEWS

    Trending