Tuesday, October 19, 2021

ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ

ಪಂಜಾಬ್: ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತಮ್ಮ ಸಿಎಂ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಿತ್ತಾಟ ಹೆಚ್ಚಾಗುತ್ತಲೇ ಇದೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ನಡುವಿನ ಭಿನ್ನಾಭಿಪ್ರಾಯ ಶಮನವಾಗಿದೆ ಎನ್ನಲಾಗಿತ್ತು.

ಆದರೆ, ಪಂಜಾಬ್​ನಲ್ಲಿ ಉಂಟಾಗಿರುವ ಎರಡು ಬಣಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ದೊಡ್ಡ ಹೊಡೆತ ಬಿದ್ದಿದ್ದು, ಪಂಜಾಬ್​ನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಂಜಾಬ್​ನಲ್ಲಿ ನಾಯಕತ್ವ ಬದಲಾವಣೆಯ ಕೂಗು ಜೋರಾಗಿ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡಲು ಕಾಂಗ್ರೆಸ್ ನಾಯಕರು ಸೂಚಿಸಿದ್ದರು. ಅದರಂತೆ ರಾಜಭವನಕ್ಕೆ ತೆರಳಿದ ಅಮರೀಂದರ್ ಸಿಂಗ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಈ ಮೊದಲು ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಠಕ್ಕೂ ಮಣಿಯದ ಕಾಂಗ್ರೆಸ್ ಹೈಕಮಾಂಡ್ ನವಜೋತ್ ಸಿಂಗ್ ಸಿಧು ಅವರನ್ನೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಈಗಾಗಲೇ ಪಂಜಾಬ್ ಕಾಂಗ್ರೆಸ್ ಪಾಳಯದಲ್ಲಿ ಉರಿಯುತ್ತಿದ್ದ ಬೆಂಕಿಗೆ ತುಪ್ಪ ಸುರಿದಿತ್ತು.

ಬಳಿಕ ನವಜೋತ್ ಸಿಂಗ್ ಸಿಧು ಅಧಿಕಾರ ಸ್ವೀಕಾರ ಮಾಡುವಾಗ ಅಮರೀಂದರ್ ಸಿಂಗ್ ಕೂಡ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತೋರ್ಪಡಿಸಿಕೊಂಡಿದ್ದರು

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...