Sunday, November 27, 2022

ಕಾರ್ಕಳ: ಗುಂಡು ಹಾರಿಸಿಕೊಂಡು ಪಂಚಾಯತ್ ಸದಸ್ಯ ಜೀವಾಂತ್ಯ…

ಕಾರ್ಕಳ: ಪ್ರಗತಿಪರ ಕೃಷಿಕರೋರ್ವರು ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ತೆಳ್ಳಾರು ಎಂಬಲ್ಲಿ ನಡೆದಿದೆ.

ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ(63) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಡಿಪೋಗೆ ಹಾಲು ನೀಡಿ ಬಂದವರು ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾಸ್ಕರ್ ಹೆಗ್ಡೆ ಸಾವಯವ ಕೃಷಿಕರಾಗಿದ್ದರು. ತಮ್ಮ ಮೂರು ಎಕರೆ ಜಮೀನಿನಲ್ಲಿ ಸಾವಯವ ತರಕಾರಿ ಬೆಳೆದು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು.

ಆರ್ಥಿಕ ಸಮಸ್ಯೆಯಿಂದ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ಇವರು ದುರ್ಗಾ ಪಂಚಾಯತ್ ನ ಸದಸ್ಯರು, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.

ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...